

10th May 2025

ಲಿಂಗಸೂಗೂರು ಮೇ 10:- ಮಸ್ಕಿ ತಾಲೂಕಿನ ಮೆದಿಕಿನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಯೋಗ ಶಾಲಾ ತಂತ್ರಜ್ಞ, ಮಂಜುನಾಥ ಇವರ ಅನುಮಾನಾಸ್ಪದ ಸಾವನ್ನು ಸೂಕ್ತ ತನಿಖೆ ಮಾಡಿ, ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಲಿಂಗಸೂಗೂರು ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಮೇ 03 ಶನಿವಾರದಂದು ಮಸ್ಕಿ ತಾಲೂಕಿನ ಮೆದಿಕಿನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಯೋಗ ಶಾಲಾ ತಂತ್ರಜ್ಞ,ಮಂಜುನಾಥ ರವರು ಕಾಣೆಯಾಗಿದ್ದರು. ಸೋಮವಾರ ಮಧ್ಯಾಹ್ನ ಅವರ ಮೃತದೇಹವು ಠಾಕೂರ ಲೇಔಟ್, ಮಸ್ಕಿಯಲ್ಲಿ ಅನುಮಾನಾಸ್ಪದವಾದ ರೀತಿಯಲ್ಲಿ ದೊರೆತಿದ್ದು, ಅವರ ಸಾವಿನ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಿ, ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು.
ಇಂತಹ ಪ್ರಕರಣಗಳಿಂದ ನೌಕರರು ಭಯದ ವಾತಾವರಣದಲ್ಲಿ ಕೆಲಸ ನಿರ್ವಹಿಸುವಂತಾಗಿದೆ. ಕಾರಣ ಪ್ರಕರಣದ ತನಿಖೆಯನ್ನು ನ್ಯಾಯ ಸಮ್ಮತ ರೀತಿಯಲ್ಲಿ ನಡೆಸಲು ಸಂಬಂಧಿಸಿದವರಿಗೆ ನಿರ್ದೇಶನ ನೀಡಬೇಕು ಆರೋಗ್ಯ ಇಲಾಖೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು, ಕೆಲವೊಂದು ಸಲ ಮಹಿಳಾ ಸಿಬ್ಬಂದಿಗಳ ಮೇಲೆ ಹಲ್ಲೆಗಳು, ಅವಾಚ್ಯ ಶಬ್ದಗಳಿಂದ ನಿಂದನೆ, ವೈದ್ಯರ ಮೇಲೆ ನಿಂದನೆಯಂತೆ ಪ್ರಕರಣಗಳು ಜರುಗಿದ ಉದಾಹರಣೆಗಳಿದ್ದು, ರಾತ್ರಿ ಪಾಳೆಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರಿಗೆ ಹಾಗೂ ಮಹಿಳಾ ಸಿಬ್ಬಂದಿಗಳಿಗೆ ರಕ್ಷಣೆಯಿಲ್ಲದಂತಾಗಿದೆ. ಕಾರಣ ಲಿಂಗಸುಗೂರು, ಆಸ್ಪತ್ರೆಯ ಮಹಿಳಾ ಸಿಬ್ಬಂದಿಗಳ ಹಾಗೂ ವೈದ್ಯರುಗಳ ಸೇವೆಯ ಹಿತದೃಷ್ಟಿಯಿಂದ ರಾತ್ರಿ ಪಾಳೆಯ ಭದ್ರತೆಗಾಗಿ ಪೋಲಿಸ್ ಸಿಬ್ಬಂದಿಯನ್ನು ನೇಮಕ ಮಾಡಬೇಕು ಹಾಗೂ ಉನ್ನತೀಕರಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೋಲಿಸ್ ಗಸ್ತು ಮಾಡುವಂತೆ ಸಂಬಂಧಿಸಿದವರಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಅಧ್ಯಕ್ಷ ಹಾಜಿಬಾಬು ಕಲ್ಯಾಣಿ, ರಾಮಕೃಷ್ಣ, ತಾವರೆಪ್ಪ, ಈರಪ್ಪ ಶಿರಸಂಗಿ, ಡಾ. ರುದ್ರಗೌಡ, ಪ್ರಾಣೇಶ್ ಜೋಶಿ,ಅಮರಣ್ಣ ಸಾಲಿ,ಇದ್ದರು

ಲಾರಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷರಾಗಿ ಚಲ್ಲಾ ಮಹೇಶ್ ಆಯ್ಕೆ ಡೀಸೆಲ್ ಬೆಲೆ ಏರಿಕೆ ವಿರುದ್ಧ ಲಾರಿ ಮಾಲೀಕರ ಹೋರಾಟಕ್ಕೆ ಭರವಸೆ ಲಾರಿ ಮಾಲೀಕರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಚಲ್ಲಾ ಮಹೇಶ್

ಜೀನ್ಸ್ ಪಾರ್ಕ್ ಭೂಸ್ವಾಧೀನದಲ್ಲಿ ರೈತರಿಗೆ ಅನ್ಯಾಯ: ಹೊನ್ನುರಸ್ವಾಮಿ ಕೆ.ಟಿ. ಆರೋಪ ನ್ಯಾಯಯುತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹ