

3rd December 2025

ಹುಣಸಿಗಿ- ಕರ್ನಾಟಕ ಸಾಹಿತ್ಯ ಅಕಾಡೆಮಿ ನಾಡಿನ ತುಂಬಾ ಮನೆ ಬಾಗಿಲಿಗೆ ಸಾಹಿತ್ಯ ಮತ್ತು ಸಾಂಸ್ಕೃತಿಕತೆಯ ಪರಿಚಯ ಮಾಡುತ್ತಿದೆ ಎಂದು ಕಸಾಪ ಅಧ್ಯಕ್ಷರಾದ ವೆಂಕಟಗಿರಿ ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅವರು ಯಾದಗಿರಿ ಜಿಲ್ಲೆಯ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬೆನಕನಕಹಳ್ಳಿ ಪ್ರೌಢ ಶಾಲೆಯಲ್ಲಿ ಇಂದು *ರಾಷ್ಟ್ರಕವಿ ಕುವೆಂಪು* ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಪತ್ರಿಕೆಯೊಂದನ್ನು ಲೋಕಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
*ರಾಷ್ಟ್ರಕವಿ ಕುವೆಂಪು* ಕುರಿತು ಅನುಭಾವಿ ಕವಿ ಲೇಖಕ ಕನಕಪ್ಪ ವಾಗನಗೇರಿ ಅವರು ವಿಶೇಷ ಉಪನ್ಯಾಸ ನೀಡಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಡಾ. ಸಿದ್ಧರಾಮ ಹೊನ್ಕಲ್ ಅವರು ಚಕೋರ ಕಾರ್ಯಕ್ರಮದ ಉದ್ದೇಶ ತಿಳಿಸಿ ಕುವೆಂಪು ಬೇಂದ್ರೆ ಮುಂತಾದವರು ನಮ್ಮ ನಾಡಿನ ಹೆಮ್ಮೆಯ ಕವಿಗಳು ಎಂದು ಆಶಯ ನುಡಿಯಲ್ಲಿ ಸ್ಮರಿಸಿದರು.
ಮುಖ್ಯ ಅತಿಥಿಯಾಗಿ ನಾಗನಗೌಡ ಪಾಟೀಲ ನಿಕಟಪೂರ್ವ ಕಸಾಪ ಗೌರವ ಕಾರ್ಯದರ್ಶಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಸಂಗಮ್ಮ ನಾಗಾವಿ ವಹಿಸಿದ್ದರು. ಅವರು ಚಕೋರದ ಮೂಲಕ ತಮ್ಮ ವಿದ್ಯಾರ್ಥಿಗಳಿಗೆ ಸಾಹಿತ್ಯ ಪರಿಚಯ ಮಾಡಿದ್ದು ಸಂತೋಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಅಮೃತ ಅರಳಗುಂಡಗಿ,ಉಪಾಧ್ಯಕ್ಷರಾದ ಶಿವಾಜಿ ಗುಂತಾ, ನಿವೃತ್ತ ಶಿಕ್ಷಕರಾದ ಬಸವರಾಜ ಕೋಳ್ಕೂರ,ಚಂದ್ರಕಾಂತ ಕುಲಕರ್ಣಿ, ಹಣಮಂತ್ರಾಯ ಗುಂತಾ,ಮಾನಪ್ಪ ಚಿಕ್ಕ ಹೆಬ್ಬಾಳ,ತಿರುಪತಿ ದೊರೆ ಮುಂತಾದ ಶಿಕ್ಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಸಣ್ಣೆಕ್ಕೆಪ್ಪ ಪೂಜಾರಿ ಸ್ವಾಗತಿಸಿದರು ಹಾಗೂ ಜಾನಪದ ಹಾಗೂ ತತ್ವಪದಕಾರ ಕವಿ ಸಾಹೇಬಗೌಡ ಬಿರಾದಾರ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಂಘಟಿಸಿ ನಿರ್ವಹಿಸಿದವರು .
undefined

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ - ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ-- -ಎಸಿಪಿ ನಾರಾಯಣ ಬರಮನಿ ಅಭಿಮತ

ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲರಿಂದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹೆಚ್ಚುವರಿ ಹೊಸ ಕೊಠಡಿಗಳ ಕಾಮಗಾರಿಗೆ ಭೂಮಿ ಪೂಜೆ

ಪರಿಮಳ ಪ್ರಕಾಶನ ಮತ್ತು ಪರಿಮಳ ಸಾಂಸ್ಕೃತಿಕ ವಾಹಿನಿ ಸಹಯೋಗದಲ್ಲಿ ಬೆಳಗಾವಿ ಸಾಹಿತ್ಯೋತ್ಸವ -2025