
18th July 2025
ಬಳ್ಳಾರಿ ಜುಲೈ 18 : ಹೊಟ್ಟೆಪಾಡಿಗಾಗಿ ಕೊಪ್ಪಳ ಜಿಲ್ಲೆಯ ಹರ್ಲಾಪುರ ಗ್ರಾಮದಿಂದ ಬೆಂಗಳೂರಿಗೆ ಗಾರೆ ಕೆಲಸಕ್ಕಂದು ಹೋಗಿದ್ದ ರೇಣುಕಮ್ಮ ಮತ್ತು ನಾಗಪ್ಪ ದಂಪತಿಗಳ ಪುತ್ರಿ ಅರುಣ ಕುಮಾರಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಯನ್ನು ಶೀಘ್ರವೇ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಮತ್ತು ಸಂತ್ರಸ್ತ ಅರುಣ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರವನ್ನು ನೀಡಬೇಕು ಮತ್ತು ಆ ಕುಟುಂಬಕ್ಕೆ ಒಂದು ಸರ್ಕಾರಿ ಉದ್ಯೋಗವನ್ನು ಒದಗಿಸಬೇಕೆಂದು ಅಲೆಮಾರಿ ಆರೇ ಅಲೆಮಾರಿ ಸಂಘದ ಜಿಲ್ಲಾಧ್ಯಕ್ಷ ಸುಬ್ಬಣ್ಣ ಆಗ್ರಹಿಸಿದರು.
ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿ ಮಾತನಾಡಿದ ಸುಬ್ಬಣ್ಣ ಅರುಣ ಕುಮಾರಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಮತ್ತು ಇದಕ್ಕೂ ಮುನ್ನ ಅವಳನ್ನು ಅತ್ಯಾಚಾರ ಗೈದ್ದಿದ್ದಾರೆ ಇಂಥ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡುವುದೊಂದೇ ಮಾರ್ಗ ತಡ ಮಾಡದೆ ಅವನನ್ನು ಗಲ್ಲಿ ಶಿಕ್ಷೆಗೆ ಗುರಿ ಪಡಿಸಬೇಕೆಂದರು.
ಈ ಸಂದರ್ಭದಲ್ಲಿ ಕಾರ್ಮಿಕ ಪರಿಷತ್ತಿನ ಅಧ್ಯಕ್ಷ ದೇವ ಸೇರಿದಂತೆ ಅಲೆಮಾರಿ ಅರೆ ಅಲೆಮಾರಿ ಸಂಘದ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಇದ್ದರು.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಗೆ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬ ಆಚರಣೆ-ಬೋಯಪಾಟಿ ವಿಷ್ಣುವರ್ಧನ್
ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ?? 3400 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ, ಪರಿಹಾರ ಕೊಡಿ ಮೊದಲು. ಕೃಷಿ ಸಚಿವ ರಾಜೀನಾಮೆ ಕೊಡಲಿ-ಶ್ರೀರಾಮುಲು