13th November 2024

ಇಲಾಖೆಗಳಿಂದ ಕಾಮಗಾರಿ ವಿಳಂಬ, ನಿμÁ್ಕಳಜಿಯಿಂದ ಆಗುವ ರಸ್ತೆ ಅಪಘಾತಗಳಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ನವೆಂಬರ 12: ಹಲವು ಸಲ ಸೂಕ್ತ ನಿರ್ದೇಶನಗಳನ್ನು ನೀಡಿದರೂ ಕೆಲವು ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳಲ್ಲಿ ವಿಳಂಬ, ನಿμÁ್ಕಳಜಿ ಕಾಣುತ್ತಿದೆ. ಇದರಿಂದ ಆಗುವ ರಸ್ತೆ ಅಪಘಾತ, ಜೀವ ಹಾನಿಗಳಿಗೆ ಕಾಮಗಾರಿ ವ್ಯಾಪ್ತಿಯ ಸಂಬಂಧಿತ ಅಧಿಕಾರಿಗಳನ್ನು ಸಹ ಜವಾಬ್ದಾರರನ್ನಾಗಿ ಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ರಸ್ತೆ ಸುರಕ್ಷಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಎಚ್ಚರಿಸಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿಯ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಅವಳಿ ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ಸಭೆಯಲ್ಲಿ ನೀಡಲಾಗುವ ಸೂಚನೆ, ಸಲಹೆಗಳನ್ನು ಪಾಲಿಸಬೇಕು. ಹುಬ್ಬಳ್ಳಿ ಗಬ್ಬೂರ ಕ್ರಾಸದಿಂದ ಧಾರವಾಡದ ನರೇಂದ್ರ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿ ವಿಳಂಬವಾಗುತ್ತಿದೆ. ಅದನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತ ಅವಕಾಶ ನೀಡಬೇಕೆಂದು ಅವರು ತಿಳಿಸಿದರು.
ಬೈಪಾಸ್ ರಸ್ತೆಯಲ್ಲಿ ಅಪಘಾತಗಳು ಆಗದಂತೆ ಎಚ್ಚರಿಕೆ ವಹಿಸಿ. ಬೈಪಾಸ್ ರಸ್ತೆಯ ಪಕ್ಕದಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮೆರಾ, ಸೈನೆಜ್ ಬೋರ್ಡ ಮತ್ತು ಎಚ್ಚರಿಕೆ ಸಂದೇಶಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಿ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಮಹಾನಗರ ಪೆÇಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಮಾತನಾಡಿ, ಮಹಾನಗರ ವ್ಯಾಪ್ತಿಯಲ್ಲಿ ಬರುವ ಸಂಭವನಿಯ ಅಪಘಾತ ಸ್ಥಳಗಳನ್ನು ಗುರುತಿಸುವ ಕುರಿತು ಸಮೀಕ್ಷೆ ಮಾಡಿ, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ. ಈ ಕುರಿತು ಅಭಿವೃದ್ಧಿ ಕ್ರಮ ಜರುಗಿಸಬೇಕೆಂದು ಅವರು ಹೇಳಿದರು.
ಹುಬ್ಬಳ್ಳಿ ನಗರದಲ್ಲಿ ಮೇಲಸೇತುವೆ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಲು ಲೋಕೋಪಯೋಗಿ ಇಲಾಖೆ ಮುತುವರ್ಜಿ ವಹಿಸಬೇಕು. ಕಾಮಗಾರಿ ವಿಳಂಬದಿಂದ ಜನ ಸಾಮಾನ್ಯರ ಜೀವಕ್ಕೆ ಅಪಾಯವಾದರೆ ಸಂಬಂಧಿಸಿದವರ ಮೇಲೆ ಅಗತ್ಯ ಕಾನೂನು ಕ್ರಮ ಜರುಗಿಸುವುದಾಗಿ ಅವರು ತಿಳಿಸಿದರು.
ರಸ್ತೆ ಸಾರಿಗೆ ಪ್ರಾಧಿಕಾರ ಸಭೆ: ಪ್ರತಿ ವರ್ಷದಂತೆ ನವೆಂಬರ್ ಮಾಹೆಯಲ್ಲಿ ವಾಯುಮಾಲಿನ್ಯ ಮಾಸಾಚರಣೆಯನ್ನು ಸಾರಿಗೆ ಇಲಾಖೆ ವತಿಯಿಂದ ಆಚರಿಸಲಾಗುತ್ತಿದ್ದು, ಅದರಂತೆ ಈ ವರ್ಷವು ನವೆಂಬರ್ ಮಾಹೆಯಲ್ಲಿ ವಾಯುಮಾಲಿನ್ಯ ಮಾಸಾಚರಣೆ ಆಚರಿಸಲಾಗುತ್ತಿದೆ ಎಂದು ರಸ್ತೆ ಸಾರಿಗೆ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಇಂದು ಮುಂಜಾನೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ ಸಾರಿಗೆ ಪ್ರಾಧಿಕಾರದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ವಾಯುಮಾಲಿನ್ಯ ಮಾಸಾಚರಣೆ ನಿಮಿತ್ಯ ಎಲ್ಲಾ ವರ್ಗದ ವಾಹನಗಳ ವಾಯುಮಾಲಿನ್ಯ ನಿಯಂತ್ರಣದಲ್ಲಿರುವ ಕುರಿತಂತೆ ಮಾಹೆಯಾದ್ಯಂತ ನಿರಂತರವಾಗಿ ತಪಾಸಣೆಯನ್ನು ಸಾರಿಗೆ ಇಲಾಖೆಯ ಮೂಲಕ ಜರುಗಿಸಲಾಗುತ್ತದೆ. ವಿವಿಧ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ವಾಯುಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿಷಯ ಪರಿಣಿತರಿಂದ ಉಪನ್ಯಾಸ ಏರ್ಪಡಿಸುವುದು, ಭಿತ್ತಿ ಪತ್ರಗಳ ವಿತರಣೆ, ಕರಪತ್ರಗಳ ವಿತರಣೆ, ಜಿಲ್ಲೆಯಾದ್ಯಂತ ಪ್ರಮುಖ ಸ್ಥಳಗಳಲ್ಲಿ ಬ್ಯಾನರ್ಗಳ ಪ್ರದರ್ಶನ, ಸ್ಟಿಕ್ಕರ್ ಪ್ರದರ್ಶನ ಕೈಗೊಳ್ಳಲಾಗುವುದು. ಶಾಲಾ ಕಾಲೇಜು ಮಕ್ಕಳಿಗೆ ನಿಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಅವರು ಮಾತನಾಡಿ, 2023-2024 ನೇ ಸಾಲಿನಲ್ಲಿ ಮಾರ್ಚ್ 2024 ರಂತ್ಯಕ್ಕೆ 1,132 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ ರೂ.26,86,500 ದಂಡ ವಸೂಲಿ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಕ್ಟೋಬರ್ 2024ರ ಅಂತ್ಯದವರೆಗೆ 718 ವಾಹನಗಳ ಮೇಲೆ ಪ್ರಕರಣ ದಾಖಲಿಸಿ ರೂ.17,29,500 ದಂಡವನ್ನು ವಸೂಲಿ ಮಾಡಲಾಗಿದೆ. ಮೋಟಾರು ವಾಹನ ಕಾಯ್ದೆ 1988 ರ ಕಲಂ 200 ರನ್ವಯ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ರೂ.1,500 ಮತ್ತು ಇನ್ನುಳಿದಂತೆ ಎಲ್ಲಾ ವಾಹನಗಳಿಗೆ ರೂ.3,000 ದಂಡ ವಿಧಿಸಲಾಗುತ್ತಿದೆ. ಹುಬ್ಬಳ್ಳಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಒಟ್ಟಾರೆ 31 ಅಧಿಕೃತ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ವಾಹನ ಮಾಲೀಕರು ತಮ್ಮ ವಾಹನವನ್ನು ಸುಸ್ಥಿತಿಯಲ್ಲಿಟ್ಟುಕೊಂಡು ವಾಯುಮಾಲಿನ್ಯ ನಿಯಂತ್ರಣದಲ್ಲಿರುವ ಬಗ್ಗೆ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಿಂದ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪೆÇಲೀಸ್ ಅಧೀಕ್ಷಕ ಡಾ. ಗೋಪಾಲ್ ಬ್ಯಾಕೋಡ, ಉಪ ಪೆÇಲೀಸ್ ಆಯುಕ್ತ ಸಿ.ಆರ್.ರವೀಶ, ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರು ಸಭೆಯಲ್ಲಿ ಮಾತನಾಡಿ, ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಪ್ರಶಾಂತ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ, ನೂರ ಮಹಮ್ಮದ ಬಾಷಾ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮಹಾನಗರ ಪಾಲಿಕೆ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
****

ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ಆಯ್ಕೆ

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ