21st May 2026

ಬಳ್ಳಾರಿ,ಮೇ.20: ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್ ಹೇಳಿದರು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ಓಬಿಸಿ ಘಟಕದ ಸ್ವಾಗತ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಬೂತ್ ಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿತಗೊಳಿಸುವ ಉದ್ದೇಶದಿಂದ ‘ನನ್ನ ಬೂತ್ – ನನ್ನ ಜೊತೆಗೆ’ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಪ್ರತಿಯೊಂದು ಬೂತ್ನಲ್ಲಿ 11ರಿಂದ 15 ಮಂದಿ ಹಿಂದುಳಿದ ವರ್ಗದವರನ್ನು ಗುರುತಿಸಿ ಸಂಘಟನೆಯೊಂದಿಗೆ ತೊಡಗಿಸುವ ಕಾರ್ಯ ನಡೆಯಲಿದೆ. ಅದರಲ್ಲಿ ಮಹಿಳೆಯರಿಗೂ ಅವಕಾಶ ಕಲ್ಪಿಸಲಾಗುತ್ತದೆ,” ಎಂದು ಹೇಳಿದರು.
ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 3 ಸಾವಿರದಿಂದ 4 ಸಾವಿರ ಮಂದಿ ಹಿಂದುಳಿದ ವರ್ಗದವರನ್ನು ಪಕ್ಷದ ಚಟುವಟಿಕೆಗೆ ಸೆಳೆಯುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.
“ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ನನ್ನ ಕಚೇರಿಗೆ ಭೇಟಿ ನೀಡಬಹುದು. ಆದರೆ ಪಕ್ಷದ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕು,” ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಂ ಪ್ರಶಾಂತ್ ಮಾತನಾಡಿ, “ಓಬಿಸಿ ಘಟಕದ ಸಂಘಟನೆಗೆ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ. ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕೆಲಸವನ್ನು ಎಲ್ಲರೂ ಒಟ್ಟಾಗಿ ಮಾಡಬೇಕು,” ಎಂದರು.
ಜಿಲ್ಲಾ ಓಬಿಸಿ ಘಟಕದ ಅಧ್ಯಕ್ಷ ಸರಗು ನಾಗರಾಜ್ ಮಾತನಾಡಿ, “ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಗಟ್ಟಿಯಾಗಿದ್ದು, ಓಬಿಸಿ ಘಟಕದ ಮೂಲಕ ಇನ್ನಷ್ಟು ಜನರನ್ನು ಪಕ್ಷದೊಂದಿಗೆ ಸಂಪರ್ಕಿಸುವ ಕಾರ್ಯ ಕೈಗೊಳ್ಳಲಾಗುತ್ತದೆ,” ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು. ಡಿ.ಟಿ. ಶ್ರೀನಿವಾಸ್ ಅವರ ಭೇಟಿ ಜಿಲ್ಲಾ ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ ತುಂಬಿದೆ ಎಂದು ಪಕ್ಷದ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಎನ್.ಐ.ಎ.ಎಸ್. ಸಂಸ್ಥೆ ಸಹಕಾರದೊಂದಿಗೆ ಲಕ್ಕುಂಡಿಯ ನೂರೊಂದು ಬಾವಿ ದೇವಾಲಯಗಳನ್ನು ದೇಶಕ್ಕೆ ಅನಾವರಣಗೊಳಿಸಲಾಗುವುದು: ಸಚಿವ ಎಚ್.ಕೆ. ಪಾಟೀಲ

ಸಂಸದ ರಾಜಶೇಖರ ಹಿಟ್ನಾಳ್ಗೆ ಗಂಗಾವತಿ ಬಿಎಲ್ಎ ಉಸ್ತುವಾರಿ- ಹೆಚ್.ಆಆರ್.ಶ್ರೀನಾಥ ಸ್ವಾಗತ: ನಮ್ಮನ್ನು ಕಡೆಗಣಿಸಬೇಡಿ- ಸಚಿವ ತಂಗಡಗಿ, ಸಂಸದ ಹಿಟ್ನಾಳ್, ಜಿಲ್ಲಾಧ್ಯಕ್ಷ ಬಯ್ಯಾಪುರ್ಗೆ ಎಚ್ಚರಿಕೆ-

ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಪೋಟ- ತಂಗಡಗಿ ಮತ್ತು ಅನ್ಸಾರಿ ಬೆಂಬಲಿಗರ ಮುಸುಕಿನ ಗುದ್ದಾಟ- ಸಾಮಾಜಿಕ ಜಾಲ ತಾಣದಲ್ಲಿ ಕಾರ್ಯಕರ್ತರ ಟಾಕ್ ವಾರ್ -