

30th December 2024

ಯಾದಗಿರಿ ..
ವರದಿ. ಸುಧೀರ್ ಕೋಟಿ ಎಸ್. ಕೆ.
ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ಪತ್ರ
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ
ನಿವಾಸಿಯಾದ ಸಚಿನ್ ಪಾಂಚಾಳ ರವರು ಡಿಸೆಂಬರ್ 26 ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ಅತ್ಯಂತ ದುರದೃಷ್ಟಕರ ಹಾಗೂ ಖೇದದ ಸಂಗತಿಯಾಗಿರುತ್ತದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಸಂಶಯ ಮೂಡುವಂತಹ ಹಲವು ವಿಷಯಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ, ಸತ್ಯಾಂಶ ತಿಳಿಯಲು ಸ್ವತಂತ್ರ ತನಿಖಾ ಸಂಸ್ಥೆಯಾದ ಅಪರಾಧ ತನಿಖಾ ವಿಭಾಗಕ್ಕೆ (ಸಿ.ಐ.ಡಿ.) ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಪತ್ರ ಬರೆದು ಮನವಿ ಮಾಡಿದ್ದಾರೆ.
ಇನ್ನೂ . ಯಾದಗಿರಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಬೀದರ್ ನಲ್ಲಿ ನಡೆದ ಸಚಿನ್ ಪಂಚಾಳ್ ತುಂಗಾವ ಕಟ್ಟಿ ಅವರ ಆತ್ಮಹತ್ಯೆ ಪ್ರಕರಣವನ್ನು . ಸಿಬಿಐಗೆ ಒಪ್ಪಿಸಿ ಇನ್ನು ಶಮಿಲ್ ಆದವರ ಮೇಲೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಅಧ್ಯಕ್ಷ ಮಹೇಶ್ ತಡಿಬಿಡಿ ಸುದ್ದಿಗಾರರೊಂದಿಗೆ ಮಾತನಾಡಿ ದಿನಾಂಕ 2.01.2025 ರಂದು ವಿಶ್ವಕರ್ಮ ಸಮಾಜದ ಎಲ್ಲಾ ಪದಾಧಿಕಾರಿಗಳು ಮುಖಂಡರು ವಿಶ್ವಕರ್ಮದ ರೋಹಿತ್ ವೈ ಕೊಲ್ಲೂರು ಸ್ವಾಮೀಜಿ ಹಾಗೂ ರವೀಂದ್ರ ಸ್ವಾಮೀಜಿ ಕುಮಾರ್ ಮಹಾಸ್ವಾಮಿಗಳು ಸೇರಿದಂತೆ ಪ್ರತಿಭಟನೆಯಲ್ಲಿ 500ಕ್ಕೂ ಹೆಚ್ಚು ಜನ ಸೇರಲಿದ್ದಾರೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾಧ್ಯಕ್ಷ ಮಹೇಶ್ ತಡಿಬಿಡಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ .
02-01-2025 ರಂದು ಮಧ್ಯಾಹ್ನ 12 ರಿಂದ
ಪ್ರತಿಭಟನೆ ನಡೆಯಲಿರುವ ಸ್ಥಳ ವಿಶ್ವಕರ್ಮ ವೃತದಿಂದ ಸುಭಾಷ್ ವೃತ್ತದ ವರೆಗೆ ತೆರಳಿ ಪ್ರತಿಭಟನೆ ಮಾಡಿ ಸ್ಥಳದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ