

16th January 2026

ಬೈಲಹೊಂಗಲ : ಸೌದತ್ತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಮ್ದರ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲ ದಿನಗಳ ಹಿಂದೆ ಬೈಲರ್ ಸ್ಫೋಟ ವಾಗಿ ತೀವ್ರವಾಗಿ ಗಾಯಗೊಂಡಿದ್ದ ಕಾರ್ಮಿಕರು ಚಿಕಿತ್ಸೆ ಕಾಣದೆ ಮೃತಪಟ್ಟಿದ್ದರು ಇಷ್ಟಾದರೂ ಕೂಡ ಕಾರ್ಖಾನೆಯ ಮಾಲೀಕರು ಮತ್ತು ಆಡಳಿತ ಮಂಡಳಿ ಮೃತಪಟ್ಟ ಕುಟುಂಬಗಳಿಗೆ ಪೂರ್ಣ ಪ್ರಮಾಣದ ಪರಿಹಾರವನ್ನು ನೀಡದೆ ವಿಳಂಬ ನೀತಿ ಅನುಸರಿಸಿದ್ದನ್ನು ಖಂಡಿಸಿ ಕಿತ್ತೂರು ಕರ್ನಾಟಕ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ್ ಕುಲ್ಕರ್ ನೇತೃತ್ವದಲ್ಲಿ ಕಾರ್ಖಾನೆ ಎದುರುಗಡೆ ಪ್ರತಿಭಟನೆ ಮಾಡಿದರು.
ಕಾರ್ಖಾನೆಯಲ್ಲಿಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳದೇ ಇರುವ ಕಾರಣದಿಂದ ಎಂಟು ಜನ ಮೃತಪಟ್ಟಿದ್ದು ಇರುತ್ತದೆ. ಆದ್ದರಿಂದ ಕಾರ್ಮಿಕರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು ಹಾಗೂ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಇನ್ನು ಮುಂದಾದರೂ ಗುಣಮಟ್ಟದ ಸುರಕ್ಷತಾ ಕ್ರಮಗಳನ್ನು ಮತ್ತು ಭದ್ರತೆ ಒದಗಿಸುವ ಸಲುವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕಾರ್ಮಿಕ ಇಲಾಖೆಯ ನಿಯಮನುಸಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಾರ್ಮಿಕರಿಗೆ ಒದಗಿಸಬೇಕು ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳ ಕೈಗೊಂಡು ಕಾರ್ಮಿಕರ ಜೀವ ಕಾಪಾಡಬೇಕು ಎಂದು ಒತ್ತಾಯಿಸಿದರು.
ಇಷ್ಟೆಲ್ಲಾ ಅನಾಹುತಗಳು ನಡೆದರೂ ಕೂಡ ಕಾರ್ಖಾನೆಯ ಮಾಲೀಕರು ಬಂದು ಮೃತ ಕುಟುಂಬದವರಿಗೆ ಸಾಂತ್ವನ ಹೇಳ್ದೆ ಇರುವುದನ್ನು ತೀವ್ರವಾಗಿ ಖಂಡಿಸಿದ ಪ್ರತಿಭಟನೆಕಾರರು ಮತ ಕುಟುಂಬದವರಿಗೆ ಮತ್ತು ಕಾರ್ಮಿಕರಿಗೆ ಸರಿಯಾಗಿ ಸ್ಪಂದಿಸದಿದ್ದರೆ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ
ಶಿವಾನಂದ ಕೋಲಕಾರ , ರಾಜು ಬೋರಣ್ಣವರ , ಸಣಗೌಡ ಸಂಗನಗೌಡರ, ದೀಪಕ್ ಶಟೋಜಿ,
ಪ್ರವೀಣ ಕಾಜಗಾರ, ಶಿವಾನಂದ ಕುರಬೆಟ್, ಅಭಿಷೇಕ್ ಕಲಾಲ, ಸಿದ್ಧಾರೂಢ ಹೊಂಡಪ್ಪನವರ, ಮಲ್ಲಿಕಾರ್ಜುನ ಬಾಜಿ ,ಆನಂದ ಪಾಟೀಲ, ಸೋಮು ತೋಟಗಿ ಇನ್ನೂ ಅನೇಕ ಕಾರ್ಯಕರ್ತರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವೀರಶೈವ ಲಿಂಗಾಯತ ಸಮಾಜದ ಶ್ರೀಮತಿ ಗಿರಿಜಮ್ಮ ಅಕ್ಕಿ (50) ರಸ್ತೆ ಅಪಘಾತದಲ್ಲಿ ನಿಧನ
-1768489815566.jpg)
ಸಂಕ್ರಾ0ತಿಯ0ದು ಹಾಡುಹಗಲೇ ಯುವತಿಯ ಬರ್ಬರ ಹತ್ಯೆ ಮದುವೆಯಾಗಲೊಪ್ಪದ ಪ್ರಿಯತಮೆಯ ಕತ್ತುಸೀಳಿದ ಪ್ರಿಯಕರ

ಬಳ್ಳಾರಿಯಲ್ಲಿ ಕಳಪೆ ರಸ್ತೆ ಕಾಮಗಾರಿಕೆ ಆರೋಪ : ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ವಿರೋಧ