

1st August 2025

ಬಳ್ಳಾರಿ ಆ 01 : ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಮಾದಿಗರಿಗೆ ಒಳ ಮೀಸಲಾತಿ ಜಾರಿ ಮಾಡಲೇಬೇಕೆಂದು ಜಿಲ್ಲೆಯ ಮಾದಿಗ ಜನಾಂಗದ ಹಿರಿಯ ಮುಖಂಡರಿಂದ ಅರಬೆತ್ತಲೆ ಮೆರವಣಿಗೆ ಮತ್ತು ಕೇಶ ಮುಂಡನ ಮಾಡಿಕೊಂಡು ಭಾರಿ ಪ್ರತಿಭಟನೆಯನ್ನು ನಡೆಸಿದರು.
ನಗರದ ಅಂಬೇಡ್ಕರ್ ಕಾಂಪ್ಲೆಕ್ಸ್ ಇಂದ ಗಡಿಗೆ ಚನ್ನಪ್ಪ ವೃತ್ತದ ಮೂಲಕ ಹಾದು ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಇಂದು ಜನಾಕ್ರೋಶ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಯವರಿಗೆ ಮನವಿ ಪತ್ರ ಸಲ್ಲಿಸಿ ಮಾದಿಗ ಜನಾಂಗದ ಹಿರಿಯ ಮುಖಂಡ ನಾರಾಯಣಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಮಾದಿಗರನ್ನು ನಾವು ಉದ್ಧಾರ ಮಾಡಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿದೆ, ಕೇವಲ ರಾಜಕಾರಣಕ್ಕಾಗಿ ಮತ್ತು ಚುನಾವಣಾ ಸಂದರ್ಭದಲ್ಲಿ ಮಾದಿಗರ ಮತಗಳಿಗಾಗಿ ಅವರ ಮೂಗಿಗೆ ತುಪ್ಪ ಸವರುತ್ತಾ ಎಪ್ಪತ್ತು ವರ್ಷಗಳನ್ನು ಕಳೆದಿದೆ ಆದರೆ ಇಲ್ಲಿಯವರೆಗೂ ಮಾದಿಗ ಜನಾಂಗಕ್ಕೆ ಸಮರ್ಪಕವಾಗಿ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಅತ್ಯಂತ ಮುಖ್ಯವಾಗಿ ಸರ್ವೋಚ್ಚ ನ್ಯಾಯಾಲಯ ಮಾದಿಗರಿಗೆ ಒಳ ಮೀಸಲಾತಿ ಜಾರಿಗೊಳಿಸುವಂತೆ ಆದೇಶ ನೀಡಿ ವರ್ಷ ಕಳೆದರೂ ಅದನ್ನು ಜಾರಿಗೊಳಿಸುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಮೀನಾ ಮೇಷ ಎಣಿಸುತ್ತಿದೆ ಕೂಡಲೇ ಮಾದಿಗರಿಗೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಕೇಶ ಮುಂಡನ ಮಾಡಿಸಿಕೊಂಡು ಪ್ರತಿಭಟನೆಯನ್ನು ನಡೆಸಿದರು.
ಪರಿಶಿಷ್ಟ ಜಾತಿಗಳ ಸಮುದಾಯದೊಳಗಿನ ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಜಾರಿಯಾಗಬೇಕಿರುವ ಒಳ ಮೀಸಲಾತಿಯ ಬೇಡಿಕೆ ಮತ್ತು ಹೋರಾಟ 35 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ
ಈ ಅಸಮಾನತೆಯನ್ನು ಸರಿಪಡಿಸಲು 1ಆಗಸ್ಟ್ 2024ರ ಸರ್ವೋಚ್ಚ ನ್ಯಾಯಾಲಯದ ತೀರ್ಪು ಸ್ಪಷ್ಟವಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸುವಂತೆ ಆದೇಶ ನೀಡಿ ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ. ಆ ಪ್ರಕಾರವಾಗಿ ತೆಲಂಗಾಣ, ಆಂಧ್ರ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳು ಈಗಾಗಲೇ ಒಳ ಮೀಸಲಾತಿಯನ್ನು ಜಾರಿಗೊಳಿಸಿವೆ ಆ ಪ್ರಕಾರ ಕೂಡಲೇ ರಾಜ್ಯದಲ್ಲಿ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ನಾರಾಯಣಸ್ವಾಮಿ ಒತ್ತಾಯಿಸಿದರು.
ರಾಜ್ಯ ಸರ್ಕಾರವು ಈ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಜಾರಿಗೊಳಿಸಲು ಅನಗತ್ಯವಾಗಿ ವಿಳಂಬ ಮಾಡುತ್ತಿರುವುದು ನಮ್ಮ ಸಮುದಾಯದಲ್ಲಿ ತೀವ್ರ ಅಸಮಾಧಾನ ಮತ್ತು ಆತಂಕಕ್ಕೆ ಕಾರಣವಾಗಿದೆ. ಈ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು ಉದ್ಯೋಗಾಂಕ್ಷಿಗಳು ಕಾರ್ಮಿಕರು ಮತ್ತು ಮಹಿಳೆಯರು ಒಟ್ಟಾರೆ ಸಮಾಜ ತಮ್ಮ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ತರುವಾಯ ಹರಿಯಾಣ, ತೆಲಂಗಾಣ,ಆಂಧ್ರಪ್ರದೇಶ, ಸರ್ಕಾರಗಳು ತುರ್ತು ನಿಗ ವಹಿಸಿ ತಮ್ಮ ರಾಜ್ಯಗಳಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯದ ವಿಷಯದಲ್ಲಿ ಮುಂಚೂಣಿಯಲ್ಲಿವೆ ಆದರೆ ರಾಜ್ಯ ಸರ್ಕಾರ ಮಾತ್ರ ವಿಳಂಬ ನೀತಿ ಅನುಸರಿಸುತ್ತಿದೆ ವಿಳಂಬ ನೀತಿ ಅನುಸರಿಸುತ್ತಿದ್ದು ಪರಿಶಿಷ್ಟ ಜಾತಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಮಾದಿಗ ಮತ್ತು 29 ಉಪಜಾತಿಗಳಲ್ಲಿ ತೀವ್ರವಾದ ಜನಾಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.
ಮುಖಂಡರಾದ ಟಿ ಪಂಪಾಪತಿ ಈ ಸಂದರ್ಭದಲ್ಲಿ ಮಾತನಾಡಿ, ನಾಗಮೋಹನ್ ದಾಸ್ ಆಯೋಗಕ್ಕೆ ಸರ್ಕಾರ ಸರಿಯಾದ ರೀತಿಯಲ್ಲಿ ಸಹಕಾರ ನೀಡುತ್ತಿಲ್ಲ, ಪರಿಶಿಷ್ಟ ಜಾತಿಗಳ ನಡುವೆ ಮೀಸಲಾತಿಯ ಹಂಚಿಕೆಯಲ್ಲಿ ಉಂಟಾಗಿರುವ ಅಸಮಾನತೆ ಮತ್ತು ಸಮುದಾಯಗಳ ನಡುವಿನ ಹಿಂದುಳಿದಿರುವಿಕೆಯನ್ನು ಸಮಗ್ರವಾಗಿ ಅಧ್ಯಯನ ಮಾಡಲು ಆಯೋಗ ಎಲ್ಲಾ ಇಲಾಖೆಗಳಿಗೆ ಅಗತ್ಯ ಮಾಹಿತಿಯನ್ನು ಜನವರಿಯಲ್ಲಿ ಕೇಳಿದ್ದು, ಆದರೆ ರಾಜ್ಯ ಸರ್ಕಾರದ ನಿರೀಕ್ಷಾದಿಂದಾಗಿ ಆರು ತಿಂಗಳಾದರೂ ಸರಿಯಾದ ಮಾಹಿತಿಗಳು ಆಯೋಗಕ್ಕೆ ಬಂದಿಲ್ಲ, ಕೆಲವು ಇಲಾಖೆಗಳ ಮಾಹಿತಿ ಅಪೂರ್ಣವಾಗಿದೆ ಆಯೋಗ ನಡೆಸಿದ ಸಮೀಕ್ಷೆ ಸ್ಪೀಕರ್ ಅಂಟಿಸುವ ಪ್ರಕ್ರಿಯೆಗಳು ಗೊಂದಲ ಹುಟ್ಟು ಹಾಕಿ ನಗೆ ಪಾಟಲಿಗೆ ಗುರಿಯಾಗಿದೆ. ಮೂರು ವಾರದಲ್ಲಿ ಸಮೀಕ್ಷೆ ಮುಗಿಸಿ ಹೊರಗೆ ಸಿದ್ಧಪಡಿಸಲಾಗುವುದು ಎಂಬ ಸರ್ಕಾರದ ಹೇಳಿಕೆ ಕಿಮ್ಮತ್ತು ಕಳೆದುಕೊಂಡಿದೆ.
ಕಾಂತರಾಜ್ ಆಯೋಗದ ಜಾತಿಗಣತಿಯ ವರದಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳ ನಿರ್ಲಕ್ಷದಿಂದ ಕೊನೆಗೆ ಕಸದ ಬುಟ್ಟಿ ಸೇರಿತ್ತು. ನಾಗಮೋಹನ್ ದಾಸ್ ವರದಿಯ ಬಗೆಗಿನ ಗೊಂದಲಗಳು ಸರ್ಕಾರದ ನಿರ್ಲಕ್ಷದ ಧೋರಣೆಯ ಬಗ್ಗೆ ಎಚ್ಚರಿಕೆಯ ಗಂಟೆ ಬಾರಿಸುತಿದ್ದೇವೆ. ಸರ್ಕಾರ ಸರಿದಾರಿಗೆ ಬರಬೇಕು ತಕ್ಷಣ ಬಹಳ ಮೀಸಲಾತಿ ಜಾರು ಮಾಡಬೇಕೆಂಬುದು ನಮ್ಮ ಅಗ್ರಹ ಆಗಸ್ಟ್ 11 ರಿಂದ ಪ್ರಾರಂಭವಾಗುವ ವಿಧಾನ ಮಂಡಲಗಳ ಅಧಿವೇಶನ ಆರಂಭವಾಗುತ್ತಿತ್ತು ಸರ್ಕಾರದ ನಿರ್ಲಕ್ಷಣೆ ವಿಳಂಬ ಧೋರಣೆಯ ಬಗ್ಗೆ ಜನಕ್ರೋಶ ಉಗ್ರ ಸ್ವರೂಪ ತಾಳುವುದು ನಿಶ್ಚಿತ ಎಂದು ಎಚ್ಚರಿಸಿದರು.
ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಸಂಪೂರ್ಣವಾಗಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕು. ಒಂದು ವೇಳೆ ಸರ್ಕಾರವು ನಮ್ಮ ಬೇಡಿಕೆಯನ್ನು ಈಡೇರಿಸಲು ವಿಫಲವಾದರೆ ನಮ್ಮ ಹಕ್ಕುಗಳಿಗಾಗಿ ಮಾದಿಗ ಸಮುದಾಯದಿಂದ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರತಿಭಟನೆಯಲ್ಲಿ ದಾನಪ್ಪ, ಟಿ ದುರ್ಗಪ್ಪ, ಬಿ.ರಾಜೇಶ, ಶಿವಶಂಕರ, ಷಣ್ಮುಖ, ಮಹಾನಂದಿ ಕೊಟ್ಟಂ ಪ್ರಸಾದ, ಪ್ರತಾಪ್ ಅಸುಂಡಿ, ಲಕ್ಷ್ಮಣ ಭಂಡಾರಿ, ದುರ್ಗಪ್ಪ ಸಿರುಗುಪ್ಪ, ಪಕೀರಪ್ಪ ತೆಕ್ಕಲಕೋಟೆ, ಕೆಂಚಪ್ಪ, ಅರುಣಾಚಲಂ, ಚಂದ್ರಶೇಖರ, ವೀರೇಶ, ಇನ್ನು ಮುಂತಾದ ದಲಿತ ಮುಖಂಡರು ವಿದ್ಯಾರ್ಥಿಗಳು ಮಾದಿಗ ಸಂಘಟನೆಗಳ ಒಕ್ಕೂಟದ ಸದಸ್ಯರು ಸೇರಿದಂತೆ ಸಮುದಾಯದ ನೂರಾರು ಜನ ಭಾಗವಹಿಸಿದ್ದರು.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ