
30th July 2025
ಕಾಸರಗೋಡು : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, 'ಕನ್ನಡದ ನಡಿಗೆ ಶಾಲೆಯ ಕಡೆಗೆ" ಶೈಕ್ಷಣಿಕ ಶಿಬಿರದ 4ನೇ ಕಾರ್ಯಕ್ರಮವು 2025 ಆಗಸ್ಟ್ 2ರಂದು ಬೆಳಗ್ಗೆ 10ರಿಂದ ಎಡನೀರಿನ ಸ್ವಾಮೀಜೀಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಎಡನೀರು ಶ್ರೀಮಠದ ವ್ಯವಸ್ಥಾಪಕ ರಾಜೇಂದ್ರ ಕಲ್ಲೂರಾಯರು ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಕೋಶಾಧಿಕಾರಿ ಪ್ರೊ. ಅನಂತ ಪದ್ಮನಾಭ ರಾವ್ ಸಭೆಯ ಅಧ್ಯಕ್ಷತೆ ವಹಿಸುವರು. ಎಡನೀರು ಸ್ವಾಮೀಜೀಸ್ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿಲಕ್ಷ್ಮಿ, ಎಡನೀರು ಸ್ವಾಮೀಜೀಸ್ ಪ್ರೌಢಶಾಲೆಯ ಪಿಟಿಎ ಅಧ್ಯಕ್ಷ ನಾರಾಯಣನ್ ಶುಭ ಹಾರೈಸುವರು. ಕಾರ್ಯಕ್ರಮದಲ್ಲಿ ಅಕ್ಷರ ಲೋಕದ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸಾಧಕರಾದ ರಾಜೇಂದ್ರ ಕಲ್ಲೂರಾಯರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ-2025 ಪ್ರದಾನ ನಡೆಯಲಿದೆ. ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿಗಳಾದ ಶಿಕ್ಷಣ ತಜ್ಞ ವಿ ಬಿ ಕುಳಮರ್ವ, ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿರಾಜ್ ಅಡೂರು ಭಾಗವಹಿಸುವರು. ಸಂಘಟನೆಯ ಸ್ಥಾಪಕ ಸಂಚಾಲಕರಾದ ಡಾ ಕೆ ವಾಮನ್ ರಾವ್ ಬೇಕಲ್ ಹಾಗೂ ಸಂಘಟನೆಯ ಜಿಲ್ಲಾ ಖಜಾಂಜಿ ಸಂಧ್ಯಾರಾಣಿ ಟೀಚರ್ ಉಪಸ್ಥಿತರಿರುವರು. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೆಂಕಟಕೃಷ್ಣ, ಸಂಘಟನೆಯ ಉಪಾಧ್ಯಕ್ಷ ವಿಜಯರಾಜ ಪುಣಿಂಚಿತ್ತಾಯ ಬೆಳ್ಳೂರು, ಸಂಘಟನಾ ಕಾರ್ಯದರ್ಶಿ ಶಾರದಾ ಮೊಳೆಯಾರ್ ಎಡನೀರು, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಮೊದಲಾದವರು ಸಹಕರಿಸುವರು.
ಡಾ. ರಾಜೇಂದ್ರ. ಟಿ. ಎಲ್.ತಲ್ಲೂರು ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆಯ ಪ್ರಮಾಣ ಪತ್ರ ವಿತರಣೆ
ಮಲ್ಲಯ್ಯ ಅಜ್ಜ ದೇವರ ನೂತನ ಸರಪಳಿ ಕಟ್ಟೆಯ ಸರಪಳಿ ಹರಿಯುವ ಕಲ್ಲು, ಪ್ರತಿಷ್ಠಾಪನೆ ಕಾರ್ಯಕ್ರಮ
ಬೆಳಗಾವಿ ಜಿಲ್ಲಾ ಕ.ಸಾ.ಪ ವತಿಯಿಂದ 'ನುಡಿ ತೆರಿಗೆ ನೂರೊಂದು ಕಾರ್ಯಕ್ರಮ' - ಶಿರಿಷ ಜೋಶಿಯವರ ಬಹುಮುಖ ಸಾಹಿತ್ಯಕ ಸೇವೆ ಶ್ಲಾಘನೀಯ.- ಡಾ. ಗುರುದೇವಿ ಹುಲ್ಲೆಪ್ಪನವರ ಮಠ
ಬೆಳಗಾವಿ ಜಿಲ್ಲಾ ಕ.ಸಾ.ಪ ವತಿಯಿಂದ 'ನುಡಿ ತೆರಿಗೆ ನೂರೊಂದು ಕಾರ್ಯಕ್ರಮ' - ಶಿರಿಷ ಜೋಶಿಯವರ ಬಹುಮುಖ ಸಾಹಿತ್ಯಕ ಸೇವೆ ಶ್ಲಾಘನೀಯ.- ಡಾ. ಗುರುದೇವಿ ಹುಲ್ಲೆಪ್ಪನವರ ಮಠ ಅಭಿಮತ