

17th June 2026

ಗಂಗಾವತಿ.
ವಕೀಲ ಮಲ್ಲೇಶಪ್ಪಗೆ ಮೋಬೈಲ್ ನಲ್ಲಿ ಮಾತನಾಡುತ್ತಿರುವಾಗ ಅವಾಚ್ಚ್ ಶಬ್ಧಗಳಿಂದ ನಿಂದಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಪಂ ಸಿಇಓ ವರ್ಣೀತ್ ನೇಗಿ ಅವರು ಕಾರಟಗಿ ತಾಲೂಕಿನ ಯರಡೋಣ ಗ್ರಾಮ ಪಂಚಾತ್ ಅಭಿವೃದ್ಧಿ ಅಧಿಕಾರಿ ಎನ್. ಶಿವರಾಜ್ ಅವರನ್ನು ಅಮಾನತು ಮಾಡಿದ್ದಾರೆ.
ಬುಧವಾರ ಅಮಾನತು ಮಾಡಿ ಆದೇಶಿಸಿದ್ದಾರೆ. ಗಂಗಾವತಿಯ ವಕಿಲರಾದ ಮಲ್ಲೇಶಪ್ಪ ಎಸ್. ಅವರು ಜೂ.12 ರಂದು ಸ್ ಸಿ ಎಸ್ ಟಿ ಸಮುದಾಯದ ಕಾನೂನು ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಸಲು ವಿಳಂಬವಾಗಿರುವುದು ಯಾಕೆ ಎಂದು ಮೋಬೈಲ್ ಮೂಲಕ ವಿಚಾರಿಸುತ್ತಿದ್ದ ಸಂದರ್ಭದಲ್ಲಿ ಕಾರಟಗಿ ತಾಲೂಕಿನ ಯರಡೋಣಾ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವರಾಜ್ ಅವರು ಸರ್ಕಾರಿ ಅಧಿಕಾರಿಯಂತೆ ವರ್ತಿಸದೇ ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆ ಹಾಕಿರುತ್ತಾರೆ ಎಂದು ಮೆರಲಾಧಿಕಾರಿಗಳಿಗೆ ದೂರು ನೀಡಿದ್ದರು. ಮತ್ತು ಪಿಡಿಓ ಮಾತನಾಡಿರುವ ಸಂಭಾಷಣೆ ಧ್ವನಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಹೀಗಾಗಿ ಜಿಪಂ ಸಿಇಓ ಅವರು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳ ಮೂಲಕ ವಿಚಾರಣೆ ನಡೆಸಿ ಸತ್ಯಾಸತ್ಯೆಯನ್ನು ಪರಿಶೀಲಿಸಿ ಎನ್. ಶಿವರಾಜ್ ಪಂಚಾಯತ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ ಯರಡೋಣ ತಾ॥ ಕಾರಟಗಿ ರವರ ವಿರುದ್ಧ ಇರುವ ಆರೋಪಗಳ ಕುರಿತು ವಿಚಾರಣೆಯನ್ನು ಕಾಯ್ದಿರಿಸಿ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು 1957 ರ ನಿಯಮ 10 (1) (ಡಿ) ರನ್ವಯ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತ್ತುಗೊಳಿಸಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶಿಸಿದ್ದಾರೆ

ಬಿ.ಕೆ. ಹರಿಪ್ರಸಾದ್ ಪದಗ್ರಹಣಕ್ಕೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ: ಎ.ವಿ. ಉಮಾಪತಿ ಕರೆ