ಬೆಳಗಾವಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಪ್ರತಿಯೊಬ್ಬರೂ ಸದಾ ಸ್ಮರಿಸಬೇಕು ಎಂದು ಎಸ್ಡಿಎಂಸಿ ಅಧ್ಯಕ್ಷರಾದ ಸಿದ್ದಪ್ಪ ನಾಗನೂರ ಹೇಳಿದರು.
ಅವರು ಬೈಲಹೊಂಗಲ್ ತಾಲೂಕಿನ ಹಣ್ಣಿಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಅನೇಕ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನವನ್ನೇ ದೇಶಕ್ಕಾಗಿ ಮುಡಿಪಾಗಿಟ್ಟಿದ್ದಾರೆ. ಅವರ ತ್ಯಾಗ, ಹೋರಾಟ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಆದ್ದರಿಂದ ದೇಶದ ಏಕತೆ, ಸಮಗ್ರತೆ ಹಾಗೂ ಸಾರ್ವಭೌಮತ್ವವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು. ಈವೇಳೆ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ರಾಚನಾಯ್ಕ ಪಾಟೀಲ ಮಾತನಾಡಿದರು. ಮುಖ್ಯ ಶಿಕ್ಷಕ ಎನ.ಎನ.ಜೋಳದ ಸ್ವಾಗತಿಸಿದರು. ಈ ವೇಳೆ ಸಿದ್ದು ಬೋಳನ್ನವರ. ರಾಮ ಬಳಗಣ್ಣವg ಸೇರಿದಂತೆ ಎಲ್ಲ ಎಸಡಿಎಂಸಿ ಸದಸ್ಯರು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು. ಶ್ರೀಮತಿ ವಿ.ಎನ್.ಯಲಿಗಾರ ಮತ್ತು ಶಿಕ್ಷಕಿರು ಧ್ವಜಸ್ಥಂಭದ ಪೂಜೆ ನೆರವೇರಿಸಿದರು. ಶಾಲೆಯ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತ, ಭಾಷಣ, ವಿವಿಧ ವೇಶಭುಷಣ, ಭಾವಗೀತೆಗಳನ್ನು ವಿದ್ಯಾರ್ಥಿಗಳು ಹಾಡಿದರು. ಸುನಿತಾ ದಳವಾಯಿ ನಿರೊಪಿಸಿದರು. ಹೆಚ್ ಹಾಲಮ್ಮ ವಂದಿಸಿದರು. ಈ ವೇಳೆ ಹಿರಿಯ ಶಿಕ್ಷಕ ಬಿ.ಎಮ್.ಕಡೋಲಕರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಎಸ ಬಿ ಲಠ್ಠೆ ಕೆ.ಡಿ. ತೋರಣಗಟ್ಟಿ, ಮತ್ತು ಸರೋಜನಿ ಮಾಳನ್ನವರ ಉಪಸ್ತಿತರಿದ್ದರು







