

3rd June 2026

undefined
ಗಂಗಾವತಿ.
ಸಿದ್ದರಾಮಯ್ಯ ಸರಕಾರದಲ್ಲಿ ವಸತಿ ಸಚಿವರಾಗಿ ಅತ್ಯಂತ ಯಶಸ್ವಿ ಕಾರ್ಯನಿರ್ವಹಿಸಿದ್ದ ಬಿ.ಜೆಡ್.ಜಮೀರ್ ಅಹ್ಮದ್ ಅವರನ್ನು ಉಪ ಮುಖ್ಯಮಂತ್ರಿ ಮಾಡಬೇಕು ಎಂದು ಅಗ್ರಹಿಸಿರುವ ಮುಸ್ಲಿಂ ಸಮಾಜದ ಯುವ ಮುಖಂಡ ಸೈಯದ್ ಮೀರಾ ಅವರು ಒಂದುವೇಳೆ ಸಚಿವ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟ ಉಂಟಾಗಲಿದೆ ಎಂದು ಎಚ್ಚರಿಸಿದ್ದಾರೆ.
ಈ ಕುರಿತು ಅವರು ಪ್ರಕಟಣೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಸೋನಿಯಾಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇರವಾಗಿ ನಾನಾ ಹೇಳಲು ಬಯಸುತ್ತೇನೆ. ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿಯಾಗಿ ಮಾಡಬೇಕೆಂದು ರಾಜ್ಯದ ಅವರ ಅಭಿಮಾನಿ ಬಳಗ ಹಾಗೂ ಮುಸ್ಲಿಂ ಸಮಾಜದ ಪರವಾಗಿ ನಾನು ಮನವಿ ಮಾಡುತ್ತಿದ್ದೇನೆ. ಉದ್ದೇಶಪೂರ್ವಕವಾಗಿ ಸಚಿವ ಸಂಪುಟ ರಚನೆ ವೇಳೆ, ಅವರ ಸುಳ್ಳು ಧ್ವನಿಯನ್ನು ಕ್ರಿಯೇಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅವರ ವಿರೋಧಿಗಳು ಹರಿ ಬಿಟ್ಟಿದ್ದಾರೆ. ರಾಜ್ಯದಲ್ಲಿ ಮುಸ್ಲಿಂ ಸಮಾಜದ ಶೇ.90 ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಬಿ.ಜೆಡ್. ಜಮೀರ್ ಅಹಮದ್ ಅವರು ಎಂಬುದನ್ನು ಕಾಂಗ್ರೆಸ್ ನಾಯಕರು ಮರೆಯಬಾರದು. ಇತ್ತಿಚೀಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುಸ್ಲಿಂರನ್ನು ತುಳಿಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಜಮೀರ್ ಅಹ್ಮದ್ ಅವರಿಗೆ ಉಪಮುಖ್ಯಮಂತ್ರಿ ಮಾಡಿ ಮುಸ್ಲಿಂ ಮುಖಂಡರಿಗೆ ಹೆಚ್ಚಿನ ಅಧಿಕಾರ ನೀಡಬೇಕು. ಇಲ್ಲದಿದ್ದರೆ. ಮುಸ್ಲಿಂ ಸಮಾಜ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ವಿರುದ್ದ ಹೊರಾಟ ಮಾಡಲು ಮುಂದಾಗುತ್ತದೆ ಎಂದು ಸೈಯದ್ ಮೀರಾ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..

ಎಸ್ಐಆರ್ ವಿಚಾರದಲ್ಲಿ ರಾಯರೆಡ್ಡಿಗೆ ತಿಳುವಳಿಕೆ ಕೊರತೆ- ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ಕುಮಾರ ಗುಳಗಣ್ಣ ಟಾಂಗ್- ಎಸ್ಐಆರ್ ಮೇಲ್ವಿಚಾರಣೆ ರಾಜ್ಯದ ಹೊಣೆ ಎಂಬುದು ಅರಿಯಲಿ