

11th May 2025
-1746963497733.jpeg)
ಕಲಬುರಗಿ,ಮೇ.೧೦-ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಈಗಾಗಲೆ ೫,೫೩೦ ಶಿಕ್ಷಕರ ನೇಮಕಾತಿಯಾಗಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಾರಣ ವಿಳಂಬವಾಗಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಶನಿವಾರ ಕಲಬುರಗಿಯ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಸ್.ಎಲ್. ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆಯೆ ಪ್ರಮುಖ ಕಾರಣ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಒಳ ಮೀಸಲಾತಿ ಸಮೀಕ್ಷೆ ನಂತರ ಶಿಕ್ಷಕರ ನೇಮಕಾತಿಯಾಗಿ ಸಮಸ್ಯೆ ಬಗೆಹರಿಯಲಿದೆ. ಖಾಯಂ ಶಿಕ್ಷಕರು ಇಲ್ಲದಕ್ಕಾಗಿಯೇ ಅತಿಥಿ ಶಿಕ್ಷಕರ ನೇಮಕಾತಿಯಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರಸಕ್ತ ೨೦೨೫-೨೬ನೇ ಆರ್ಥಿಕ ಸಾಲಿಗೆ ೫,೦೦೦ ಕೋಟಿ ರೂ. ಅನುದಾನ ನೀಡಿದ್ದು, ಈ ಅನುದಾನ ಸಮರ್ಪಕ ಖರ್ಚು ಮಾಡಲು ಕೂಡಲೆ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನ ತರಲು ಕೆಲಸ ಕಾರ್ಯಗಳಿಗೆ ಚಾಲನೆ ನೀಡಲು ಇಂದು ಮಂಡಳಿ ಸಭೆ ಕರೆಯಲಾಗಿದೆ ಎಂದರು.
ಇನ್ನು ಮಂಡಳಿಯಿAದಲೆ ಪ್ರತ್ಯೇಕ ಇಂಜಿನೀಯರಿAಗ್ ವಿಂಗ್ ಸ್ಥಾಪನೆ ಕುರಿತಂತೆ ಮಾತನಾಡಿದ ಸಚಿವರು ಮಂಡಳಿಯಿAದ ವಿಂಗ್ ಅದು ಮತ್ತೊಂದು ಇಲಾಖೆಯಾಗಿ ಹೊರಹೊಮ್ಮುತ್ತೆ ವಿನ: ಸಮಸ್ಯೆಗೆ ಅದುವೇ ಮುಕ್ತಿ ಅಲ್ಲ. ಪ್ರಸ್ತುತ ಇರುವ ಲೋಕೋಪಯೋಗಿ, ಅರ್.ಡಿ.ಪಿ.ರ್., ನಿರ್ಮಿತಿ ಕೇಂದ್ರ, ಲ್ಯಾಂಡ್ ಆರ್ಮಿ ಸೇರಿದಂತೆ ಎಲ್ಲಾ ಇಲಾಖೆಗಳನ್ನು ಬಳಸಿಕೊಂಡಲ್ಲಿ ಕೆಲಸದ ವೇಗ ಹೆಚ್ಚಲಿದೆ. ಹೀಗಾಗಿ ಎಲ್ಲಾ ಇಲಾಖೆಗಳಿಗೆ ಕೆಲಸ ಹಂಚಲಾಗುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ, ಕೆ.ಕೆ.ಅರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕ ತಿಪ್ಪಣ್ಣಪ್ಪ ಕಮಕನೂರ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣು ಮೋದಿ, ಮುಖಂಡ ನೀಲಕಂಠ ಮೂಲಗೆ ಇದ್ದರು.

ದಾವಣಗೆರೆ ಜಿಲ್ಲಾ ಪ್ರಪ್ರಥಮ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ-2026: ನಾಲ್ಕನೇ ಪೂರ್ವಭಾವಿ ಸಭೆ ಯಶಸ್ವಿ

ಬಿಜೆಪಿ ಕೊಪ್ಪಳ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ನೇಮಕ- ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ ಪಟ್ಟಿ ಬಿಡುಗಡೆ

ಬೆಳಗಾವಿ : ಉತ್ತರ ವಿಧಾನಸಭಾ ಕ್ಷೇತ್ರದ ಆಟೋನಗರ ಹಾಗೂ ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ