23rd October 2024

*ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ ಲಾಡ ಭೇಟಿ; ರೈತರ ಅಹವಾಲು ಆಲಿಕೆ*
*ಧಾರವಾಡ ಅಕ್ಟೋಬರ್ :* ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಇಂದು ಮದ್ಯಾಹ್ನ ಜಿಲ್ಲೆಯ ಅಮ್ಮಿನಭಾವಿ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲೆಯ ಮಳೆ ಹಾನಿ ಕುರಿತು ಹಾನಿಯಾದ ಮನೆಗಳಿಗೆ ಹಾಗೂ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.
ಅವರು ರೈತರೊಂದಿಗೆ ಮಾತನಾಡಿ, ಬೆಳೆ ಹಾನಿ ಕುರಿತು ಪ್ರತಿ ರೈತರನ ಜಮೀನುಗಳನ್ನು ತಪ್ಪದೇ ನಿಖರವಾಗಿ ಸಮೀಕ್ಷೆ ಮಾಡಿ, ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರಕ್ಕೆ ಜಿಲ್ಲೆಯ ಬೆಳೆ ಹಾನಿ ಕುರಿತು ವಿಶೇಷ ವರದಿ ಸಲ್ಲಿಸಿ, ಪರಿಹಾರ ಪಡೆಯಲು ಕ್ರಮವಹಿಸಲಾಗುವುದು ಎಂದರು.
ಈ ವಾರವೂ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರೈತರಿಗೆ ಹಾಗೂ ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ತಕ್ಷಣ ಪರಿಹರಿಸಲು ಮತ್ತು ಗ್ರಾಮಗಳಲ್ಲಿಯ ಸ್ಥಾನಿಕ ಅಧಿಕಾರಿಗಳಿದ್ದು, ಜನರಿಗೆ ನೆರವಾಗಲು ಸೂಚಿಸಲಾಗಿದೆ. ಬೆಳೆ ನಷ್ಟ ಕುರಿತು ಬೇಗ ವರದಿ ಸಿದ್ದಪಡಿಸಲು ಹಾಗೂ ವಿಮೆ ಮಾಡಿರುವ ರೈತರಿಗೆ ತಕ್ಷಣದ ಪರಿಹಾರ ಸಿಗುವಂತೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶಿಸಲಾಗಿದೆ ಎಂದು ಅವರು ಹೇಳಿದರು.
ರೈತರು ಅಕಾಲಿಕ ಮತ್ತು ಅತಿಯಾದ ಮಳೆಯಿಂದ ಆಗುವ ನಷ್ಟದಿಂದ ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಹಾಗೂ ಬೆಳೆ ವಿಮೆ ಮಾಡಿಸಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಆ್ಯಪ್ ಹಾಗೂ ಬೆಳೆ ವಿಮೆ ಕುರಿತು ವ್ಯಾಪಕ ಪ್ರಚಾರ ಮಾಡುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಬೇಕು. ಈ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
*ಮನೆ ಹಾನಿ:* ನಿರಂತರ ಮಳೆಯಿಂದಾಗಿ ತೀವ್ರ ಹಾನಿಗೆ ಒಳಗಾಗಿರುವ ಅಮ್ಮಿನಭಾವಿಯ ಮಡಿವಾಳಪ್ಪ. ಹನಮಂತಪ್ಪ. ಭೋವಿ ಅವರ ಮನೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಚಿವರು ಪರಿಶೀಲಿಸಿದರು. ಮನೆ ಹಾನಿ ಕುರಿತು ಭೋವಿ ಕುಟುಂಬದಿಂದ ಮಾಹಿತಿ ಪಡೆದು, ನಿಯಮಾನುಸಾರ ಅಧಿಕಾರಿಗಳು ಪರಿಹಾರ ವಿತರಿಸುವ ಬಗ್ಗೆ ಕ್ರಮ ಜರುಗಿಸುತ್ತಾರೆ ಎಂದು ಹೇಳಿದರು.
ತಹಶೀಲ್ದಾರ ಡಿ.ಎಚ್.ಹೂಗಾರ ಅವರು ಮಳೆಯಿಂದಾಗಿ ಗ್ರಾಮದಲ್ಲಿ ಒಟ್ಟು 14 ಮನೆಗಳು ಹಾನಿಯಾಗಿವೆ ಎಂದು ತಿಳಿಸಿದರು.
*ಈರುಳ್ಳಿ ಬೆಳೆ ಹಾನಿ:* ಅಕಾಲಿಕ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ಅಮ್ಮಿನಭಾವಿ ಗ್ರಾಮದ ರೈತ ಬಸಪ್ಪ.ಧರ್ಮಪ್ಪ.ರಸಾಳೆ ಅವರ ಈರುಳ್ಳಿ ತೋಟಕ್ಕೆ ಭೇಟಿ ನೀಡಿದ ಸಚಿವರು ಸ್ವತಃ ಈರುಳ್ಳಿ ಬೆಳೆ ಹಾಳಾಗಿರುವುದನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ರೈತ ಬಸಪ್ಪ ಮಾತನಾಡಿ, ತಮ್ಮ ಪಾಲಿಗೆ ಇರುವ ಎರಡು ಎಕರೆ ಜಮೀನುದಲ್ಲಿ ಮಳೆ ಆಶ್ರಿತ ಬೆಳೆಯಾಗಿ ಈರುಳ್ಳಿಯನ್ನು ಬೆಳೆದಿದ್ದೆನೆ. ಕೊಯ್ಲಿಗೆ ಬಂದ ಸಮಯದಲ್ಲಿ ಈ ಮಳೆಯಿಂದಾಗಿ ಭೂಮಿಯಲ್ಲಿಯೇ ಈರುಳ್ಳಿ ಕೊಳೆಯುತ್ತಿದೆ. ಇದರಿಂದ ನನಗೆ ತುಂಬಾ ನಷ್ಟವಾಗಿದ್ದು, ಪರಿಹಾರ ದೊರಕಿಸಿಕೊಡುವಂತೆ ಸಚಿವರಲ್ಲಿ ಮನವಿ ಮಾಡಿದರು.
*ಹತ್ತಿ ಬೆಳೆ ಹಾನಿ:* ಅಮ್ಮಿನಭಾವಿ ಗ್ರಾಮದ ರೈತ ಮಹಿಳೆ ಫಕ್ಕಿರವ್ವಾ. ಮರಬಸಪ್ಪ. ಯಡಳ್ಳಿ ಅವರು ತಮ್ಮ ಎರಡು ಎಕರೆ ಜಮೀನುದಲ್ಲಿ ಬೆಳೆದಿಂದ ಹತ್ತಿ ಬೆಳೆ ಕೊಯ್ಲಿಗೆ ಬಂದಿದ್ದು, ಮಳೆಯಿಂದಾಗಿ ಗಿಡದಲ್ಲಿಯೇ ಹತ್ತಿ ಹಾಳಾಗಿದೆ. ಮುಂದಿನ ಬಿತ್ತನೆಗಾಗಿ ಸಹಾಯ ಮಾಡುವಂತೆ ತಮ್ಮ ಹತ್ತಿ ತೋಟಕ್ಕೆ ಭೇಟಿ ನೀಡಿದ್ದ ಸಚಿವರಲ್ಲಿ ವಿನಂತಿಸಿದರು.
ಮಳೆ ಹಾನಿ ಪ್ರದೇಶಗಳಿಗೆ ಸಚಿವರ ಭೇಟಿ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ. ಕೆ., ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ.ಗೋಪಾಲ ಬ್ಯಾಕೋಡ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೆ.ಸಿ ಭದ್ರಣ್ಣವರ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ತಹಶಿಲ್ದಾರ ಡಿ.ಎಚ್.ಹೂಗಾರ, ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಇಮ್ತಿಯಾಜ್ ಚಂಗಾಪುರಿ, ಕೃಷಿ ಸಹಾಯಕ ನಿರ್ದೇಶಕ ಅನಗೌಡರ, ಉಪ ತಹಶೀಲ್ದಾರ ಅಜ್ಜಪ್ಪ ಮಂಗಳಗಟ್ಟಿ, ಕಂದಾಯ ನಿರೀಕ್ಷಕರಾದ ಗುರು ಸುಣಗಾರ, ಸಂಪತ್ತಕುಮಾರ ಗುರುವಡಿಯರ, ಗ್ರಾಮ ಆಡಳಿತ ಅಧಿಕಾರಿಗಳಾದ ವೆಂಕಟೇಶ್ ಹಟ್ಟಿಯವರ, ಪರಮಾನಂದ, ನಾಗಪ್ಪ, ಕವಿತಾ ಹಾಗೂ ಅಮ್ಮಿನಭಾವಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಮುಖಂಡರು ಉಪಸ್ಥಿತರಿದ್ದರು.
*****

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*