ಕರ್ನಾಟಕ ರಾಜ್ಯದಲ್ಲಿ 250 ಅಡಿ ಎತ್ತರದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಬೇಕು ಈಗಾಗಲೇ
ತೆಲಂಗಾಣ ರಾಜ್ಯದಲ್ಲಿ 125 ಅಡಿ ಎತ್ತರದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಮಾಡಿರುತ್ತಾರೆ
ಹಾಗೂ ಆಂದ್ರ ಪ್ರದೇಶದ ವಿಜಯವಾಡದಲ್ಲಿ 205 ಅಡಿ ಎತ್ತರದ ಡಾ|| ಬಿ.ಆರ್. ಅಂಬೇಡ್ಕರವರ ಪ್ರತಿಮೆ ಅನಾವರಣ ಮಾಡಿದ ಅಂದ ಪ್ರದೇಶದ ಅದೇ ರೀತಿ
ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ, ಬರುವುದಕ್ಕೆ ರಾಜ್ಯದ ಎಲ್ಲಾ ಹಿಂದುಳಿದ ಸಮುದಾಯ ಮಹತ್ವದ ಪಾತ್ರ ವಹಿಸಿದೆ. ಇವೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರವರ 250 ಅಡಿ ಎತ್ತರದ ಪ್ರತಿಮೆ ಬೆಂಗಳೂರಿನಲ್ಲಿ ಪ್ರತಿಮೆ ನಿರ್ಮಾಣ ಮಾಡಬೇಕು.
ಸುಮಾರು 1 ವರ್ಷದಿಂದ ರಾಜ್ಯವ್ಯಾಪ್ತಿ ಕರ್ನಾಟಕ ಸರ್ಕಾರದ 30 ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ಭೀಮ್ ಸೇನೆ ಸಂಘಟನೆಯ ಜಿಲ್ಲಾದ್ಯಕ್ಷರುಗಳು, ಪದಾಧಿಕಾರಿಗಳು ಮತ್ತು ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ರಾಮಲಿಂಗಯ್ಯ ಹಾಗು ರಾಜ್ಯ ಮುಖಂಡರ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಸೇರಿದಂತೆ ಸರ್ಕಾರದ ಹಲವು ಸಚಿವರಿಗೆ ಹಾಗು ಶಾಸಕರ ಗಮನಕ್ಕೆ ಹಾಗು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ ಕರ್ನಾಟಕದ ಮುಂದೆ ಬರುವ ವಿಧಾನಸಭೆ ಬಜೆಟ್ ಮಂಡನೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರವರ 250 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಿ ಅದರಲ್ಲಿ ಬಾಬಾ ಸಾಹೇಬರ ಜೀವನ ಚರಿತ್ರೆಯ ಪ್ರಸ್ತುತ ಪಡಿಸುವ ಮ್ಯೂಸಿಯಂ ನಿರ್ಮಾಣ ಮಾಡಿ ಇಂದಿನ ಹಾಗೂ ಭವಿಷ್ಯದ ವಿದ್ಯಾರ್ಥಿಗಳಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನ ಚರಿತ್ರೆ ಇನ್ನು ಹೆಚ್ಚಾಗಿ ತಿಳಿದುಕೊಳ್ಳುವಲ್ಲಿ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.