

9th April 2026

undefined
ಕೊಪ್ಪಳ.
2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊಪ್ಪಳ ಜಿಲ್ಲೆಯು ಪ್ರತಿಶತ 86.08ರಷ್ಟು ಫಲಿತಾಂಶ ದಾಖಲಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿ ಮೊದಲ ಸ್ಥಾನದಲಿರುವ ಕೊಪ್ಪಳ ಜಿಲ್ಲೆ ರಾಜ್ಯದಲ್ಲಿ 17 ನೇ ಸ್ಥಾನದಲ್ಲಿದೆ ಎಂದು ಹರ್ಷ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ ಡಾ.ಸುರೇಶ ಬಿ ಇಟ್ನಾಳ ಉತ್ತೀರ್ಣರಾದ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.
ಗುರುವಾರ ಸಂಜೆ ಪ್ರಕಟವಾದ ಫಲಿತಾಂಶದ ನಂತರ ಅವರು ಮಾತನಾಡಿದ್ದಾರೆ. ಹಿಂದಿನ ಶೈಕ್ಷಣಿಕ ವರ್ಷದಲ್ಲಿ 23ನೇ ಸ್ಥಾನದಲ್ಲಿದ್ದ ಕೊಪ್ಪಳ ಜಿಲ್ಲೆಯು 2025-26ನೇ ಶೈಕ್ಷಣಿಕ ವರ್ಷದಲ್ಲಿ 17ನೇ ಸ್ಥಾನಕ್ಕೇರಿ ಉತ್ತಮ ಸಾಧನೆ ತೋರಿದೆ.
ಕೊಪ್ಪಳ ಸೇರಿದಂತೆ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಒಳಗೊಂಡ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕೊಪ್ಪಳಕ್ಕೆ ಮೊದಲನೇ ಸ್ಥಾನ ಲಭಿಸಿದ್ದು ಸಂತಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿರುವ ಡಿಸಿ ಅವರು
ಹೊಸದಾಗಿ ಪರೀಕ್ಷೆ ಬರೆದಿದ್ದ ಒಟ್ಟು 13,312 ವಿದ್ಯಾರ್ಥಿಗಳ ಪೈಕಿ 11,555 ವಿದ್ಯಾರ್ಥಿಗಳು ಪಾಸಾಗಿ ಶೇ.86.08ರಷ್ಟು ಫಲಿತಾಂಶ ದಾಖಲಾಗಿಸಿದ್ದಾರೆ, ಈ ಬಾರಿಯ ಫಲಿತಾಂಶದಲ್ಲಿ ಕೊಪ್ಪಳ ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಂಡಿದೆ. ಎಲ್ಲಾವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು, ಹೊಸಬರು ಹಾಗೂ ಖಾಸಗಿ ಮತ್ತು ರಿಪೀಟರ್ಸ್ ಸೇರಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 15,503 ಅಭ್ಯರ್ಥಿಗಳ ಪೈಕಿ 12,189 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪ್ರಥಮ ಬಾರಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಪೈಕಿ ಕಲಾ ವಿಭಾಗದಲ್ಲಿ ಶೇ.78.36., ವಾಣಿಜ್ಯ ವಿಭಾಗದಲ್ಲಿ ಶೆ.90.39., ವಿಜ್ಞಾನ ವಿಭಾಗದಲ್ಲಿ ಶೇ.92.72ರಷ್ಟು ಫಲಿತಾಂಶ ದಾಖಲಾಗಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸೇರಿ ನಗರ ಪ್ರದೇಶದಲ್ಲಿ ಶೇ.84.64 ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶೇ.89.99.02ರಷ್ಟು ಫಲಿತಾಂಶ ದಾಖಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ದೇಶನೂರಿನ ವಿಕಾಸ ಪ್ರಾಥಮಿಕ ಮತ್ತು ಪ್ರೌಢಶಾಲೆಯಿಂದ ನೀಡಿದ ಉಸ್ತುವಾರಿ ಸಚಿವ ಸತೀಶ ಜಾರಕಿಹೋಳಿಗೆ ಸತ್ಕಾರ

ಮಾಜಿ ಶಾಸಕನ ಪುತ್ರನ ಹತ್ಯೆಗೆ ಅನೈತಿಕ ಸಂಬಂಧ ಕಾರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ