

14th January 2025

ಮಲ್ಲಮ್ಮ ನುಡಿ ವಾರ್ತೆ
ಬಾಗಲಕೋಟೆ,ಜ.13-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜನೇವರಿ 19 ರಂದು ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30ಕ್ಕೆ ಮಹಾಯೋಗಿ ವೇಮನರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಜಿಲ್ಲಾಡಳಿತ ಭವನದಿಂದ ಅಂಬೇಡ್ಕರ ಭವನದವರೆಗೆ ಮೆರವಣಿಗೆ ನಡೆಯಲಿದೆ.
ನಂತರ 11 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಚ್.ವಾಯ್.ಮೇಟಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಜೆ.ಟಿ.ಪಾಟೀಲ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ.

ಗಾಲಿ ಲಕ್ಷ್ಮೀ ಅರುಣ ಜನ್ಮದಿನ: ಅನುಗ್ರಹ ಆಶ್ರಮದಲ್ಲಿ ಅನ್ನದಾನ, ಮಕ್ಕಳಿಗೆ ಸಿಹಿ ಹಂಚಿ ಸಂಭ್ರಮ