ಹಿಟ್ನಾಳ್ ಗೆ ಕೈತಪ್ಪಿದ ಸಚಿವ ಸ್ಥಾನ: ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ ರಾಜೀನಾಮೆ- ಕೆಲವು ಕಾಂಗ್ರೆಸ್ ಪದಾಧಿಕಾರಿಗಳು ರಾಜೀನಾಮೆ

ಕೊಪ್ಪಳ.(ಸಮರ್ಥವಾಣಿ)
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ಸಚಿವ ಸಂಪುಟ ವುಸ್ತರಣೆಯಲ್ಲಿ ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಬೆಸತ್ತು ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಗೊಂಡಬಾಳ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಜೊತೆಗೆ ಕೊಪ್ಪಳ ಬ್ಲಾಕ್ ಕಾಂಗ್ರೆಸ್ಇನ ಕೆಲವು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆದ್ಬಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪೂರ ಅವರಿಗೆ ರಾಜೀನಾಮೆ ಸಲ್ಲಿಸಿರುವ ಅವರು ಸ್ವತಂತ್ರ ಬಂದು 75 ವರ್ಷಗಳು ಗತಿಸಿದರೂ ಕೂಡ ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಇಲ್ಲಿಯವರೆಗೂ ಕೂಡ ಸಚಿವ ಸ್ಥಾನ ದೊರಕಿಲ್ಲ. ನಿರಂತರವಾಗಿ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಹಾಗೂ ಹ್ಯಾಟ್ರಿಕ್ ಶಾಸಕರಾಗಿ ಆಯ್ಕೆಯಾಗಿ ಕೊಪ್ಪಳದ ರಾಜಕೀಯ ಇತಿಹಾಸದಲ್ಲಿ ದಾಖಲೆ ಬರೆದಂತಹ ಹಾಗೂ ಹೈದ್ರಾಬಾದ್ ಕರ್ನಾಟಕ ವ್ಯಾಪ್ತಿಯ ಎಲ್ಲಾ 41 ಕ್ಷೇತ್ರಗಳಲ್ಲಿ ಏಕೈಕ ಕುರುಬ ಸಮಾಜದ ಶಾಸಕರಾಗಿ ಹೊರಹೊಮ್ಮಿರುವ ನಮ್ಮೆಲ್ಲರ ನೆಚ್ಚಿನ ಸಹೋದರ ಶ್ರೀ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡದಿರುವುದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಮತ್ತು ನಮಗೆ ಬೇಸರದ ಸಂಗತಿಯಾಗಿದೆ. ಆದ ಕಾರಣ ಕೊಪ್ಪಳ ಜಿಲ್ಲಾ ಕಾಂಗ್ರೆಸಿನ ಮಹಿಳಾ ಅಧ್ಯಕ್ಷರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ಹಾಗಾಗಿ ಇದನ್ನು ತಾವುಗಳು ಅಂಗೀಕರಿಸಬೇಕೆಂದು ಕೊರಿದ್ದಾರೆ.






