

10th August 2025

ಬಳ್ಳಾರಿ ಆ 09. ಡಾ ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುಂಡರಗಿ ನಾಗರಾಜ್ ರವರು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಅಂಕಹಳ್ಳಿ ಗ್ರಾಮದಲ್ಲಿರುವ ಲಿಡ್ಕರ್ ಕಾಲೋನಿಗೆ ಭೇಟಿ ನೀಡಿ. ಈ ಹಿಂದೆ ಸುಮಾರು ಎರಡು ದಶಕಗಳ ಹಿಂದೆ ನಿರ್ಮಾಣವಾದ ಲಿಡ್ಕರ್ ಚರ್ಮ ಕಾರ್ಯಾಗಾರ ಭವನವನ್ನು ಪರಿಶೀಲಿಸಿ, ಭವನವು ಶಿಥಿಲಾವಸ್ಥೆ ಹಂತ ತಲುಪಿದ್ದು ಕೂಡಲೆ ಪರಿಶೀಲಿಸಿ, ದುರಸ್ಥಿ ಮಾಡಿಸಿ, ಸಮುದಾಯದ ಚರ್ಮಕಾರರಿಗೆ ತರಭೇತಿ ಪಡೆದುಕೊಳ್ಳಲು ಅನುವು ಮಾಡಿಕೊಡಬೇಕೆಂದು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂಧರ್ಭದಲ್ಲಿ ಚರ್ಮಕಾರರ ಅಹವಾಲುಗಳನ್ನು ಸ್ವೀಕರಿಸಿ, ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಮಾತನಾಡಿ ಲಿಡ್ಕರ್ ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಫಲಾನುಭವಿಗಳು ನಿಗಮದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಅಭಿಪ್ರಾಯ ಪಟ್ಟರು. ಈ ಸಂಧರ್ಭದಲ್ಲಿ ಮುಖಂಡರಾದ ಡಾ. ಸಂದೀಪ್, ಲಿಡ್ಕರ್ ಚಾಮರಾಜನಗರ ಜಿಲ್ಲಾ ಸಂಯೋಜಕರಾದ ಜಯರಾಮಯ್ಯ ಹಾಗೂ ಜಿಲ್ಲಾ ಸಂಯೋಜಕರಾದ ಚೇತನ್, ಅರುಣ್ ಕುಮಾರ್ ಮುಂಡ್ರಿಗಿ, ಮಹೇಂದ್ರ, ರವಿ ಹಾಗೂ ಗ್ರಾಮದ ಚರ್ಮಕಾರರು, ಮಹಿಳೆಯರು ಮತ್ತಿತರರು ಉಪಸ್ಥಿತರಿದ್ದರು.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ