28th December 2024
ಶುಭೋದಯ ವಾರ್ತೆ ಚೀಟಗುಪ್ಪ :ಔರಾದ್ ತಾಲ್ಲೂಕಿನ ಬೆಳಕುಣಿ(ಚೌ)-ಮುಂಗನಾಳ ಮಾರ್ಗವಾಗಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಔರಾದ್ ಪೊಲೀಸರು ಬಂಧಿಸಿದ್ದಾರೆ ಚೀಲದಲ್ಲಿ ಗಾಂಜಾ ತುಂಬಿಕೊಂಡು ಬೈಕ್ ಮೇಲೆ ತೆರಳುತ್ತಿರುವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರಿಂದ ಸೂಮಾರು 5 ಲಕ್ಷ ರೂ.ಮೌಲ್ಯದ ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಿಕೊಳ್ಳಲಾಗಿದೆ ಇಬ್ಬರು ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಇನ್ನೊಬ್ಬ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ಪಿಎಸ್ಐ ವಸೀಮ್ ಪಟೇಲ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
ಘಟನೆಗೆ ಸಂಬಂಧಿಸಿದಂತೆ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ವರದಿ ನೂರಅಲಿ
undefined
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ ಸಹಾಯವಾಣಿ-೧೯೩೦ ಹಾಗೂ ವೆಬ್ಬಾಟ್ ಉನ್ನತೀಕರಣ
ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಅಲೆಮಾರಿ ಸಮುದಾಯ ಜನರಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಲಾಗಿದೆ ಜಾಗೃತಿ ಮೂಡಿಸಿ ಸವಲತ್ತು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು -ಪಲ್ಲವಿ ಜಿ.