


17th June 2026
ಮೂಲಸೌಕರ್ಯಗಳನ್ನು ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡುವಂತೆ ಬಿಜೆಪಿ ಮುಖಂಡ ಕಿರಣ ಜಾಧವ್ ಅವರು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ರಾಜ್ಯ ಸಚಿವ ಭೂಪತಿ ರಾಜು ಶ್ರೀನಿವಾಸ ವರ್ಮಾ ಅವರಿಗೆ ಮನವಿ ಮಾಡಿದರು.
ಮಂಗಳವಾರ ನಗರಕ್ಕೆ ಭೇಟಿ ನೀಡಿದ್ದ ಸಚಿವರನ್ನು ಭೇಟಿಯಾದ ಅವರು, ಉತ್ತರ ಕ್ಷೇತ್ರದ ಆಟೋನಗರ ಮತ್ತು ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ನೂರಾರು ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸುತ್ತಿವೆ. ಆದರೆ, ಕೈಗಾರಿಕೆಗಳ ಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯಗಳ ಅಭಿವೃದ್ಧಿಯಾಗದಿರುವುದರಿಂದ ಉದ್ಯಮಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.
ಪ್ರಮುಖವಾಗಿ ಕೈಗಾರಿಕಾ ಪ್ರದೇಶಗಳಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು, ಸಮರ್ಪಕ ಒಳಚರಂಡಿ ವ್ಯವಸ್ಥೆ ನಿರ್ಮಿಸುವುದು, ನಿರಂತರ ವಿದ್ಯುತ್ ಪೂರೈಕೆ, ಕುಡಿಯುವ ನೀರಿನ ಸೌಲಭ್ಯ, ಬೀದಿ ದೀಪಗಳ ವ್ಯವಸ್ಥೆ, ಮಳೆ ನೀರು ಹರಿದು ಹೋಗಲು ಅಗತ್ಯ ವ್ಯವಸ್ಥೆ ಹಾಗೂ ಕೈಗಾರಿಕೆಗಳಿಗೆ ಅಗತ್ಯವಾದ ಇತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಮನವಿ ಮಾಡಿದರು.
ಬೆಳಗಾವಿ ದೇಶದ ಪ್ರಮುಖ ಕೈಗಾರಿಕಾ ನಗರಗಳಲ್ಲಿ ಒಂದಾಗಿದ್ದು, ಇಲ್ಲಿನ ಫೌಂಡ್ರಿ, ಎಂಜಿನಿಯರಿಂಗ್, ಆಟೋಮೊಬೈಲ್ ಮತ್ತು ಉತ್ಪಾದನಾ ಕ್ಷೇತ್ರಗಳು ದೇಶದ ಆರ್ಥಿಕ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿವೆ. ಆದ್ದರಿಂದ ಆಟೋನಗರ ಮತ್ತು ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದರೆ ಹೊಸ ಹೂಡಿಕೆಗಳು ಬರಲಿದ್ದು, ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಕಿರಣ ಜಾಧವ್ ಅಭಿಪ್ರಾಯಪಟ್ಟರು.
ಮನವಿಗೆ ಸ್ಪಂದಿಸಿದ ಸಚಿವ ಭೂಪತಿ ರಾಜು ಶ್ರೀನಿವಾಸ ವರ್ಮಾ ಅವರು, ಕೈಗಾರಿಕಾ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿತ ಇಲಾಖೆಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಕ್ತಿಯಾರ್ ಪಠಾಣ ಸೇರಿದಂತೆ ಸ್ಥಳೀಯ ಕೈಗಾರಿಕೋದ್ಯಮಿಗಳು, ಬಿಜೆಪಿ ಮುಖಂಡರು ಇದ್ದರು.
-
----

13th June 2026
ಯರಗಟ್ಟಿ: ಪಟ್ಟಣದ ಎಸ್ ಜಿ ಕೆ ಡಿಫೆನ್ಸ್ ಅಕಾಡೆಮಿಯಿಂದ 160 ಅಗ್ನಿವೀರ ಆಯ್ಕೆಯಾದ ಯುವಕರನ್ನು ಶುಕ್ರವಾರ ಅಕಾಡೆಮಿಯಿಂದ ಜೈ ಜೈವಾನ್ ಜೈ ಕಿಸಾನ್ ವಿವಿದ್ದೋದೇಶದ ಸಹಕಾರಿ ಸಂಘದಲ್ಲಿ ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ SDK ಡಿಫನ್ಸ್ ಅಕಾಡೆಮಿ ಕೊಚೆರ್
ಒಂದಷ್ಟು ಬಡ ಯುವಕರ ಕೋಚಿಂಗ್ ವೆಚ್ಚ ವನ್ನು SB ಫೌಂಡೇಶನ್ ಅಧ್ಯಕ್ಷ ಸುರೇಶ ಭಜಂತ್ರಿ ನೋಡಿಕೊಳ್ಳುವ ಮೂಲಕ ಸಮಾಜ ಸೇವೆ ಮೊದಲ ಪ್ರಯತ್ನದಲ್ಲಿ ಸುಮಾರು 150 ಯುವಕರನ್ನು ಅಗ್ನಿವೀರ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ
ಸುರೇಶ ಭಜಂತ್ರಿಯವರ ಈ ಸಮಾಜಮುಖಿ ಕಾರ್ಯ ಹೀಗೆ ಮುಂದುವರೆಯಲಿ ಎಂದು ಹೇಳಿದರು
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಾಜಿ ಸೈನಿಕ ಕುಮಾರ ಹಿರೇಮಠ ಮಾತನಾಡಿ ಅವರು ಕೇಂದ್ರ ಸರ್ಕಾರ ದೇಶಪ್ರೇಮವನ್ನು ಬಿಂಬಿಸುವ ಮತ್ತು ಯುವಕರನ್ನು ಉತ್ತೇಜಿಸುವ ಅತ್ಯುತ್ತಮ ಯೋಜನೆ ಅಗ್ನಿವೀರು ಕಾರ್ಯಕ್ರಮವಾಗಿದೆ.
ಸ್ಥಳೀಯ ಯುವಕರ ಸಾಧನೆಯನ್ನು ಗುರುತಿಸಿ ಗೌರವಿಸುವುದು, ಅವರಿಗೆ ಸಮಾಜದಲ್ಲಿ ಸಿಗುವ ಮನ್ನಣೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಎಸ್ ಬಿ ಫೌಂಡೇಶನ್ ಅಧ್ಯಕ್ಷ ಸುರೇಶ ಭಜಂತ್ರಿ, ಯುವ ಮುಖಂಡ ಸತೀಶ ತಡಸಲೂರ, ಜೆ.ರತ್ನಾಕರ ಶೆಟ್ಟಿ,ಕರವೇ ತಾಲೂಕ ಅಧ್ಯಕ್ಷ ರಫೀಕ್ DK DSS ಮುಖಂಡ ಚಿದಂಬರ ಕಟ್ಟಿಮನಿ ಫಾರೂಕ್ ಅತ್ತಾರ ಮಾಜಿ ಸೈನಿಕರಾದ ರಾಜೇಶ ಕೊಜಾರ, ಮಹಾಂತೇಶ ಚನ್ನಮೇತ್ರಿ, ಎಸ್ ಜಿ ಕೆ ಅಕಾಡೆಮಿಯ ಕೊಚ್ ಕೊಟ್ರೇಶ ಎಚ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

12th June 2026
ಬೈಲಹೊಂಗಲ- ನಗರದಲ್ಲಿ ಸುರಿದ ಭಾರೀ ಮಳೆಯಿಂದ ಅನೇಕ ಮನೆಗಳು ಕುಸಿದು ಬಿದ್ದಿದ್ದು, ಅಂಗಡಿಗಳಲ್ಲಿ ನೀರು ಹೊಕ್ಕು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಶೀಘ್ರ ಪರಿಹಾರ ಹಾಗೂ ಅಗತ್ಯ ನೆರವು ದೊರೆಯುವಂತೆ ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ತಹಶೀಲ್ದಾರ್ ಸದಾಶಿವ ಮೆಕ್ಕೋಜಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ, ಮಂಡಲ ಅಧ್ಯಕ್ಷ ಸುಭಾಷ್ ತುರಮರಿ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಪ್ರವೀಣ ಶಿಂಗಾರಿ, ಸದಾಶಿವ ಪಾಟೀಲ, ಮಹಾನಿಂಗ ಬಂಡಿವಡ್ಡರ ಹಾಗೂ ಮನೆ ಕಳೆದುಕೊಂಡ ನಿರಾಶ್ರಿತರು, ಹಾಗೂ ವ್ಯಾಪಾರಸ್ಥರು ಉಪಸ್ಥಿತರಿದ್ದರು

13th December 2025
ಬೈಲಹೊಂಗಲ- ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ವಸತಿ ಸಚಿವರಾದ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಅತಿವೃಷ್ಟಿಯಿಂದ ಹಾನಿಗೊಳವಾದ ಮನೆಗಳಿಗೆ ಕೊಡಗು ಮತ್ತು ಮಡಿಕೇರಿ ಯಲ್ಲಿ ಅಂದಿನ ಮುಖ್ಯಮಂತ್ರಿH. d. ಕುಮಾರಸ್ವಾಮಿ ಅವರ ಸರ್ಕಾರದಿಂದ 12 ಲಕ್ಷ ಮನೆ ಕಟ್ಟಲಿಕ್ಕೆ ನೀಡಿದ್ದು ಮತ್ತು ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಇದ್ದ ಕಾಲದಲ್ಲಿ 5 ಲಕ್ಷ ನೀಡಿದ್ದು ಈಗ ಸಿದ್ದರಾಮಯ್ಯನವರು ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಅತಿವೃಷ್ಟಿಯಿಂದ ಹಾನಿಯಾದ ಮನೆಗಳಿಗೆ 1 ಲಕ್ಷ ನೀಡುತ್ತಿದ್ದು ಅದನ್ನು 5 ಲಕ್ಷ ನೀಡಬೇಕೆಂದು ಜಾತ್ಯಾತೀತ ಜನತಾದಳದ ಪಕ್ಷ ಜಿಲ್ಲಾಧ್ಯಕ್ಷರಾದ ಶಂಕರ ಭ ಮಾಡಲಗಿ ಅವರ ನೇತೃತ್ವದಲ್ಲಿ ವಸತಿ ಸಚಿವರಿಗೆ ಬೈಲಹೊಂಗಲ ಪಟ್ಟಣದಲ್ಲಿ ಮನವಿಯನ್ನ ಸಲ್ಲಿಸಿ ಸರ್ಕಾರಕ್ಕೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬೈಲಹೊಂಗಲ್ ಜೆಡಿಎಸ್ ತಾಲೂಕಾ ಅಧ್ಯಕ್ಷರು ಸುಭಾಷ್ ಬಾಗೇವಾಡಿ ರೈತ ಮುಖಂಡರಾದ ಮಡಿವಾಳಪ್ಪ ಹೋಟಿ, ಶ್ರೀ ಶೈಲ್ ಯಡಳ್ಳಿ , ಎಂವಾಯ್ ಸೋಮಣ್ಣವರ, ರಾಮು ರಜಪೂತ , ರಾಜು ಕಡಕೋಳ ,ಬಸ್ಸು ಗಂಗಪ್ಪನವ ,ಸಾಂಗ್ಲಪ್ಪಣ್ಣರ ಎಲ್ಲಾ ಜೆಡಿಎಸ್ ಪಕ್ಷದ ಕಾರ್ಯಕರ್ತರು ರೈತರು ತಾಲೂಕಿನ ಸಮಸ್ತ ಹಿರಿಯರು ಹಾಜರಿದ್ದರು.

31st October 2025
ಬೈಲಹೊಂಗಲ- ಇಲ್ಲಿಯ ಶ್ರೀ ಕರೆಮ್ಮ ದೇವಿಯ ಪ್ರಸನ್ನ ಪತ್ರಿ ಬಸವನಗರ ಹಾಗೂ ವಿನಾಯಕ್ ನಗರದಲ್ಲಿ ವರ್ಷ ಪದ್ಧತಿಯಂತೆ ಈ ವರ್ಷವೂ ಶ್ರೀ ಕರಿಮ್ಮ ದೇವಿ ಗುಡಿಯ ಮುಂದೆ ದೀಪೋತ್ಸವವನ್ನು ಆಚರಿಸಲಾಯಿತು.ಬೆಳಗಾವಿಯ ಡಿ.ಸಿ.ಸಿ ಬ್ಯಾಂಕಿಗೆ ನೂತನವಾಗಿ ನಿರ್ದೇಶಕರಾದ ಮಹಾಂತೇಶ್ ದೊಡ್ಡ ಗೌಡರ ಮತ್ತು ನಾನಾ ಸಾಹೇಬ್ ಪಾಟೀಲ್ ಮತ್ತು ಕುಮಾರ್ ಪಾಟೀಲ್ ಸಂಜಯ್ ಗೌಡ ಪಾಟೀಲ್ ಮತ್ತು ಉಮಾ ಏನಗಿ ಇವರು ಸಹ ನೂತನವಾಗಿ ನಮ್ಮ ಬೈಲಹೊಂಗಲ್ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆಯಾಗಿರುವದಕ್ಕೆ ಸತ್ಕರಿಸಲಾಯಿತು.
ಸತ್ಕಾರ ಸಮಾರಂಭದಲ್ಲಿ ಸದ್ಭಕ್ತರು ಪಾಲ್ಗೊಂಡಿದ್ದರು.

18th July 2025
ಬೆಳಗಾವಿ : ರೈತರ ಅನುಕೂಲಕ್ಕಾಗಿ, ಅವರ ಬೆಳೆಗಳನ್ನು ರಕ್ಷಿಸಲು ತಕ್ಷಣದಿಂದಲೇ ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಲು ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ.
ಭೆಳಗಾವಿ ಉತ್ತರ ವಲಯ ಮುಖ್ಯ ಅಭಿಯಂತರರ ಕಚೇರಿಯಲ್ಲಿ ಶುಕ್ರವಾರ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿದ ಸಚಿವರು, ರೈತರು ಖುಷಿಯಾಗಿದ್ದರೆ ದೇಶವೇ ಖುಷಿಯಾಗಿರುತ್ತದೆ. ನಾವೆಲ್ಲ ಖುಷಿಯಾಗಿರುತ್ತೇವೆ. ಹಾಗಾಗಿ ರೈತರ ಅನುಕೂಲಕ್ಕಾಗಿ ಇಂಂದಿನಿಂದಲೇ ಕಾಲುವೆಗಳಿಗೆ ನೀರನ್ನು ಹರಿಬಿಡಲಾಗುವುದು. ಕೊನೆಯವರೆಗೆ ತಲುಪುವವರೆಗು ನೀರು ಹರಿಯಲಿದೆ. ಯಾರೂ ಆತಂಕಪಡಬೇಕಾಗಿಲ್ಲ ಎಂದು ತಿಳಿಸಿದರು.
ಈವರೆಗೆ ಉತ್ತಮ ಮಳೆಯಾಗಿದೆ. ಮುಂದೆ ಕೂಡ ರೇಣುಕಾ ಯಲ್ಲಮ್ಮನ ಕೃಪೆಯಿಂದ ಉತ್ತಮ ಮಳೆಯಾಗಲಿದೆ ಎಂದು ಆಶಿಸೋಣ. ಕುಡಿಯುವ ನೀರಿನ ಪ್ರಮಾಣ ಉಳಿಸಿಕೊಂಡು, ನೀರಾವರಿಗಾಗಿರುವ 4 ಟಿಎಂಸಿ ನೀರಿನಲ್ಲಿ ಕೊನೆಯ ಹಂತದವರೆಗೂ ತಲುಪುವವರೆಗೆ ನಿಲ್ಲಿಸದೆ ನೀರು ಹರಿಸಲಾಗುವುದು ಎಂದು ಅವರು ತಿಳಿಸಿದರು.
ರೈತರು ಬೆಳೆ ರಕ್ಷಣೆಗಾಗಿ ನೀರು ಬಿಡುವಂತೆ ಕೋರಿದ್ದರು. ಹಾಗಾಗಿ ಸಲಹಾ ಸಮಿತಿ ಸಭೆ ನಡೆಸಿದ್ದೇನೆ. ರೈತ ಮುಖಂಡರು, ಜನಪ್ರತಿನಿದಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ನೀರು ಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ರೈತರಿಗೆ ಎಲ್ಲ ದೃಷ್ಟಿಯಿಂದ ಅನುಕೂಲವಾಗಬೇಕೆನ್ನುವುದು ನಮ್ಮ ಉದ್ದೇಶ. ಮುಂದೆ ಕೂಡ ಉತ್ತಮ ಮಳೆಯಾಗಲಿದೆ ಎನ್ನುವ ಆಶಾಭಾವನೆ ಇದೆ ಎಂದು ಅವರು ಹೇಳಿದರು.
ಮಾಜಿ ಸಚಿವ, ಶಾಸಕ ಸಿ.ಸಿ.ಪಾಟೀಲ ಮಾತನಾಡಿ, ರೈತರ ಹಾಗೂ ನಮ್ಮೆಲ್ಲರ ಮನವಿಗೆ, ಭಾವನೆಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ತಕ್ಷಣ ನೀರು ಬಿಡುಗಡೆಗೆ ಆದೇಶ ನೀಡಿದ್ದಾರೆ. ಅವರಿಗೆ ಎಲ್ಲರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಶಾಸಕ ಬಿಬಿ ಚಿಮ್ಮನಕಟ್ಟಿ, ಮಹಾಮಂಡಳಿ ಅಧ್ಯಕ್ಷ ಸದುಗೌಡ ಪಾಟೀಲ, ಪ್ರಭಾರಿ ಪ್ರಾದೇಶಕ ಆಯುಕ್ತರೂ ಆಗಿರುವ ಜಿಲ್ಲಾಧಿಕಾರಿ ಮಹ್ಮದ್ ರೋಷನ್, ಮುಖ್ಯ ಎಂಜಿನಿಯರ್ ಅಶೋಕ ವಾಸನದ, ಸುಪರಿಂಟೆಂಡೆಂಟ್ ಎಂಜಿನಿಯರ್ ಲಕ್ಷ್ಮಣ ನಾಯಕ, ಎಸ್.ಬಿ.ಮಲ್ಲಿಗವಾಡ, ಮುದಿಗೌಡರ್ ಮೊದಲಾದವರು ಇದ್ದರು.

18th July 2025
ಬೆಳಗಾವಿ- ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯಲ್ಲೂ ಹಿಂದೆ ಬಿದ್ದಿಲ್ಲ. ಎರಡನ್ನೂ ಅಚ್ಚುಕಟ್ಟಾಗಿ ಮುಂದುವರಿಸಿಕೊಂಡು ಹೊಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯ ಜಂಟಿ ಸಾರಿಗೆ ಕಚೇರಿ, ಬೆಳಗಾವಿ ವಿಭಾಗದ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಬಡವರಿಗಾಗಿ ಬಿಜೆಪಿಗರು ಒಂದೇ ಒಂದು ಯೋಜನೆ ತಂದ ಉದಾಹರಣೆ ಇಲ್ಲ, ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವುದು ವಿರೋಧಿಗಳಿಗೆ ಬೇಕಿಲ್ಲ, ಜನರಿಗೆ ಅವರು ಯಾವತ್ತೂ ಒಳ್ಳೆಯದನ್ನು ಮಾಡಿಲ್ಲ. ನಮ್ಮ ಯೋಜನೆಗಳನ್ನು ಟೀಕಿಸುತ್ತಿದ್ದ ಅವರು ಈಗ ಬಿಹಾರ ಚುನಾವಣೆ ಸಂದರ್ಭದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದ್ದಾರೆ ಎಂದರು.
ಸಾರಿಗೆ ಇಲಾಖೆಯ ನೂತನ ಕಟ್ಟಡದಿಂದಾಗಿ ಬೆಳಗಾವಿಯ ಎರಡನೇ ರಾಜಧಾನಿ ಸ್ಥಾನಮಾನಕ್ಕೆ ಮತ್ತೊಂದು ಗರಿ ಮೂಡಿದಂತಾಗಿದೆ. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಳಗಾವಿಯಲ್ಲಿ ಹಂತ ಹಂತವಾಗಿ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿದ್ದು, ಈಗ ಸುಸಜ್ಜಿತ ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಜಂಟಿ ಸಾರಿಗೆ ಆಯುಕ್ತರ ಕಚೇರಿ ಕೂಡ ಹೊಸ ಕಟ್ಟಡವನ್ನು ಹೊಂದಿದಂತಾಗಿದೆ. ಇದು ನಮ್ಮ ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದರು.
ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ ಎನ್ನುವ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿಯ ಜೊತೆ ಜೊತೆಗೇ ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನೂ ಮುಂದುವರಿಸಿಕೊಂಡು ಬರುತ್ತಿದೆ. ರಾಜ್ಯದ ಆದಾಯದಲ್ಲಿ ಬಹು ದೊಡ್ಡ ಪಾಲನ್ನು ನೀಡುವ ಸಾರಿಗೆ ಇಲಾಖೆಗೆ ಉತ್ತಮ ಮೂಲಭೂತ ಸೌಲಭ್ಯಗಳು ಕೂಡ ಅಗತ್ಯ. ಹಾಗಾಗಿ ನಮ್ಮ ಸರ್ಕಾರ ಅಂತಹ ಕಟ್ಟಡವನ್ನು ಇಲ್ಲಿ ಒದಗಿಸಿದೆ. ಇಲ್ಲಿಂದ ಜನರಿಗೆ ತ್ವರಿತ ಮತ್ತು ಕಿರುಕುಳ ರಹಿತ ಸೇವೆ ಸಿಗಲಿದೆ ಎಂದು ಆಶಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಸಾರಿಗೆ ಇಲಾಖೆ ಸಿಬ್ಬಂದಿ ಜನಸ್ನೇಹಿಯಾಗಿ ಕೆಲಸ ನಿರ್ವಹಿಸಬೇಕು. ಕಿರುಕುಳವಿಲ್ಲದೆ ಸೇವೆ ನೀಡುವ ಮೂಲಕ ನಮ್ಮ ಸರಕಾರಕ್ಕೆ ಒಳ್ಳೆಯ ಹೆಸರು ತರಬೇಕು. ರಾಮಲಿಂಗಾ ರೆಡ್ಡಿ ಅವರು ನಮ್ಮ ಸರ್ಕಾರದ ಅತ್ಯಂತ ಹಿರಿಯ ಸಚಿವರು. ನಮ್ಮೆಲ್ಲರಿಗೆ ಹಿರಿಯಣ್ಣನಂತೆ, ಅವರಿಂದಾಗಿ ಇಲಾಖೆಗೆ ಹೆಚ್ಚಿನ ಗೌರವ ಬಂದಿದೆ. ರಾಮಲಿಂಗಾ ರೆಡ್ಡಿ ಅವರು ಸಾರಿಗೆ ಇಲಾಖೆಯ ಅಧಿಕಾರ ವಹಿಸಿಕೊಂಡಾಗಿನಿಂದ ಇಲಾಖೆಗೆ ಹೊಸ ಸ್ವರೂಪ ನೀಡಿದ್ದಾರೆ. ಅನೇಕ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಇನ್ನೂ ಹೆಚ್ಚಿನ ಬಸ್ ಒದಗಿಸಬೇಕು ಎಂದು ಸಚಿವರು ವಿನಂತಿಸಿದರು.
ಕಾರ್ಯಕ್ರಮದಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರಡ್ಡಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಶಾಸಕರಾದ ಆಸಿಫ್ ಸೇಠ್, ಮಹಾಂತೇಶ ಕೌಜಲಗಿ, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಸಾರಿಗೆ ಮತ್ತು ರಸ್ತೆಯ ಸುರಕ್ಷತೆಯ ಆಯುಕ್ತರಾದ ಯೋಗೀಶ್ ಎ.ಎಂ, ಬೆಳಗಾವಿ ನಗರ ಪೋಲೀಸ್ ಆಯುಕ್ತರಾದ ಭೂಷಣ ಗುಲಾಬರಾವ್ ಬೋರಸೆ, ಜಂಟಿ ಆಯುಕ್ತರಾದ ಓಂಕಾರೇಶ್ವರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಹೆಚ್ಚುವರಿ ಆಯುಕ್ತರಾದ ಹಾಲಸ್ವಾಮಿ, ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗೇಶ ಮುಂಡಾಸೆ, ಬಿ.ಪಿ.ಉಮಾಶಂಕರ್, ಪುರುಷೋತ್ತಮ್, ಸಿ.ಟಿ.ಮೂರ್ತಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.