

27th April 2026

ಬಳ್ಳಾರಿ.
ಬಳ್ಳಾರಿ ವಲಯದ ಪೊಲೀಸ್ ಮಹಾನಿರ್ದೇಶಕ ಹರ್ಷ ಪಿ.ಎಸ್ ಅವರಿಗೆ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದಲ್ಲಿನ ಸಂಶೋಧನೆಗಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್ಡಿ) ಪದವಿಯನ್ನು ಲಭಿಸಿದೆ.
ಈ ಕುರಿತು ಮಾಹಿತಿ ನೀಡಿದ್ದು, ಮೇ. 06 ರಂದು ಪಿ.ಹೆಚ್.ಡಿ. ಪ್ರದಾನ ಮಾಡಲಿದೆ. ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಹರ್ಷ ಪಿ.ಎಸ್ ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು ನಡೆಸಿದ್ದಾರೆ. "ನಾಗರಹೊಳೆ, ಬಂಡೀಪುರ ಮತ್ತು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಜನಸಂಖ್ಯೆಯ ಸ್ಥಿರತೆಯ ಕುರಿತು ಒಂದು ಅಧ್ಯಯನ, ಮಾನವ-ಹುಲಿ ಸಂಘರ್ಷಕ್ಕೆ ವಿಶೇಷ ಉಲ್ಲೇಖದೊಂದಿಗೆ" ಎಂಬ ಶೀರ್ಷಿಕೆಯ ಅವರ ಡಾಕ್ಟರೇಟ್ ಪ್ರಬಂಧವು ಈ ಸಂರಕ್ಷಿತ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಕ್ಯಾಮೆರಾ ಟ್ರ್ಯಾಪಿಂಗ್ ಮತ್ತು ವಿವರವಾದ ಸಂಘರ್ಷ ತಾಣಗಳ ವಿಶ್ಲೇಷಣೆ ಸೇರಿದಂತೆ ತೀವ್ರವಾದ ಕ್ಷೇತ್ರಕಾರ್ಯವನ್ನು ಆಧರಿಸಿದೆ.
ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಔಪಚಾರಿಕವಾಗಿ ಅನುಮೋದಿಸಿ ಪದವಿ ನೀಡಿದೆ. ಮೇ 6, 2026 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಿಎಚ್ಡಿ ಪ್ರಮಾಣ ಪುತ್ರವನ್ನು ಐಜಿಪಿ ಹರ್ಷ ಅವರಿಗೆ ಪ್ರಧಾನ ಮಾಡಲಾಗುತ್ತಿದೆ.
ಬಳ್ಳಾರಿ ಪೊಲೀಸ್ ವಲಯದ ಐಜಿಪಿಯಾಗಿರುವ ಹರ್ಷ ಪಿ.ಎಸ್ ಅವರು ಈ ಹಿಂದೆ ವಾರ್ತಾ ಇಲಾಖೆಯಲ್ಲಿ ಆಯುಕ್ತರಾಗಿದ್ದು ವಿಶೇಷವಾಗಿದೆ.

ಬಾಲ್ಯ ವಿವಾಹ ಪ್ರಕರಣ: ಮೂವ್ವರಿಗೆ ಜೈಲು ಶಿಕ್ಷೆ- ಗಂಗಾವತಿ ನ್ಯಾಯಾಲಯದಲ್ಲಿ ತೀರ್ಪು ಪ್ರಕಟ