9th October 2024

ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಇವರು ಗೋವಾ ರಾಜ್ಯಕ್ಕೆ ಉತ್ತಮ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಬೆಳಗಾವಿ - ಖಾನಾಪುರ - ರಾಮನಗರ - ಅನಮೋಡ ಮಾರ್ಗವಾಗಿ ಗೋವಾ ಬಾರ್ಡರ ( 84 ಕಿ.ಮಿ ) ವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಹಾಗೂ ಬೆಳಗಾವಿ- ಜಾಂಬೋಟಿ - ಕಣಕೊಂಬಿ ಚೋರ್ಲಾ ಘಾಟ್ ವರೆಗೆ ಅಲ್ಫಾಲ್ಟ್ ರಸ್ತೆ ( 43 ಕಿ.ಮಿ ) ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತು ಅನುದಾನ ಸಹ ಬಿಡುಗಡೆಯಾಗಿದ್ದು ಆದರೆ ಕಾಮಗಾರಿ ಪ್ರಾರಂಭವಾಗದೇ ಇರುವ ಬಗ್ಗೆ ಕಾರಣ ತಿಳಿಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಧಾರವಾಡ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇವರ ಜೊತೆ ದಿನಾಂಕ 08- 10- 2024 ಸಾಯಂಕಾಲ ಸಭೆ ನಡೆಸಿದರು.
ಪ್ರಸ್ತಾಪಿತ ಎರಡು ರಸ್ತೆಗಳು ಬೆಳಗಾವಿಯಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಬಹುಮುಖ್ಯವಾದ ರಸ್ತೆಗಳು ವ್ಯಾಪಾರ, ವಹಿವಾಟು ಮತ್ತು ಸರಕು ಸಾಗಾಣಿಕೆಗೆ ತುಂಬಾ ಉಪಯುಕ್ತಕರ. ಆದರೆ ಇವೆರಡೂ ರಸ್ತೆಗಳು ತುಂಬಾ ಹಾಳಾದ ಹಿನ್ನೆಲೆಯಲ್ಲಿ ವಾಹನ ಸಂಚಾರ ಕುಂಠಿತಗೊಂಡಿದ್ದು, ಸಾರ್ವಜನಿಕರಿಂದ ಹಾಗೂ ವ್ಯಾಪಾರಸ್ಥರಿಂದ ಅನೇಕ ದೂರುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಆಯಾ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪ್ರಸ್ತಾಪಿತ ಎರಡು ರಸ್ತೆಗಳ ಕಾಮಗಾರಿಗಳನ್ನು ಕೂಡಲೇ ಆರಂಭಿಸುವಂತೆ ಸೂಚಿಸಿದರು.
ಮುಂದುವರೆದು ಬೆಳಗಾವಿ ( ಶಗಣಮಟ್ಟಿ ) ಹುನಗುಂದ ಮಾರ್ಗವಾಗಿ ರಾಯಚೂರು ನಡುವಿನ ನಿರ್ಮಾಣ ಪ್ರಾಥಮಿಕ ಹಂತದಲ್ಲಿರುವ ರಸ್ತೆ ಕಾಮಗಾರಿಯ ಬಗ್ಗೆ ಪ್ರಗತಿಯ ಬಗ್ಗೆ ವಿವರಗಳನ್ನು ಸಹ ಅಧಿಕಾರಿಗಳಿಂದ ಸಂಸದರು ಪಡೆದರು.
ಸಭೆಯಲ್ಲಿ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ಶ್ರೀ ಭುವನೇಶ್ವರ ಕುಮಾರ, ಶ್ರೀ ಪವನ್ ಹಾಗೂ ಭೂಸ್ವಾಧೀನ ಅಧಿಕಾರಿಗಳಾದ ಶ್ರೀಮತಿ ರಾಜಶ್ರೀ ಜೈನಾಪೂರ, ಶ್ರೀ ಚೌವ್ಹಾಣ್ ಹಾಜರಿದ್ದರು.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*