
29th July 2025
ಬಳ್ಳಾರಿ ಜುಲೈ 22. ರಾಜ್ಯಸಭಾ ವಿರೋಧ ಪಕ್ಷದ ನಾಯಕರು, ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಬಳ್ಳಾರಿ ನಗರ ಕಾಂಗ್ರೆಸ್ ಕಚೇರಿಯಲ್ಲಿ ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ. ನಾಗೇಂದ್ರ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಹುಮಾಯೂನ್ ಖಾನ್ ಸಮ್ಮುಖದಲ್ಲಿ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರಾದ ಬೋಯಪಾಟಿ ವಿಷ್ಣುವರ್ಧನ್, ಡಿಸಿಸಿ ಉಪಾಧ್ಯಕ್ಷರಾದ ಕೆ. ಶ್ರೀನಿವಾಸಲು, ಬಳ್ಳಾರಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಮಂಜುಳಾ, ಕಾಂಗ್ರೆಸ್ ಹಿರಿಯ ನಾಯಕರಾದ ಎಲ್. ಮಾರಣ್ಣ, ಕಾರ್ಪೊರೇಟರ್ಗಳಾದ ಪ್ಯಾರಂ ವಿವೇಕ್, ಆಸಿಫ್ ಗೋವಿಂದರಾಜುಲು, ಬಳ್ಳಾರಿ ಜಿಲ್ಲಾ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಅಲಿವೇಲು ಸುರೇಶ್, ಬಳ್ಳಾರಿ ಜಿಲ್ಲಾ ಸೋಶಿಯಲ್ ಮೀಡಿಯಾ ಅಧ್ಯಕ್ಷರಾದ ಅಫಾಕ್ ಅಹಮದ್, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷರಾದ ಎರುಕುಲ ಸ್ವಾಮಿ, ಗ್ಯಾರೆಂಟಿ ಯೋಜನೆಗಳ ತಾಲೂಕು ಅಧ್ಯಕ್ಷರಾದ ಗೋನಾಲ್ ನಾಗಭೂಷಣ ಗೌಡ, ಡಿಸಿಸಿ ಕಾರ್ಯದರ್ಶಿ ವೀರನಗೌಡ, ಬಳ್ಳಾರಿ ಜಿಲ್ಲಾ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರು ಸಂತೋಷ್ ಸ್ವಾಮಿ, ಸಂಗನಕಲ್ಲು ವಿಜಯ್ ಕುಮಾರ್, ರಾಜೇಶ್, ಶ್ರೀಕಾಂತ್, ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಡಿದ್ದರು.
undefined
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಗೆ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ?? 3400 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ, ಪರಿಹಾರ ಕೊಡಿ ಮೊದಲು. ಕೃಷಿ ಸಚಿವ ರಾಜೀನಾಮೆ ಕೊಡಲಿ-ಶ್ರೀರಾಮುಲು