

19th January 2025

*ಗುರುಮಿಠಕಲ್ ಮತಕ್ಷೇತ್ರದ ಶಾಸಕರಾದ ಶ್ರೀ ಶರಣಗೌಡ ಕಂದಕೂರ ಅವರ ದೌರ್ಜನ್ಯ ಹಾಗೂ ಕಿರುಕುಳ ತಡೆದುಕೊಳ್ಳಲಾಗದೇ ರಾಷ್ಟ್ರಪತಿಯವರಿಗೆ, ರಾಜ್ಯಪಾಲರಿಗೆ, ಮುಖ್ಯಮಂತ್ರಿಯವರಿಗೆ, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಯವರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದಯಾಮರಣವನ್ನು ನೀಡುವಂತೆ ಕೋರಿ ಮನವಿ ಸಲ್ಲಿಕೆ*
ಗುರುಮಠಕಲ್ ಕ್ಷೇತ್ರದ ಶಾಸಕರಾದ ಶರಣಗೌಡ ಕಂದಕೂರ ಅವರು ನನಗೆ ದೌರ್ಜನ್ಯ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೀರಲಿಂಗಪ್ಪ ಕಿಲ್ಲನಕೇರಾ ಎನ್ನುವ ಯುವಕ ಯಾದಗಿರಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮತ್ತು ರಾಜ್ಯಪಾಲರಿಗೆ, ದಯಾಮರಣವನ್ನು ಕೋರಿ ಮನವಿ ಪತ್ರ ಸಲ್ಲಿಸಿದ್ದಾರೆ.
ಗುರುಮಠಕಲ್ ಕ್ಷೇತ್ರದ ಶಾಸಕರಾದ ಶರಣಗೌಡ ಕಂದಕೂರ ಅವರ ದೌರ್ಜನ್ಯ ಹಾಗೂ ಮಾನಸಿಕ ಕಿರುಕುಳ ತಡೆದುಕೊಳ್ಳಲಾಗದೇ ಇರುವ ನನಗೆ ದಯಾಮರಣವನ್ನು ನೀಡುವಂತೆ ತಮ್ಮಲ್ಲಿ ಕೋರುವ ಕುರಿತು.
ಗುರುಮಠಕಲ್ ಮತಕೇತ್ರದ ಶಾಸಕರಾದ ಶ್ರೀ ಶರಣಗೌಡ ಕಂದಕೂರ ಅವರು ನನ್ನ ಊರಿನ ರಾಜಶೇಖರ ಗೌಡ ಮತ್ತು ಮಲ್ಲಿಕಾರ್ಜುನ ಮಾಲಿಪಾಟೀಲ್ ಅವರಿಂದ ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರಿಂದ ಸೈದಾಪೂರ ಸ್ಟೇಷನನಲ್ಲಿ ನನ್ನ ಮೇಲೆ ಸುಳ್ಳು ದೂರು ನೀಡಿದ್ದಾರೆ, ನಾನು ವಾರ್ತಾ ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದು ಆಫೀಸ್ ನ ಅಧಿಕಾರಿಗಳಿಗೆ ನನ್ನನ್ನು ಕೆಲಸದಿಂದ ತೆಗೆಯದಿದ್ದರೆ ನಿಮ್ಮ ಆಫೀಸ್ ಮುಂದೆ ಪ್ರತಿಭಟನೆ ಮಾಡ್ತೀನಿ ಹಾಗೂ ವಿಧಾನಸೌಧದಲ್ಲಿ ಹಕ್ಕುಚ್ಯುತಿ ಮಂಡನೆ ಮಾಡ್ತೀನಿ, ನನ್ನ ಪವರ್ ಏನೆಂದು ತೋರಿಸುತ್ತೇನೆ ಎಂದು ವಾರ್ತಾ ಅಧಿಕಾರಿಗಳಿಗೆ ಧಮ್ಕಿ ಹಾಕಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳ ಮುಖಾಂತರ ನನ್ನನ್ನು ಕೆಲಸದಿಂದ ತೆಗೆಸಲು ಹುನ್ನಾರ ನಡೆಸಿದ್ದಾರೆ,
ನಮ್ಮ ಊರಿನ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಬಿಡುಗಡೆಯಾದ 3 ಲಕ್ಷದ 98 ಸಾವಿರ ರೂಪಾಯಿಗಳ ಅನುದಾನಕ್ಕೆ ತಮ್ಮ ಕಾರ್ಯಕರ್ತರಿಂದ ಗ್ರಾಮಸ್ಥರ ಪೋರ್ಜರಿ ಸಹಿ ಮಾಡಿಸಿ ಬಿಲ್ ಮಾಡದಂತೆ ನಿರ್ಮೀತಿ ಕೇಂದ್ರದ ಅಧಿಕಾರಿಗಳಿಗೆ ತಡೆ ಹಿಡಿದಿದ್ದಾರೆ. ದೇವಸ್ಥಾನ ನಿರ್ಮಾಣಕ್ಕಾಗಿ ಸಾಲ ಮಾಡಿದ್ದೇನೆ.
ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿ ಇರುವಾಗ ಉದ್ದೇಶ ಪೂರ್ವಕವಾಗಿ ಕಾಮಗಾರಿ ಬದಲಾವಣೆ ಮಾಡಿ ಅನುದಾನ ಬೇರೆ ಊರಿಗೆ ಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ಮೀತಿ ಕೇಂದ್ರದವರಿಗೆ ಶಾಸಕರು ಪತ್ರ ಬರೆದಿದ್ದಾರೆ. ಶಾಸಕರು ಅನುಮತಿ ಇಲ್ಲದೇ ನಾವು ಬಿಲ್ ಮಾಡಲು ಸಾಧ್ಯವಿಲ್ಲ ಎಂದು ನಿರ್ಮೀತಿ ಕೇಂದ್ರದ ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗೆ ಹಲವಾರು ರೀತಿಯಲ್ಲಿ ನನಗೆ ಮಾನಸಿಕ ಹಿಂಸೆ ನೀಡಿ ಮುಂದೆ ನನ್ನ ಸಾವಿಗೆ ಶಾಸಕರು ಕಾರಣವಾಗುತ್ತಿದ್ದಾರೆ.
ಶಾಸಕ ಶರಣಗೌಡ ಕಂದಕೂರ ಅವರು ಜಿಲ್ಲಾಮಟ್ಟದ ಅಧಿಕಾರಿಗಳಿಗೂ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಹೀಗೆ ಅಧಿಕಾರ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಲು ಪ್ರಯತ್ನಿಸುತ್ತಿದ್ದಾರೆ.
ನಮ್ಮ ಊರಿನಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಲೀಡ್ ಬರಲಿಲ್ಲ ಎಂಬ ಕಾರಣಕ್ಕೆ ಈ ರೀತಿಯ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಶಾಸಕರಿಗೆ ತೇಜೋವಧೆ ಮಾಡಿಸಿದ್ದಾನೆ ಎಂದು ಸುಳ್ಳು ಸಾಕ್ಷಿಯ ಆಧಾರಗಳನ್ನು ಸೃಷ್ಟಿಸಿ ನನ್ನ ಮೇಲೆ ಕೇಸ್ ದಾಖಲಿಸಲು ಪ್ರಯತ್ನಪಡುತ್ತಿದ್ದಾರೆ.
ತಮ್ಮ ಕಾರ್ಯಕರ್ತರಿಂದ ನನ್ನ ಮೇಲೆ ಸುಖಾಸುಮ್ಮನೆ ಉದ್ದೇಶ ಪೂರ್ವಕವಾಗಿ ಜಗಳ ಮಾಡಿ ಹಲ್ಲೆ ಮಾಡಿಸಲು ಪ್ರೇರೇಪಿಸುತ್ತಿದ್ದಾರೆ. ಮುಂದೆ ನನಗೇನಾದರೂ ಜೀವಕ್ಕೆ ಅಪಾಯವಾದರೆ ಶಾಸಕರಾದ ಶರಣಗೌಡ ಕಂದಕೂರ ಅವರೇ ನೇರ ಹೊಣೆಗಾರರು ಆಗಿರುತ್ತಾರೆ. ಹೀಗಾಗಿ ದೇವಸ್ಥಾನ ನಿರ್ಮಿಸುವುದಕ್ಕಾಗಿ ಸಾಲ ಮಾಡಿದ್ದರಿಂದ ಅನುದಾನದ ಬಿಲ್ ತಡೆ ಹಿಡಿದಿದ್ದರಿಂದ ಸಾಲಗಾರನಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇನೆ.
ಸಾಲ ಕೊಟ್ಟವರಿಗೆ ಮುಖ ತೋರಿಸಲು ಆಗುತ್ತಿಲ್ಲ. ಅಷ್ಷೇ ಅಲ್ಲದೇ ಕೆಲಸದಿಂದ ನನ್ನನ್ನು ತೆಗೆಸಿ ಬೀದಿಪಾಲು ಮಾಡುತ್ತಿದ್ದಾರೆ ಹೀಗಾಗಿ ನನಗೆ ದಯಾಮರಣ ಕೊಟ್ಟು ಶಾಸಕರ ಮಾನಸಿಕ ಕಿರುಕುಳದಿಂದ ಮುಕ್ತಿ ಕೊಡಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾನೆ.
ಬೀರಲಿಂಗಪ್ಪ ಕಿಲ್ಲನಕೇರಾ
ತಾ.ಜಿ.ಯಾದಗಿರಿ
8722276167

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ