
21st August 2024
ದಾವಣಗೆರೆ ತಾಲೂಕಿನ ಕೋಡಿಹಳ್ಳಿ ಕ್ಯಾಂಪ್'ನಲ್ಲಿ ಮಳೆಗೆ ಮನೆ ಬಿದ್ದು ಮೂವರು ಆಸ್ಪತ್ರೆಗೆ: ಆರೋಗ್ಯ ವಿಚಾರಿಸಿದ ಶಾಸಕ ಕೆ.ಎಸ್. ಬಸವಂತಪ್ಪ
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ದಾವಣಗೆರೆ ತಾಲೂಕಿನ ಕೋಡಿಹಳ್ಳಿ ಕ್ಯಾಂಪ್ ನಲ್ಲಿ ಮಂಗಳವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದ ಮನೆ ಬಿದ್ದು ಮೂವರು ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಪ್ರದೇಶದ ಮೂಲದ ಸುಕುಮಾರ್, ಕೃಷ್ಣ, ಮಂಜಿತ್ ಗಾಯಗೊಂಡವರು. ಇವರು ಕೂಲಿ ಕಾರ್ಮಿಕರಾಗಿದ್ದು, ಭತ್ತದ ನಾಟಿ ಮಾಡಲು ಬಂದು ಕೋಡಿಹಳ್ಳಿ ಕ್ಯಾಂಪ್ ನಲ್ಲಿ ಮನೆ ಬಾಡಿಗೆ ಪಡೆದು ವಾಸವಾಗಿದ್ದರು. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮನೆ ಬಿದ್ದು ಈ ಘಟನೆ ನಡೆದಿದೆ.
ಈ ಸುದ್ದಿ ತಿಳಿದ ತಕ್ಷಣವೇ ಮಂಗಳವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ ಸಹಾಯವಾಣಿ-೧೯೩೦ ಹಾಗೂ ವೆಬ್ಬಾಟ್ ಉನ್ನತೀಕರಣ
ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಅಲೆಮಾರಿ ಸಮುದಾಯ ಜನರಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಲಾಗಿದೆ ಜಾಗೃತಿ ಮೂಡಿಸಿ ಸವಲತ್ತು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು -ಪಲ್ಲವಿ ಜಿ.