7th October 2024

ಶಿವಮೊಗ್ಗ :-ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಹಯೋಗದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಜನಪದ ಗೀತೆಗಳ ವೃಂದಗಾಯನ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ಅಕ್ಟೋಬರ್ ೬ ರಂದು ಭಾನುವಾರ ಮಧ್ಯಾಹ್ನ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಡಿ.ವಿ.ಎಸ್. ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಕೊಳಲೆ ರುದ್ರಪ್ಪಗೌಡರು ದೀಪಬೆಳಗಿಸಿ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಎಸ್. ಸಿ. ಐ. ಶಿವಮೊಗ್ಗ ಭಾವನ ಶರಾವತಿ ನಗರ ಅಧ್ಯಕ್ಷರಾದ ಶಶಿಕಲಾ ಕೆ. ಎಸ್. ಸಾಹಿತಿಗಳು ಚಿಂತಕರಾದ ಡಾ. ಎಚ್. ಟಿ. ಕೃಷ್ಣಮೂರ್ತಿ, ಕಸಾಪ ಕೋಶಾಧ್ಯಕ್ಷರಾದ ಎಂ. ನವೀನ್ ಕುಮಾರ್,ಕಜಾಪ ಉಪಾಧ್ಯಕ್ಷರಾದ ಧರ್ಮೋಜಿರಾವ್, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಹಿಳ್ಳೋಡಿ, ಸೋಮಿನಕಟ್ಟಿ, ಪರಶುರಾಮ ಮಟ್ಟೇರ, ಕಸಾಪ ತಾಲ್ಲೂಕು ಅಧ್ಯಕ್ಷರಾದ ಮಹಾದೇವಿ, ಕಸಾಸಾಂ ವೇದಿಕೆ ಪ್ರಧಾನ ಕಾರ್ಯದರ್ಶಿ ಕೆ. ಎಸ್. ಮಂಜಪ್ಪ, ಭೈರಾಪುರ ಶಿವಪ್ಪಮೇಸ್ಟ್ರು,ಉಪಾಧ್ಯಕ್ಷರಾದ ಭಾರತಿ ರಾಮಕೃಷ್ಣ, ಡಿ. ಗಣೇಶ್, ಎಂ. ಎಂ. ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ