1st November 2024

ಕನ್ನಡಿಗನಿಗೆ ಕನ್ನಡ ಭಾಷಾಭಿಮಾನವಿರಲಿ: ಡಾ. ಅರ್ಜುನ ಜಂಬಗಿ
ಕನ್ನಡ ನಾಡಿನಲ್ಲಿ ಇರುವ ಪ್ರತಿಯೊಬ್ಬರು ಕನ್ನಡಿಗರು. ಅವರ ಮಾತೃಭಾಷೆ ಯಾವುದೇ ಇರಲಿ, ಕನ್ನಡದ ಬಗ್ಗೆ ಅಭಿಮಾನ ಹೊಂದಬೇಕು ಎಂದು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರಾದ ಡಾ. ಅರ್ಜುನ ಜಂಬಗಿ ಅಭಿಪ್ರಾಯಪಟ್ಟರು.
ಬೆಳಗಾವಿ
ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ೬೯ ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಮಹಾವಿದ್ಯಾಲಯದ ಪ್ರಭಾರ ಪ್ರಾಚಾರ್ಯರಾದ ಡಾ. ಅರ್ಜುನ ಜಂಬಗಿ ಅವರು ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಕರ್ನಾಟಕದಲ್ಲಿ ಕನ್ನಡವು ಸಾರ್ವಭೌಮ ಆಗಬೇಕು. ಕನ್ನಡ ಭಾಷೆಗೆ ಕರ್ನಾಟಕದ ಎಲ್ಲಾ ಕ್ಷೇತ್ರದಲ್ಲಿಯೂ ಪ್ರಥಮ ಪ್ರಾಶಸ್ತ್ಯ ಕೊಡಬೇಕು. ಕನ್ನಡವಿದ್ದರೆ ಕರ್ನಾಟಕ ಎಂಬುದನ್ನು ಪ್ರತಿಯೊಬ್ಬ ಕನ್ನಡಿಗನೂ ಅರ್ಥಮಾಡಿಕೊಳ್ಳಬೇಕು. ಕನ್ನಡ ಭಾಷೆ, ಸಂಸ್ಕೃತಿಗೆ ತುಂಬಾ ದೊಡ್ಡ ಇತಿಹಾಸವಿದೆ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಅತ್ಯಂತ ಶ್ರೀಮಂತ, ಸಮೃದ್ಧವೂ ಆಗಿದೆ ಎಂದರು. ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ವೈ ಎ ಜಕ್ಕಣ್ಣವರ್ ಅವರು ಏಕೀಕರಣ ಚಳುವಳಿ, ಡಾ. ನಾರಾಯಣ ನಾಯ್ಕ ನಾಡಿನ ಪ್ರಾಚೀನ ಇತಿಹಾಸದ ಕುರಿತು ಮಾತನಾಡಿದರು.
ವಿದ್ಯಾರ್ಥಿ ಅಭಿಷೇಕ ಹಿರೇಮಠ ಕನ್ನಡದ ರಾಜಮನೆತನಗಳ ಕುರಿತು ಮಾತನಾಡಿದರು. ವಿದ್ಯಾರ್ಥಿನಿ
ಗೀತಾ ಕಡೆಮನಿ ಕನ್ನಡಾಂಬೆಯ ಕುರಿತಾದ ಗೀತೆಗಳನ್ನು ಹಾಡಿದರು.
ಅಪೂರ್ವ ಗಡೆಕರ್ ವಂದಿಸಿದರು, ಲಕ್ಷ್ಮೀ ಮಾನ್ವಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ