

14th March 2026

ಕೊಪ್ಪಳ.
ನಗರದ ಜಿಲ್ಲಾ ನ್ಯಾಯಾಲಯ ಸೇರಿದಂತೆ ಜಿಲ್ಲೆಯ ಗಂಗಾವತಿ,ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಗಳಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿದೆ. ಲೋಕ ಅದಾಲತ್ ನ ಒಂದೇ ದಿನದಲ್ಲಿ ಒಟ್ಟು 57316 ಪ್ರಕರಣಗಳ ಪೈಕಿ 49953 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇತ್ಯರ್ಥಪಡಿಸಲಾದ ಒಟ್ಟು ಮೌಲ್ಯ ರೂ. 44,44,49,017.00ಹೊಂದಿದ್ದು, ವಿವಾಹ ವಿಚ್ಛೆಧನಕ್ಕೆ ಮುಂದಾಗಿದ್ದ ಏಳು ದಂಪತಿಗಳು ನ್ಯಾಯಾಧೀಶರ ಮಾರ್ಗದರ್ಶನದಿಂದ ದಂಪತಿಗಳು ಮನಸ್ಥಾಪ ಬಿಟ್ಟು ಒಂದಾಗಿ ಬಾಳು ನಡೆಸಲು ಒಪ್ಪಿಕೊಂಡಿರುವುದು ವಿಶೇಷವಾಗಿದೆ.
ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಮಾಹಿತಿಯನ್ನು ಜಿಲ್ಲಾ ಕಾನೂನು ಪ್ರಾಧಿಕಾರ ಸಮಿತಿ ಮಾಹಿತಿ ನೀಡಿದೆ. ಅದಾಲತ್ ನಲ್ಲಿ ವಿಮೆ, ನೀರಿನ ಬಿಲ್. ಬ್ಯಾಂಕ್ ಸಾಲ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್ ಪ್ರಕರಣಗಳು, ಜನನ ಮರಣ, ಸಿವಿಲ್ ಕೇಸ್, ಕ್ರಿಮಿನಲ್ ಕೇಸ್, ಮೋಟಾರ್ ವಾಹನ ಅಪಘಾತ, ಎಂಎಂಆರ್ಡಿ ಪ್ರಕರಣಗಳು ಹಾಗೂ ಇತ್ಯಾದಿ ಸೇರಿದಂತೆ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿ 5123 ಪ್ರಕರಣಗಳ ಪೈಕಿ 3032 ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು.
ವಿಮೆ. ನೀರಿನ ಕರ. ಮೋಟಾರ್ ವಾಹನ ಅಪಘಾತ ಸೇರಿದಂತೆ ವಿವಿಧ ಪ್ರಕರಣಗಳು ಸೇರಿ ಪೂರ್ವ ದಾವೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 52194 ಪ್ರಕರಣಗಳ ಪೈಕಿ 46921 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇತ್ಯರ್ಥ ಪಡಿಸಲಾದ ಒಟ್ಟು ಮೌಲ್ಯ 32,18,1082/-ಇದ್ದು, ಒಟ್ಟಾರೆ ಒಂದೇ ದಿನದಲ್ಲಿ ಒಟ್ಟು 573176 ಪ್ರಕರಣಗಳ ಪೈಕಿ 49953ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇತ್ಯರ್ಥಪಡಿಸಲಾದ ಒಟ್ಟು ಮೌಲ್ಯ 44,44,49,017.00 ಎಂದು ಮಾಹಿತಿನೀಡಿದ್ದಾರೆ.
ಈ ಬಾರಿಯ ಲೋಕ ಅದಾಲತ್ ನಲ್ಲಿ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಲಾಗಿದೆ. ಲೋಕ ಅದಾಲತ್ ನಲ್ಲಿ ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ, ಜಿಲ್ಲಾ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ್, ಕೌಟಂಬಿಕ ನ್ಯಾಯಾಲಯದ ನ್ಯಾಯಾಧೀಶ ಶ್ರೀದೇವಿ ಸೇರಿ ಮತ್ತಿತರ ನ್ಯಾಯಾಧೀಶರು ಇದ್ದರು. ಲೋಕ ಅದಾಲತ್ ನಲ್ಲಿ ಸಹಕಾರ ನೀಡಿದ ವಕೀಲರು, ಕಕ್ಷಿಗಾರರು, ಮಧ್ಯಸ್ತಿಗಾರ ವಕೀಲರುಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಭಿನಂದಿಸಿದೆ.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ