ಬೆಳಗಾವಿ : ಬೈಲಹೊಂಗಲ್ ತಾಲೂಕಿನ
ಹಣ್ಣಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಿಕ್ಷಕರಿಗೆ ಗೌರವ ಸಲ್ಲಿಸುವುದರ ಜೊತೆಗೆ, ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ವಹಿಸುವ ಮಹತ್ವದ ಪಾತ್ರವನ್ನು ಸ್ಮರಿಸುವ ಮೂಲಕ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಶುಭಾರಂಭ ನೀಡಿದರು. ನಂತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸರ್ವಪಲ್ಲಿ ಡಾ. ಸರ್ವೇಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗೆ ಗುಲಾಬಿ ಹೂಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಿ, ಶಿಕ್ಷಕರ ಮೇಲಿನ ತಮ್ಮ ಪ್ರೀತಿ, ಗೌರವ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.
ನಂತರ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ನೃತ್ಯ, ಗಾಯನ, ಭಾಷಣ, ಕವನ ವಾಚನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅತ್ಯಂತ ಸುಂದರವಾಗಿ ಪ್ರದರ್ಶಿಸಿದರು. ಪ್ರತಿಯೊಂದು ಕಾರ್ಯಕ್ರಮದಲ್ಲಿಯೂ ವಿದ್ಯಾರ್ಥಿಗಳಲ್ಲಿ ಶಿಕ್ಷಕರ ಮೇಲಿರುವ ಅಪಾರ ಪ್ರೀತಿ, ಗೌರವ, ಸ್ವೀಕೃತಿ ಹಾಗೂ ಕೃತಜ್ಞತೆಯ ಭಾವನೆಗಳು ವ್ಯಕ್ತವಾದವು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಕಾರ್ಯವೈಖರಿ, ಬೋಧನಾ ವಿಧಾನ, ಸರಳವಾಗಿ ವಿಷಯವನ್ನು ಅರ್ಥೈಸುವ ರೀತಿ, ಮಕ್ಕಳನ್ನು ಪ್ರೀತಿಯಿಂದ ಪ್ರೋತ್ಸಾಹಿಸುವ ಗುಣ ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಕೊಡುಗೆಯನ್ನು ಕವನ ಮತ್ತು ಭಾಷಣಗಳ ಮೂಲಕ ಮನಮುಟ್ಟುವಂತೆ ವಿವರಿಸಿದರು.
ಇದೇ ಸಂದರ್ಭದಲ್ಲಿ ಶಾಲೆಯ SDMC ಸದಸ್ಯರ ವತಿಯಿಂದ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು ಹೂವು ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಶಿಕ್ಷಕರಿಗೆ ಗೌರವಪೂರ್ವಕವಾಗಿ ಕಾಣಿಕೆಗಳನ್ನು ನೀಡಿ, ಸಿಹಿ ಹಂಚುವ ಮೂಲಕ ಶಿಕ್ಷಕರ ದಿನಾಚರಣೆಯ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲಾಯಿತು.
ಕಾರ್ಯಕ್ರಮವನ್ನು ಶಾಲೆಯ ವಿದ್ಯಾರ್ಥಿನಿ ಕು. ಶಿಲ್ಪಾ ಬಿಶೆಟ್ಟಿ ಅಚ್ಚುಕಟ್ಟಾಗಿ ನಿರೂಪಿಸಿದರು. ಕು. ಸಾಧನಾ ಪಾಟೀಲ್ ಸ್ವಾಗತಿಸಿ, ವಂದಿಸಿದರು.

