3rd November 2024

ಧಾರವಾಡ ಜಿಲ್ಲೆಯ ಗರಗ ಹೋಬಳಿಯ ತಡಕೋಡ ಗ್ರಾಮದ ಗಣ್ಯ ಮನೆತನದ, ಈಗ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯ ಆಂಗ್ಲ ಭಾಷಾ ಶಿಕ್ಷಕರಾದ ಶ್ರೀ ಬಾಳೇಶ ಬಸವರಾಜ ಫಕ್ಕೀರಪ್ಪನವರ ಅವರು ಕಿತ್ತೂರು ರಾಣಿ ಚೆನ್ನಮ್ಮಾಜಿಯವರ 200ನೆಯ ವಿಜಯೋತ್ಸವದ ನಿಮಿತ್ತ ಚೆನ್ನಮ್ಮಾಜಿಯವರ ಐಕ್ಯ ಕ್ಷೇತ್ರವಾದ ಬೈಲಹೊಂಗಲ ಪಟ್ಟಣದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಭಾಗವಹಿಸಿ ಅತ್ಯುತ್ತಮ ಸ್ಥಾನ ಗಳಿಸಿದ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ ಅವರು ಶಾಲು ಹೊದಿಸಿ ಸ್ಮರಣಿಕೆ, ಪ್ರಪಂಚದ ಬೆಳಕು ಪ್ರಾತಿನಿಧಿಕ ಕವನ ಸಂಕಲನ, ಪುಷ್ಪಗುಚ್ಛ ನೀಡಿ ಸನ್ಮಾನಿಸಿ ಗೌರವಿಸಿದರು.
ಶ್ರೀ ಬಾಳೇಶ ಬಸವರಾಜ ಫಕ್ಕೀರಪ್ಪನವರ ಅವರಿಗೆ ಉಜ್ವಲ ಭವಿಷ್ಯ ಇದೆ ಎಂದರು. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಕಿತ್ತೂರು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಆಗಬೇಕೆಂದು ಶುಭಕೋರಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಶ್ರೀ ಮೋಹನ ಬಸನಗೌಡ ಪಾಟೀಲ ಅವರು ಮಾತನಾಡಿ ಶ್ರೀ ಬಾಳೇಶ ಅವರು ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ವಿದ್ಯಾವರ್ಧಕ ಸಂಘ ಮತ್ತು ಕೇಂದ್ರ ಬಸವ ಸಮಿತಿಯ ಬಸವ ಪಥ ಸದಸ್ಯರಾಗಿ ಗ್ರಾಮೀಣ ಪ್ರದೇಶದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ.ಅವರು ತಮ್ಮ ಬಿಡುವಿನ ಸಮಯದಲ್ಲಿ ಕನ್ನಡ ಸಾಹಿತ್ಯವನ್ನು ಮನೆ, ಮನಗಳಿಗೆ ತಲುಪಿಸುವ ಸೇವೆಯನ್ನು ಮಾಡಬೇಕೆಂದರು.

ಎಡನೀರು ಶ್ರೀಗಳಿಂದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ವಿದ್ಯುತ್ವ ಚಾಲನೆ......!

ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ