15th November 2024

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಬೆಳಗಾವಿ ನ.08 2024-25ನೇ ಸಾಲಿಗೆ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತ್ತಕೋತ್ತರ ಪದವಿ ಹೊಂದಿದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಂದ ಬೆಳಗಾವಿ ಜಿಲ್ಲಾ ವಾರ್ತಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಪರಿಶಿಷ್ಟ ಜಾತಿಯ-1 ಹಾಗೂ ಪ.ಪಂಗಡದ-1 ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಸೈಫೆಂಡ್ ನೀಡಲಾಗುವುದು. ತರಬೇತಿಯು 2025 ರ ಜನವರಿಯಿಂದ ಡಿಸೆಂಬರ್ ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಆಸಕ್ತ ಅಭ್ಯರ್ಥಿಗಳು ನ.25 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನ್ಯಾಯಾಲಯ ಆವರಣ, ಬೆಳಗಾವಿ ಇವರನ್ನು (ಮೊಬೈಲ್ ಸಂಖ್ಯೆ 9448589639)ಗೆ ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*****

ಎಡನೀರು ಶ್ರೀಗಳಿಂದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ವಿದ್ಯುತ್ವ ಚಾಲನೆ......!

ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ