

16th September 2025

ಕೊಪ್ಪಳ.
ದಲಿತ ಮಹಿಳೆಯರ ಬಗ್ಗೆ ಅಪಮಾನ ಮಾಡಿ ಮಾತನಾಡಿದ್ದಾರೆ ಎಂದು ಆರೋಪಿಸಿ ವಿಜಯಪುರ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ವಿರುದ್ಧ ನಗರದ ದಲಿತ ಸಂಘಟನೆಯ ಯುವ ಮುಖಂಡ ಮಲ್ಲಿಕಾರ್ಜುನ ಪೂಜಾರ ಅವರು ದೂರು ನೀಡಿದ್ದಾರೆ.
ಮಂಗಳವಾರ ಅವರು ನಗರ ಠಾಣೆಗೆ ತೆರಳಿ ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಲ್ಲಿಸಿರುವ ದೂರಿನ್ವಯ ನಗರ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ಕಾಯ್ದೆ ಅಡಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುವರ್ಣ ವಾಹಿನಿಗೆ ಬೈಟ್ ನೀಡುವ ಸಂದರ್ಭದಲ್ಲಿ ಬಸವರಾಜ ಪಾಟೀಲ್ ಯತ್ನಾಳ್ ಅವರು ಹಿಂದುಗಳ ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡುವವರ ವಿರುದ್ಧ ಮಾತನಾಡುವ ಭರಾಟೆಯಲ್ಲಿ ಮತ್ತು ಪ್ರಚಾರದ ಗಿಳಿನಿಂದಾಗಿ ಸನಾತನದ ಧರ್ಮದವರು ಮಾತ್ರ ತಾಯಿ ಚಾಮುಂಡಿಗೆ ಹೂ ಮುಡಿಸಬೇಕು ಹೊರತು ಒಬ್ಬ ದಲಿತ ಮಹಿಳೆಗೂ ಅವಕಾಶ ಕೊಡಲ್ಲ ಎಂದು ಹೇಳಿಕೆ ನೀಡಿ ದಲಿತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಹಿಂದು ಧರ್ಮದವರೆಗೆ ಆದ ದಲಿತ ಹೆಣ್ಣುಮಕ್ಕಳ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿರುವುದು ದಲಿತ ಸಮುದಾಯಕೆಕ ನೊವ್ವಾಗಿದೆ. ಅವರು ಹೇಳಿರುವ ವಿಡಿಯೋ ಆಧಾರದಲ್ಲಿ ಅವರ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು. ಮತ್ತು ಯತ್ನಾಳ್ ಅವರು ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳಿ ಕೋಮು ಸಂಘರ್ಷ ಸೃಷ್ಟಿಸುವಂತಹ ಹೇಳಿಕೆ ನೀಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು ಎಂದು ಅಗ್ರಹಿಸಿದ್ದಾರೆ

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*