

6th May 2026

ಗಂಗಾವತಿ.
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಹೆಚ್.ಆರ್.ಶ್ರೀನಾಥ, ಮಾಜಿ ಸಚಿವ ಮಲ್ಲಿಕಾಜರ್ಜುನ ನಾಗಪ್ಪ ಅವರ ಬಣ ರಾಜಕೀಯ ಗೊಂದಲದ ನಡುವೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಗಂಗಾವತಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ನಗರ ಪ್ರಾಧಿಕಾರದ ಅಧ್ಯಕ್ಷ ನಾಗರಾಜ ನಂದಾಪುರ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ನೇಮಕ ಮಾಡಿ ಆದೇಶ ಮಾಡಿದೆ.
ಕಳೆದ ಎಂಟು ವರ್ಷದಿಂದ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಶ್ಯಾಮೀದ್ ಮನಿಯಾರ್ ಅವರಿಂದ ದಿಡೀರ್ ಬದಲಾವಣೆ ಮಾಡಿ ಮೇ.೫ ರಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ನಾಗರಾಜ ನಂದಾಪುರ ಅವರನ್ನು ಗಂಗಾವತಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ. ಚಲುವಾದಿ ಸಮಾಜದ (ದಲಿತ ಬಲಗೈ) ಸಮುದಾಯದವರಾಗಿರುವ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ನಾಗರಾಜ ನಂದಾಪುರ ಅವರು ಈ ಹಿಂದೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಬಣದಲ್ಲಿ ಗುರುತಿಸಿಕೊಂಡು ಗಂಗಾವತಿ ನಗರ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ನಂತರ ಅನ್ಸಾರಿ ಬಣದಿಂದ ಹೊರ ಬಂದಿದ್ದ ನಂದಾಪುರ ಅವರು ಗಂಗಾವತಿಯ ಕಾಂಗ್ರೆಸ್ ಬಣ ರಾಜಕೀಯದಿಂದ ದೂರ ಉಳಿದಿದ್ದು, ನೇರವಾಗಿ ಕಾಂಗ್ರೆಸ್ ಹೈಕಮಾಂಡ್ ನಾಯರಕೊಂದಿಗೆ ಸಂಪರ್ಕ ಹೊಂದಿದ್ದರು. ದಲಿತ ಎಡಗೈ ಸಮುದಾಯಕ್ಕೆ ಸೇರಿರುವ ನಾಗರಾಜ ನಂದಾಪುರ ಅನ್ಸಾರಿ ಮತ್ತು ಶ್ರೀನಾಥ ಬಣ ರಾಜಕೀಯದಲ್ಲಿ ಗಂಗಾವತಿ ನಗರ ಬ್ಲಾಕ್ ಅಧ್ಯಕ್ಷರಾಗಿರುವುದು ವಿಶೇವಾಗಿದೆ. ಅಧ್ಯಕ್ಷ ಸ್ಥಾನ ನೀಡಿರುವ ಕುರಿತು ಮಾತನಾಡಿದ ನಾಗರಾಜ ನಂದಾಪುರ ಅವರು ಕಾಂಗ್ರೆಸ್ ಹೈಕಮಾಂಡ್ ನನಗೆ ಗಂಗಾವತಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿದೆ. ನಾನು ಗಂಗಾವತಿಯಲ್ಲಿ ಯಾವುದೇ ಬಣ ರಾಜಕಾರಣ ಮಾಡಿದವನಲ್ಲ. ಎಲ್ಲಾ ಮುಖಂಡರೊಂದಿಗೆ ಆತ್ಮೀಯದಿಂದ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡಿದ್ದೇನೆ. ಹೀಗಾಗಿ ಹೈಕಮಾಂಡ್ ನನಗೆ ಈ ಜವಬ್ದಾರಿ ನೀಡಿದೆ. ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರ ವಿಶ್ವಾಸದಿಂದ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ. ಬಣ ರಾಜಕಾರಣಕ್ಕೆ ಮುಕ್ತಿ ಹಾಡಿ ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಗಟ್ಟಿ ನೆಲೆ ತಂದುಕೊಡುವಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಬ್ದಾರಿ ನೀಡಿರುವ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು, ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಮುಖಂಡರಿಗೂ, ಕಾರ್ಯಕರ್ತರಿಗೂ ಅಭಿನಂದಿಸುತ್ತೇನೆ. ಪಕ್ಷದ ಸೂಚನೆಯಂತೆ ನಾನು ಕೆಲಸ ಮಾಡುತ್ತೇನೆ ಎಂದರು.
ಬಾಕ್ಸ್:
ಹೈಕಮಾಂಡ್ ನಿರ್ಧಾರಕ್ಕೆ ಸ್ವಾಗತ:ಮನಿಯಾರ್
ಕಾಂಗ್ರೆಸ್ ಪಕ್ಷ ನನಗೆ ಗಂಗಾವತಿ ನಗರ ಬ್ಲಾಕ್ ಅಧ್ಯಕ್ಷನಾಗಿ ಎಂಟು ವರ್ಷಗಳ ಕಾಲ ಕೆಲಸ ಮಾಡುವ ಅವಕಾಶ ನೀಡಿತ್ತು. ಪಕ್ಷದ ಸಿದ್ಧಾಂತದಂತೆ ನಾನು ಇಲ್ಲಿವರೆಗೂ ಪ್ರಮಾಣಿಕವಾಗಿ ಕೆಲಸ ಮಾಡಿದ್ದೇನೆ. ಈಗ ನಾಗರಾಜ ನಂದಾಪುರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿರುವುದು ನಾನು ಸ್ವಾಗತಿಸುತ್ತೇನೆ. ಇಷ್ಟು ವರ್ಷ ಸುದೀಘ್ರವಾಗಿ ಪಕ್ಷದ ಸಂಘಟನೆ ಮಾಡಿರುವುದು ಮತ್ತು ಮೂರು ಅವಧಿ ನಗರಸಭೆ ಸದಸ್ಯನಾಗಿ ಅನುಭವ ಹೊಂದಿರುವ ನನಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹೆಚ್ಚಿನ ಜವಬ್ದಾರಿ ನೀಡುತ್ತದೆ ಎಂಬ ವಿಶ್ವಾಸವಿದೆ. ನೂತನ ಬ್ಲಾಕ್ ಅಧ್ಯಕ್ಷರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ.
ಶ್ಯಾಮೀದ್ ಮನಿಯಾರ್, ನಗರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು, ಗಂಗಾವತಿ.

ಪಂಚರಾಜ್ಯ ಚುನಾವಣೆ ಫಲಿತಾಂಶ ಮೋದಿಗೆ ಜನ ಬೆಂಬಲ- ಬಿಜೆಪಿ ರಾಜ್ಯ ಸದಸ್ಯ ಡಾ. ಬಸವರಾಜ.ಕೆ ಹೇಳಿಕೆ

ಪ್ರಧಾನಿಗೆ ವ್ಯಂಗ್ಯ: ತಂಗಡಗಿ ಅಸಭ್ಯ ವರ್ತನೆ ಬಹಿರಂಗ- ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ ಕಿಡಿ

ಕುರುಬ ಸಮುದಾಯದ ವಿರುದ್ದ ಹೇಳಿಕೆ ಖಂಡನೀಯ ಸಿ.ಸಿ.ಪಾಟೀಲ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ರುದ್ರಣ್ಣ ಗುಳಗುಳಿ

ಕಾಂಗ್ರೆಸ್ ಮಹಿಳೆಯರನ್ನು ಗ್ಯಾರಂಟಿಗೆ ಸಿಮೀತಗೊಳಿಸಿದೆ- ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಆರೋಪ