
12th January 2025
ಸ್ವಾಮಿ ವಿವೇಕಾನಂದರ ಜಯಂತಿ
ಗದಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರವಿವಾರ ಸ್ವಾಮಿ ವಿವೇಕಾನಂದ ಜಯಂತಿಯನ್ನು ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಸಾಂಕೇತಿಕವಾಗಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವುದರ ಮೂಲಕ ಸರಳವಾಗಿ ಆಚರಿಸಲಾಯಿತು.
ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ವೀರ ಸನ್ಯಾಸಿ, ಯುವ ಜನರ ಸ್ಪೂರ್ತಿಯ ಚಿಲುಮೆ, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.
ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ ಎಸ್ ಪಾಟೀಲ, ಮಾಜಿ ಶಾಸಕ ಡಿ ಆರ್ ಪಾಟೀಲ, ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ ಬಿ ಅಸೋಟಿ, ತಾಲೂಕ ಅಧ್ಯಕ್ಷ ಅಶೋಕ್ ಮಂದಾಲಿ, ಸಿದ್ದು ಪಾಟೀಲ, ಎಸ್ ಎನ್ ಬಳ್ಳಾರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದ ಗೌಡ ಪಾಟೀಲ ಉಪಸ್ಥಿತರಿದ್ದರು.
ಗದಗ ರಾಮಕೃಷ್ಣ ಆಶ್ರಮದ ಜಗನ್ನಾತಾನಂದ ಶ್ರೀಗಳು ಸಾನಿಧ್ಯ ವಹಿಸಿದ್ದರು.
ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್ ಎಸ್ ಬುರಡಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಇದ್ದರು.
undefined
*‘ನಮ್ಮ ಕ್ಲಿನಿಕ್’ ಉದ್ಘಾಟಿಸಿದ ಶಾಸಕ ನಾರಾ ಭರತ್ ರೆಡ್ಡಿ* *ಸಾಮಾನ್ಯ ರೋಗಿಗಳಿಗೆ ಸ್ಥಳೀಯವಾಗಿ ಚಿಕಿತ್ಸೆ ಪಡೆಯಲು ಸಹಕಾರಿ*
ಕೆಎಂಎಫ್ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷರಾಗಿ ಎನ್.ಸತ್ಯನಾರಾಯಣ ಅವಿರೋಧ ಆಯ್ಕೆ