ಕೊಪ್ಪಳ:
ಕೆಲದಿನಗಳ ಹಿಂದೆ ಕೊಪ್ಪಳದಲ್ಲಿ ಪ್ರೇಮ ವಿಚಾರಕ್ಕೆ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಗವಿಸಿದ್ದಪ್ಪನ ತಂದೆ, ತಾಯಿ ಮತ್ತು ಸಹೋದರಿಯವಿರುದ್ಧ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಕೊಲೆಯಾದ ಯುವಕ ಗವಿಸಿದ್ದಪ್ಪ ನಾಯಕ ಪ್ರೀತಿಸಿದ ಮುಸ್ಲಿಂ ಯುವತಿಯ ತಾಯಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಗವಿಸಿದ್ದಪ್ಪನು ತನ್ನ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ವಾಗಿ ಅತ್ಯಾಚಾರವೆಸಗಿದ್ದಾನೆ. ನಮಗೆ ನ್ಯಾಯ ಕೊಡಿಸಿ ಎಂದು ಅಪ್ರಾಪ್ತ ಬಾಲಕಿಯ ತಾಯಿ ಮತ್ತು ಸಹೋದರಿ ಕೆಲದಿನಗಳ ಹಿಂದೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದರು.
ಅಪ್ರಾಪ್ತ ವಯಸ್ಕ ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ಗವಿಸಿದ್ದಪ್ಪ ಹಾಗೂ ಅವರ ತಂದೆ-ತಾಯಿ, ಅಕ್ಕನ ಮೇಲೆ ಕೊಪ್ಪಳ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಭಿಕರವಾಗು ಕೊಲೆಯಾದ ಗವಿಸಿದ್ದಪ್ಪನ ಕುಟುಂಬಕ್ಕೆ ನ್ಯಾತ ಒದಗಿಸಬೇಕು. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ವಾಲ್ಮೀಕಿ ನಾಯಕ ಮಹಾಸಭಾದಿಂದ ಕೊಪ್ಒಳ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಸರ್ವ ಸಮಾಜ ಬೆಂಬಲ ನೀಡಿದ್ದರು. ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನೇತೃತ್ವದಲ್ಲಿ ಪ್ರಕರಣವನ್ನು ಎನ್ ಐಎ ತನಿಖೆಗೆವಹಿಸಬೇಕು ಎಂದು ರಾಜ್ಯಪಾಲರಿಗೆ ದೂರು ನೀಡಿದ್ದರು. ಕೊಲೆ ಘಟನೆ ಅಧೀವೇಶನದಲ್ಲಿ ಚರ್ಚೆಯಾಗಿ ದೇಶದಾದ್ಯಂತ ಸುದ್ದಿಯಾಗಿತ್ತು. ಕೊಲೆ ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಈಗ ಕೊಲೆಯಾದ ಯುವಕ ಪ್ರೀತಿಸಿದ್ದ ಎನ್ನಲಾದ ಯುವತಿಯ ತಾಯಿ ಅತ್ಯಾಚಾರ ಮಾಡಲಾಗಿದೆ ಎಂಬ ದೂರು ನೀಡಿದ್ದರಿಂದ ಪೋಕ್ಸೊ ದಾಖಲಾಗಿದೆ. ಈಗ ಪ್ರಕರಣಜ್ಕೆ ಹೊಸ ತಿರುವು ಪಡೆದುಕೊಂಡಿದ್ದು, ಪೊಲೀಸ್ ಇಲಾಖೆಗೆ ತಲೆನೊವ್ವಾಗಿ ಪರಿಣಮಿಸಲಿದೆ..







