

5th May 2026

ಕೊಪ್ಪಳ
ಪಂಚರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಪುದುಚೇರಿ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಅಲ್ಲಿಯ ಮತದಾರರು ಎನ್ ಡಿಎ ಬೆಂಬಲಿಸುವ ಮೂಲಕ ನವ ಭಾರತಕ್ಕೆ ದಿಕ್ಸೂಚಿಯಾಗಿದ್ದಾರೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ನಿಕಟಪೂರ್ವ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಹೇಳಿದ್ದಾರೆ.
ಫಲಿತಾಂಶದ ನಂತರ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ್ದಾರೆ. ಈ ಫಲಿತಾಂಶದ ಮೂಲಕ ಮತದಾರರು ಅಭಿವೃದ್ಧಿ, ಸ್ಥಿರತೆ ಮತ್ತು ಭದ್ರತೆಗೆ ಮನ್ನಣೆ ನೀಡಿದ್ದಾರೆ. ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ಜನರ ವಿಶ್ವಾಸ ಮತ್ತೊಮ್ಮೆ ವ್ಯಕ್ತವಾಗಿದೆ. ಇಂದಿನ ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶಾದ್ಯಂತ “ಮೋದಿ ಹವಾ” ಇನ್ನೂ ಮುಂದುವರಿದಿದೆ ಎಂಬುದನ್ನು ಸ್ಪಷ್ಟವಾಗಿ ಸಾಬೀತುಪಡಿಸಿವೆ. ಪಶ್ಚಿಮ ಬಂಗಾಳದ ಫಲಿತಾಂಶವು ದೇಶದ ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನರ ನಂಬಿಕೆಗೆ ದೊಡ್ಡ ಜಯ ತಂದುಕೊಟ್ಟಿದೆ. ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ರಾಜ್ಯದ ಜನತೆ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದರು. ಇದೀಗ ಬಂದಿರುವ ಫಲಿತಾಂಶವು ಆ ರಾಜ್ಯದಲ್ಲಿ ಬದಲಾವಣೆಯ ಆಶೆಯನ್ನು ಮೂಡಿಸಿದ್ದು, ದೇಶದ ಜನರು ಈ ಬೆಳವಣಿಗೆಯನ್ನು ಸ್ವಾಗತಿಸುತ್ತಿದ್ದಾರೆ.
ಇನ್ನೊಂದೆಡೆ, ರಾಜ್ಯದ ಎರಡು ವಿಧಾನಸಭಾ ಉಪಚುನಾವಣೆಗಳಲ್ಲಿ ನಮ್ಮ ಅಭ್ಯರ್ಥಿಗಳು ಜಯ ಸಾಧಿಸದಿರುವುದು ನಮಗೆ ಸ್ವಲ್ಪ ನಿರಾಶೆ ತಂದಿದೆ. ಆದಾಗ್ಯೂ, ಇದನ್ನು ಪಾಠವಾಗಿ ತೆಗೆದುಕೊಂಡು ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಘಟನೆ ಬಲಪಡಿಸುವ ಕಾರ್ಯವನ್ನು ಇನ್ನಷ್ಟು ತೀವ್ರಗೊಳಿಸಲಾಗುತ್ತದೆ. ಬಿಜೆಪಿ ಪಕ್ಷವು ಸದಾ ಜನಸೇವೆಗೆ ಬದ್ಧವಾಗಿದ್ದು, ಜನರ ಆಶೀರ್ವಾದದೊಂದಿಗೆ ಮುಂದಿನ ದಿನಗಳಲ್ಲಿ ಉತ್ತಮ ಸಾಧನೆ ಮಾಡುವ ವಿಶ್ವಾಸ ಹೊಂದಿದೆ.
ಅಸ್ಸಾಂ ರಾಜ್ಯದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಮೂಲಕ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಪುದುಚೇರಿಯಲ್ಲಿ ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ನಮ್ಮ ಪಕ್ಷ ಯಶಸ್ವಿಯಾಗಿದೆ. ತಮಿಳುನಾಡು ಮತ್ತು ಕೇರಳದಲ್ಲಿಯೂ ಎನ್ ಡಿಎ ಸ್ಪರ್ಧಾತ್ಮಕವಾಗಿ ಸ್ಪರ್ಧೆಯೊಡ್ಡಿದ್ದು, ಮುಂದಿನ ದಿನಮಾನಗಳಲ್ಲಿ ದೇಶದ ಉಳಿದ ಭಾಗಗಳ ಮತದಾರರಂತೆ ಈ ರಾಜ್ಯಗಳ ಮತದಾರರು, ಎನ್ ಡಿಎ ಕೈ ಹಿಡಿಯಲಿದ್ದಾರೆ ಎಂದರು.

ಗಂಗಾವತಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ- ನಾಗರಾಜ ನಂದಾಪುರ ನೇಮಕ: ಡಿಕೆಶಿ ಆದೇಶ- ದಲಿತ ಬಲಗೈ ಸಮುದಾಯಕ್ಕೆ ಕಾಂಗ್ರೆಸ್ ಮನ್ನಣೆ

ಪ್ರಧಾನಿಗೆ ವ್ಯಂಗ್ಯ: ತಂಗಡಗಿ ಅಸಭ್ಯ ವರ್ತನೆ ಬಹಿರಂಗ- ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ ಕಿಡಿ

ಕುರುಬ ಸಮುದಾಯದ ವಿರುದ್ದ ಹೇಳಿಕೆ ಖಂಡನೀಯ ಸಿ.ಸಿ.ಪಾಟೀಲ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ರುದ್ರಣ್ಣ ಗುಳಗುಳಿ

ಕಾಂಗ್ರೆಸ್ ಮಹಿಳೆಯರನ್ನು ಗ್ಯಾರಂಟಿಗೆ ಸಿಮೀತಗೊಳಿಸಿದೆ- ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಆರೋಪ