

13th May 2025

ಬೀದರ. ಮೇ. 12 :- ಸಮಾಜದಲ್ಲಿ ಶಾಂತಿ, ಸು-ವ್ಯವಸ್ಥೆ ಮತ್ತು ಅಪರಾಧಗಳನ್ನು ತಡೆಯುವಲ್ಲಿ ಜಿಲ್ಲೆಯ ರೌಡಿ ಜನರ ಮಟ್ಟ ಹಾಕುವುದು ಅತೀ ಅವಶ್ಯಕ ಮತ್ತು ಯಾವುದೇ ರೀತಿಯ ಕಳ್ಳತನ ಪ್ರಕರಣಗಳು ಜರುಗದಂತೆ ಎಮ್.ಓ.ಬಿ ಜನರ ಮೇಲೆ ನಿಗಾ ವಹಿಸುವುದು ಅತೀ ಅವಶ್ಯಕವಾಗಿರುತ್ತದೆ. ಈ ನಿಟ್ಟಿನಲ್ಲಿ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ ಬೀದರ. ರವರು ಜಿಲ್ಲೆಯನ್ನು ಅಪರಾಧ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲೆಯಲ್ಲಿರುವ ರೌಡಿ ಮತ್ತು ಎಮ್.ಓ.ಬಿ ಜನರ ಮೇಲೆ ನಿಗಾ ವಹಿಸುವ ಸಲುವಾಗಿ ಬೀದರ ಜಿಲ್ಲಾ ಪೊಲೀಸ್ ಕಛೇರಿ ಕವಾಯತು ಮೈದಾನದಲ್ಲಿ ರೌಢಿ ಜನರ ಕವಾಯತು ನಡೆಸಿ, ಯಾರಾದರೂ ಸಮಾಜ ಘಾತಕ, ಅಪರಾಧಿಕ ಚಟುವಟಿಕೆಯಲ್ಲಿ ಭಾಗಿಯಾದಲ್ಲಿ ಅಂತವರಿಗೆ ಕಟ್ಟೆಚ್ಚರಿಸಲಾಗಿದೆ.
ಬೀದರ ಜಿಲ್ಲೆಯಲ್ಲಿ ಅಪರಾಧ ಮುಕ್ತ ಮತ್ತು ಅಪರಾಧ ನಿಯಂತ್ರಣಕ್ಕಾಗಿ ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಮುಂದುವರೆಯುತ್ತದೆ.

ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನೆಲೆಸಿದ ರಾಷ್ಟ್ರಕವಿ ನಿವಾಸ "ಗಿಳಿವಿಂಡು "ಸಮಗ್ರ ಅಭಿವೃದ್ದಿಗಾಗಿ ಕೇರಳ - ಕರ್ನಾಟಕ ಮುಖ್ಯ ಮಂತ್ರಿಯವರಲ್ಲಿಗೆ ನಿಯೋಗ ಬೇಟಿಗೆ ನಿರ್ಧಾರ.

ಕಂಪ್ಲಿ ಶಾಸಕ ಜೆ.ಎನ್. ಗಣೇಶ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಬೃಹತ್ ಪಾದಯಾತ್ರೆ