
27th July 2025
ಕೊಪ್ಪಳ
ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಕೊರತೆಯುಂಟಾಗಿ ಆಹಾಕಾರವಾಗಗುತ್ತಿದೆ. ರೈತರಿಗೆ ಗೊಬ್ಬರ ಸಿಗುತ್ತಿಲ್ಲ ಆದರೆ ಕಾಂಗ್ರೆಸ್ ಬೆಂಬಲಿಗರ ಗೋದಾಮುಗಳಲ್ಲಿ ಸ್ಟಾಕ್ ಇದೆ. ಇದರಿಂದ ರೈತರು ಮಣ್ಣು ತಿನ್ನುವ ಪರಿಸ್ಥಿತಿ ಬಂದಿದೆ ಎಂದು ಆರೋಪಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರ ಗಂಭಿರವಾಗಿ ಆರೋಪಿಸಿದ್ದು, ತಕ್ಷಣ ಸಂಬಂಧಿಸಿದ ಅಧಿಕಾರಿಗಳು ರೈತರಿಗೆ ಗೊಬ್ಬರ ಪೂರೈಕೆ ಮಾಡದಿದ್ದರೆ ಬಿಜೆಪಿ ಜಿಲ್ಲೆಯಾದ್ಯಂತ ಹೊರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಭಾನುವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಮುಂಗಾರು ಆರಂಭವಾಗಿದೆ. ಆದರೆ ರೈತರಿಗೆ ಗೊಬ್ಬರ ಸಿಗುತ್ತಿಲ್ಲ, ಗೊಬ್ಬರಕ್ಕಾಗಿ ರೈತರು ಪರದಾಡುವಂತಾಗಿದೆ. ಖಾಸಗಿ ಗೊಬ್ಬರದ ಅಂಗಡಿಗಳಲ್ಲಿ ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ. ಸರ್ಕಾರಿ ಮಾರಾಟ ಮಳಿಗೆಗಳಲ್ಲಿ ಗೊಬ್ಬರ ಖಾಲಿ ಎನ್ನುವ ಫಲಕಗಳನ್ನು ಹಾಕಲಾಗಿದೆ. ಯೂರಿಯಾ ಗೊಬ್ಬರ ಸಿಗದೆ ರೈತರು ಮಣ್ಣು ತಿಂದು ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರದ ಸಿಎಂ ಹಾಗೂ ಕೃಷಿ ಸಚಿವರು ರಾಜ್ಯಕ್ಕೆ ದಾಸ್ತಾನು ಮಾಡಿಲ್ಲ ಎಂದು ಕೇಂದ್ರ ಸರಕಾರದ ಕಡೆ ಬೆರಳು ತೋರಿಸುತ್ತಾ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈಗಾಗಲೇ ನಮ್ಮ ರಾಜ್ಯಕ್ಕೆ ಯುರಿಯಾ ರಸಗೊಬ್ಬರ 6.30 ಲಕ್ಷ ಮೆಟ್ರಿಕ್ ಟನ್ ಅಗತ್ಯವಿದ್ದು, ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್ ಟನ್ ರಾಜ್ಯಕ್ಕೆ ರಫ್ತು ಮಾಡಿದೆ. ಆದರೆ ಉಳಿದ 2.43 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ರಾಜ್ಯದ ರೈತರಿಗೆ ನೀಡದೆ ಕಾಂಗ್ರೆಸ್ ಬೆಂಬಲಿಗರ ಗೋದಾಮುಗಳಲ್ಲಿ ಸಂಗ್ರಹಿಸಿಡಲಾಗಿದ್ದು, ಗೊಬ್ಬರ ಸ್ಟಾಕ್ ಇಲ್ಲೆಂದು ರೈತರಿಗೆ ಸಬೂಬ ಹೇಳುತ್ತಾ ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.
ರಾಜ್ಯದಲ್ಲಿ ರಸಗೊಬ್ಬರ ಅವೈಜ್ಞಾನಿಕ ದಾಸ್ತಾನು ಶೇಖರಣೆ ಮಾಡಲಾಗಿದೆ ಇದರಿಂದ ರಾಜ್ಯದಲ್ಲಿ ರಸಗೊಬ್ನರ ಅಭಾವ ಉಂಟಾಗಿದೆ. ಹಾಗಾಗಿ ರಾಜ್ಯದೆಲ್ಲಡೆ ರೈತರ ಸಮ್ಮುಖದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಉಗ್ರ ಪ್ರತಿಭಟನೆ ಮಾಡಲಿದೆ ಎಂದ ದಢೇಸೂಗೂರ ಬಲ್ಡೋಟಾ ಭದ್ರತಾ ಸಿಬ್ಬಂದಿಗಳು ಕುರಿಗಾಯಿಗಳ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ಖಂಡನೀಯವಾಗಿದೆ. ಘಟನೆ ನಡೆದಾಗ ನಾವು ಊರಲ್ಲಿ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್ ಮಾತನಾಡಿ, ಜಿಲ್ಲೆಯಲ್ಲಿ ರೈತರ ಸಮಸ್ಯ ಆಲಿಸಲು ಶಾಸಕರು, ಸಚಿವರು ಮುಂದಾಗುತ್ತಿಲ್ಲ. ಅವರಿಗೆ ಅಧಿಕಾರವೇ ಮುಖ್ಯವಾಗಿದೆ. ಅಧಿಕಾರಕ್ಕಾಗಿ ಜಿಲ್ಲೆಯ ರೈತರನ್ನು ಮರೆತಿದ್ದಾರೆ. ಕಾಂಗ್ರೆಸ್ ಸರಕಾರ ಜನಪರ ಕಾಳಜಿ ಮರೆತಿದೆ ಎಂದು ಆರೋಪಿಸಿದರು.
ಗೋಷ್ಟಿಯಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನಸ್ವಾಮಿ, ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಗಣೇಶ್ ಹೊರತಟ್ನಾಳ್ ಇದ್ದರು.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಗೆ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬ ಆಚರಣೆ-ಬೋಯಪಾಟಿ ವಿಷ್ಣುವರ್ಧನ್
ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ?? 3400 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ, ಪರಿಹಾರ ಕೊಡಿ ಮೊದಲು. ಕೃಷಿ ಸಚಿವ ರಾಜೀನಾಮೆ ಕೊಡಲಿ-ಶ್ರೀರಾಮುಲು