ಬೆಳಗಾವಿ : ಬೈಲಹೊಂಗಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಶ್ರೀ ಶ್ರೀಶೈಲ್ ಕಡಾಡಿ ಅವರು ಇಂದು ಸೋಮವಾರ ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ (PEO) ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ತಾಲೂಕಿನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಹಕಾರ ಮತ್ತು ಮಾರ್ಗದರ್ಶನದೊಂದಿಗೆ ಕ್ರೀಡಾ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸಂಘಟಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.
"ತಾಲೂಕಿನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಎಂದಿನಂತೆ ತಮ್ಮ ಅಮೂಲ್ಯ ಸಹಕಾರ ನೀಡಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕು" ಎಂದು ಅವರು ಮನವಿ ಮಾಡಿದರು.
ನೂತನವಾಗಿ ಅಧಿಕಾರ ಸ್ವೀಕರಿಸಿದ ಶ್ರೀಶೈಲ್ ಕಡಾಡಿ ಅವರಿಗೆ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಕ್ರೀಡಾಭಿಮಾನಿಗಳು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಮುಂದಿನ ಕಾರ್ಯಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಅವರಿಗೆ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸುವಾಯಿತು..

