

14th August 2025

ಕೊಪ್ಪಳ.
ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಮಲ್ಲಪ್ಪ ಗುಂಡೂರ್ ಅವರಿಗೆ ೨೦೨೪ ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದೆ.
ಸರಕಾರದ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಅಧ್ಯಕ್ಷೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಮಂಜುನಾಥ ಗುಂಡೂರು ಅವರನ್ನು ಆಯ್ಕೆ ಮಾಡಲಾಗಿದೆ. ಸರಕಾರದ ಇಲಾಖೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಮಂಜುನಾಥ ಗುಂಡೂರು ಅವರು ಮೂಲತಃ ಕೊಪ್ಪಳ ತಾಲೂಕಿನ ಹೊರತಟ್ನಾಳ್ ಗ್ರಾಮದವರಾಗಿದ್ದು, ೨೦೧೫ ನೇ ಸಾಲಿನ ಕೆಎಎಸ್ ಬ್ಯಾಚಿನ ಅಧಿಕಾರಿಗಳಾಗಿದ್ದು, ಕಳೆದ ಹಲವು ವರ್ಷಗಳಿಂದ ಸಿಂಧನೂರು ನಗರಸಭೆ ಪೌರಾಯುಕ್ತರಾಗಿ ಅನುಪಮ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ರಾಯಚೂರ ಜಿಲ್ಲೆಯಿಂದ ಅವರಿಗೆ ಈ ಸರ್ವೋತ್ತಮ ಸೇವಾ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಪ್ರಸ್ತುತ ಮಂಜುನಾಥ ಗುಂಡೂರು ಅವರು ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಿಗ ಲಭಿಸಿರುವ ಪ್ರಶಸ್ತಿಗೆ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಸಿದ್ಧರಾಮೇಶ ಸೇರಿದಂತೆ ಜಿಲ್ಲಾ ನೌಕರರ ಸಂಘದ ಸರ್ವ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ