ಬಳ್ಳಾರಿ, ಜು.16. ಬಳ್ಳಾರಿ ನಗರದ ಡಿಎಆರ್ ಆವರಣದಲ್ಲಿ ಬುಧವಾರ ಅಂದಾಜು 8 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 36 ಪೊಲೀಸ್ ಸಿಬ್ಬಂದಿ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿ, ಪೊಲೀಸರು ಹಗಲು ರಾತ್ರಿ ಎನ್ನದಂತೆ ಕರ್ತವ್ಯ ನಿರ್ವಹಿಸುತ್ತಾ ಸಾರ್ವಜನಿಕರನ್ನು ಮತ್ತು ಅವರ ಕುಟುಂಬಗಳನ್ನು ರಕ್ಷಿಸುತ್ತಾರೆ
ಅಂತಹ ಅಧಿಕಾರಿಗಳಿಗೆ ಅವರ ಕುಟುಂಬದ ನೆಮ್ಮದಿಗಾಗಿ ಮನೆಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದರು.
ಅಂದಾಜು 8 ಕೋಟಿ ರೂಪಾಯಿಗಳ ವೆಚ್ಚದಲ್ಲಿ 36 ಪೊಲೀಸ್ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ ಪ್ರಯುಕ್ತ ಇಂದು ಭೂಮಿ ಪೂಜೆ ನೆರವೇರಿಸಿ ಪೋಲಿಸ್ ವಸತಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ, ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಂಡು ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಳ್ಳಾರಿಯ ಐಜಿಪಿ ವರ್ತಿಕಾ ಕಟಿಯಾರ್, ಎಸ್ಪಿ ಡಾ. ಶೋಭಾ ರಾಣಿ, ಎಎಸ್ಪಿ ರವಿಕುಮಾರ್, ಡಿಎಸ್ಪಿ ನಂದಾರೆಡ್ಡಿ, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ಚಾನಾಳ್ ಶೇಖರ್, ಹಗರಿ ಗೋವಿಂದ ಸೇರಿದಂತೆ ಮತ್ತಿತರರು ಇದ್ದರು.







