ಕೊಪ್ಪಳ (ಸಮರ್ಥವಾಣಿ) ಹರೀಶ ಕುಲಕರ್ಣಿ
ಕಾಂಗ್ರೇಸ್ ಪಕ್ಷದಲ್ಲಿ ಸಂಘಟನಾತ್ಮಕವಾಗಿ ಭಾರಿ ಬದಲಾವಣೆಗಳಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ ನೂತನವಾಗಿ ನೇಮಕ ನಾಡಿದ್ದು, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಾರಥ್ಯವನ್ನು ಮಾಜಿ ಸಚಿವ, ಸರಳ, ಸಜ್ಜನಿಕೆಯ ರಾಜಕಾರಣಿ ಗಂಗಾವತಿಯ ಮಲ್ಲಿಕಾರ್ಜುನ ನಾಗಪ್ಪ ಅವರಿಗೆ ವಹಿಸಲಾಗಿದ್ದು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಅವರನ್ನು ನೇಮಕ ನಾಡಲಾಗಿದೆ.
ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ನೇಮಕ ಮಾಡಿ ಆದೇಶ ಮಾಡಿದ್ದಾರೆ. ರಾಜ್ಯದಲ್ಲಿ ಬಿ.ಕೆ.ಹರಿಪ್ರಸಾದ ಅವರು ಕೆಪಿಸಿಸಿ ಅಧ್ಯಕ್ಷರಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ ನಾಯಕರನ್ನು ಗುರುತಿಸುವ ಕೆಲಸವಾಗುತ್ತಿದೆ. ಈ ಹಿನ್ನೆಯಲ್ಲಿ ಕಾಂಗ್ರೆಸ್ ಪಕ್ಷಲ್ಲಿ ಕಳೆದ ಐದಾರು ದಶಕಳಿಂದ ನಿಷ್ಟಾವಂತರಾಗಿರುವ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಪ್ತರಾಗಿರುವ ಗಂಗಾವತಿಯ ಮಲ್ಲಿಕಾರ್ಜುನ ನಾಗಪ್ಪ ಅವರಿಗೆ ಕೊಪ್ಪಳ ಜಿಲ್ಲಾ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲಾಗಿದೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಭಿನಂದಿಸಿದ್ದಾರೆ. ಈ ಕುರಿತು ಮಾತನಾಡಿದ ನೂತನ ಕೊಪ್ಪಳ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ ಅವರು ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು, ಜಿಲ್ಲೆಯ ಸಚಿವರು, ಶಾಸಕರು, ಎಲ್ಲಾ ನಾಯಕರು, ಕಾರ್ಯಕರ್ತರು ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಎಲ್ಲರಿಗೂ ಅಭಿನಂದಿಸುತ್ತೇನೆ ಮತ್ತು ಪಕ್ಷದ ನಾಯಕರ ವಿಶ್ವಾದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಒತ್ತು ನೀಡುತ್ತೇನೆ ಎಂದರು.







