*ನಾಳೆ ಸೋಮವಾರ ಹಣ್ಣಿಕೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ*
ಬೆಳಗಾವಿ: ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2026ನೇ ಸಾಲಿನ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಹಣ್ಣಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹಣ್ಣಿಕೇರಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ (ಸಿಆರ್‌ಪಿ) ಎಸ್. ಎಸ್. ಪಾಟೀಲ ಅವರು ತಿಳಿಸಿದ್ದಾರೆ.
ಈ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ ಸ್ಪರ್ಧೆಗಳು ಹಾಗೂ ಗುಂಪು ಆಟಗಳ ಸ್ಪರ್ಧೆಗಳು ನಡೆಯಲಿವೆ.
ಕ್ಲಸ್ಟರ್ ಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಶಿಕ್ಷಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಕ್ರೀಡಾಪಟುಗಳು ನಾಳೆ ಸೋಮವಾರ ಬೆಳಿಗ್ಗೆ 9:30ಕ್ಕೆ ಸರಿಯಾದ ಸಮಯಕ್ಕೆ ಹಾಜರಿರಬೇಕು ಎಂದು ಅವರು ಕರೆ ನೀಡಿದ್ದಾರೆ.

