
14th August 2025
ಬಳ್ಳಾರಿ,ಆ.13.ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು ಎಂದು ಮಹಾನಗರ ಪಾಲಿಕೆಯು ತಿಳಿಸಿದೆ.
ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ33(ಎ) ರನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದು ಕಾನೂನು ಬಾಹೀರವಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿದಲ್ಲಿ ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ45(ಎ)ರನ್ವಯ ರೂ.10,000/-ಗಳ ವರೆಗೆ ದಂಡ ವಿಧಿಸಬಹುದಾಗಿದ್ದು ಮತ್ತು ಜೈಲುವಾಸ ಸಹ ವಿಧಿಸಬಹುದಾಗಿದೆ.
ಹಾಗಾಗಿ ಬಳ್ಳಾರಿ ನಗರದ ನಾಗರಿಕರು, ಉದ್ದಿಮೆದಾರರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಕಂಡುಬAದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು.
ಪರಿಸರ ಸ್ನೇಹಿ ಮಣ್ಣಿನಿಂದ ಮಾಡಿದ ಗಣೇಶ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡಬೇಕು ಎಂದು ಪಾಲಿಕೆ ಕಚೇರಿಯು ಪ್ರಕಟಣೆಯಲ್ಲಿ ಕೋರಿದೆ.
ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಕುಷ್ಟಗಿ ಇದರ ವಾರ್ಷಿಕ ಸಭೆ
ಹಜರತ್ ಹೈದರ್ ಅಲಿ ಕಮೀಟಿ ತೆಗ್ಗಿನಓಣಿ ಹಾಗೂ ಸಂಜೀವಿನಿ ರಕ್ತ ನಿಧಿ ಕೇಂದ್ರ ಸಹಯೋಗಲ್ಲಿ 5ನೇ ವರ್ಷದ ರಕ್ತದಾನ ಶಿಬಿರ