
27th April 2025
ಬಳ್ಳಾರಿ,ಏ.260ಜಿಲ್ಲೆಯಲ್ಲಿ 2024-25 ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲು ಈಗಾಗಲೇ ತೀರ್ಮಾನಿಸಲಾಗಿದ್ದು, ಪ್ರಸ್ತುತ ಇರುವ 10 ಖರೀದಿ ಕೇಂದ್ರಗಳ ಜೊತೆಗೆ 02 ಹೆಚ್ಚುವರಿ ನೋಂದಣಿ ಮತ್ತು ಖರೀದಿ ಕೇಂದ್ರ ತೆರೆಯಲಾಗಿದೆ.
*ಹೆಚ್ಚುವರಿ ರೈತ ನೋಂದಣಿ ಮತ್ತು ಖರೀದಿ ಕೇಂದ್ರ:*
ಸಿರುಗುಪ್ಪ ತಾಲ್ಲೂಕಿನ ಮುದ್ದಟನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಅರಳಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.
ಬೆAಬಲ ಬೆಲೆ ಯೋಜನೆ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಹಾಗೂ ತಾಲ್ಲೂಕಿನ ತಹಸಿಲ್ದಾರ್, ಕೃಷಿ ಅಧಿಕಾರಿ, ಎ.ಪಿ.ಎಂ.ಸಿ ಕಾರ್ಯದರ್ಶಿ, ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದ ಸೈಯದ್ ವಸೀಮ್ ಪಾಷ (ಮೊ.9449864453) ಗೆ ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಮಲೇರಿಯಾ ದಿನ ಜಾಗೃತಿ ಜಾಥಾ ಕಾರ್ಯಕ್ರಮ ಯಾವುದೇ ಜ್ವರವಿರಲಿ ರಕ್ತ ಪರಿಕ್ಷೆ ಮಾಡಿಸಿಕೊಳ್ಳಿ, ಸಂಪೂರ್ಣ ಚಿಕಿತ್ಸೆ ಪಡೆಯಿರಿ ಮಲೇರಿಯಾದಿಂದ ಮುಕ್ತರಾಗಿ