

22nd July 2026

ಕೊಪ್ಪಳ (ಸಮರ್ಥವಾಣಿ ನ್ಯೂಜ್)
ಜಿಲ್ಲೆಯಲ್ಲಿ ಭೀಕರ ಬರಗಾಲ ಉಂಟಾಗಿದೆ. ತಾಲೂಕಿನ ರೈತರು ಗುಳೆ ಹೋಗುತ್ತಿದ್ದಾರೆ. ಮತ್ತು ಆತಂಕದಲ್ಲಿ ಜಿವನ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕ್ಷೇತ್ರದಲ್ಲಿದ್ದು ರೈತರ ಮತ್ತು ಜನರ ಕಷ್ಟಗಳನ್ನು ಆಲಿಸಿ ಸರಕಾರದ ಗಮನಕ್ಕೆ ತರಬೇಕಾಗಿರುವ ಶಾಸಕ ರಾಘವೇಂದ್ರ ಹಿಟ್ನಾಳ ನಾಪತ್ತೆಯಾಗಿದ್ದಾರೆ. ಜನರ ಸಮಸ್ಯೆಗೆ ಸ್ಪಂದುಸದೆ ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬೀಡು ಬಿಟ್ಟಿರುವುದು ಅಕ್ಷಮ್ಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್ ಆರೋಪಿಸಿದ್ದಾರೆ.
ಈ ಕುರಿತು ಅವರು ಮಾಧ್ಯಮಗಳಿಗೆ ಪ್ರಕಟಣೆ ನೀಡಿ ಶಾಸಕರ ನಡೆಯನ್ನು ತೀವ್ರವಾಗಿ ಖಂಡಿಸುದ್ದಾರೆ. ತಾಲೂಕಿನಲ್ಲಿ ಶೇ.4೦ ರಷ್ಟು ರೈತರು ಬಿತ್ತನೆಯನ್ನೇ ಮಾಡಿಲ್ಲ. ಬಿತ್ತನೆ ಮಾಡಿರುವ ರೈತರು ಮಳೆ ಇಲ್ಲದೆ ಕಂಗಾಲಾಗಿದ್ದಾರೆ. ಕುಡಿಯಲು ನೀರು ಸಿಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಇದ್ದು ಬರ ಪರಿಹಾರ ಕಾಮಗಾರಿಗಳ ಕಾರ್ಯಕ್ಕೆ ವೇಗ ನೀಡುವ ಕೆಲಸ ಮಾಡುವುದು ಶಾಸಕರ ಜವಾಬ್ದಾರಿ. ಆದರೆ ಶಾಸಕರು ಕ್ಷೇತ್ರದಿಂದ ನಾಪತ್ತೆಯಾಗಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರ ಸಮಸ್ಯೆಗಳಿಗಿಂತ ಅಧಿಕಾರವೇ ಇವರಿಗೆ ಮುಖ್ಯವಾಗಿದೆ.
ಕೊಪ್ಪಳದಲ್ಲಿ ಕಾರ್ಖಾನೆಗಳು ಬೇಡ ಎಂದು ಜನತೆ ಕಳೆದ ಒಂದು ವರ್ಷದ ಹಿಂದೆ ಪ್ರತಿಭಟನೆ ಆರಂಭಿಸಿ ಬೀದಿಗೆ ಇಳಿದಿದ್ದಾರೆ. ತುಂಗಭದ್ರಾ ನದಿಯ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಿಡಬೇಕು ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ನಾಯಕರೊಂದಿಗೆ ದೆಹಲಿಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಲು ಸಮಯ ಇರುವ ಸಂಸದ ರಾಜಶೇಖರ್ ಹಿಟ್ನಾಳ್ ಅವರಿಗೆ ತಮ್ಮ ಕ್ಷೇತ್ರದ ಜನರ ಪ್ರತಿಭಟನೆ
ಗಮನಿಸಲು ಸಮಯ ಇಲ್ಲವೇ ಎಂದು ಪ್ರಶ್ನಿಸಿರುವ ಸುವಿಸಿ ಅವರು ಇಲ್ಲಿನ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಸಮಸ್ಯೆ ಬಗೆಹರಿಸುವ ಮನಸ್ಸಿಲ್ಲವೇ? ಕೊಪ್ಪಳ ಕ್ಷೇತ್ರದ ಜನರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಲು ಸಿದ್ಧರಿದ್ದಾರೆಯೇ? ಕೊನೆಯ ಪಕ್ಷ ಸಂಸತ್ತಿನಲ್ಲಿ ಲೋಕಸಭಾ ಕ್ಷೇತ್ರದ ಸಮಸ್ಯೆಗಳಿಗೆ ಉತ್ತರ ಕಂಡುಹಿಡಿಯುವ ನಿಟ್ಟಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆಯೆ? ಎಂದು ಪ್ರಶಸಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶಕ್ಕೆ ಗಂಭೀರ ಸಮಸ್ಯೆ ಬಂದಾಗ ವಿದೇಶ ಪ್ರವಾಸದಲ್ಲಿ ಇರುತ್ತಾರೆ. ಅವರ ಹಿಂಬಾಲಕರಾದ ಶಾಸಕರು ಮತ್ತು ಸಂಸದರು ಕೊಪ್ಪಳ ಹೊತ್ತಿ ಉರಿಯುವಾಗ ದೆಹಲಿಯಲ್ಲಿ ಬಿಡು ಬಿಟ್ಟಿರುತ್ತಾರೆ. ಕೊಪ್ಪಳದ ರಾಹುಲ್ ಗಾಂಧಿಗಳಾದ ಇವರ ದುರಾಡಳಿತದ ವಿರುದ್ಧ ಜೆಡಿಎಸ್ ಕ್ಷೇತ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ಆಯ್ಕೆ

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ