
27th April 2025
ಯಾದಗಿರಿ ಏ.26- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಹಯೋಗದಲ್ಲಿ ನಗರದಲ್ಲಿ
ಇದೇ ಏಪ್ರಿಲ್ 29 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭದ ಹಮ್ಮಿಕೊಳ್ಳುವ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಇದೇ ಏಪ್ರಿಲ್ 29 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಪದವಿ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಅವಶ್ಯಕ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಂದು ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮ ಉದ್ಘಾಟಿಸುವರು.ಅದರಂತೆ ಶಿಷ್ಟಾಚಾರದಂತೆ ಇತರ ಅತಿಥಿ ಗಣ್ಯರನ್ನು ಆಹ್ವಾನಿಸಲು, ಆಹ್ವಾನ ಪತ್ರಿಕೆ, ವೇದಿಕೆ ಸಿದ್ದತೆ.ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಕ್ಕೆ ಸಿದ್ದತೆ ಮಾಡಿಕೊಳ್ಳುವಂತೆ ಹಾಗೂ ನುರಿತ ಉಪನ್ಯಾಸಕರನ್ನು ಆಹ್ವಾನಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರಬೇಕು. ಸೂಕ್ತ ಪೋಲಿಸ್ ಬಂದೋಬಸ್ತ್, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ
ಮಾಡಲು ಅವರು ಸೂಚಿಸಿದರು. ಎಲ್ಲ ಸಿದ್ಧತೆ ವ್ಯವಸ್ಥಿತವಾಗಿ ಮಾಡಲು ವೇದಿಕೆ,ಊಟೋಪಹಾರ ಹಾಗೂ ಸನ್ಮಾನಕ್ಕೆ ವಿವಿಧ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಡಿವೈಎಸ್ಪಿ ಅರುಣಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರಣ್ಣಗೌಡ, ರಾಜ್ಯ ಸರ್ಕಾರಿ ನೌಕರರ ಸಂಘ,ಜಿಲ್ಲಾ ಘಟಕ, ಅಧ್ಯಕ್ಷ ರಾಯಪ್ಪ ಜಿ.ಹುಡೆದ, ಯುವ ಜನಸೇವಾ ಹಾಗೂ ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ,ಡಿಡಿಪಿಐ ಶ್ರೀ ಮುಧೋಳ ಸೇರಿದಂತೆ
ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಶ್ವ ಮಲೇರಿಯಾ ದಿನ ಜಾಗೃತಿ ಜಾಥಾ ಕಾರ್ಯಕ್ರಮ ಯಾವುದೇ ಜ್ವರವಿರಲಿ ರಕ್ತ ಪರಿಕ್ಷೆ ಮಾಡಿಸಿಕೊಳ್ಳಿ, ಸಂಪೂರ್ಣ ಚಿಕಿತ್ಸೆ ಪಡೆಯಿರಿ ಮಲೇರಿಯಾದಿಂದ ಮುಕ್ತರಾಗಿ