4th December 2024

ವಿಷಯ:- ರಾಜ್ಯದ ವಿವಿಧ ವಿಶ್ವ ವಿದ್ಯಾಲಯಗಳು UUCMS ತಂತ್ರಾಂಶದ ದೋಷಗಳನ್ನು ಸರಿಪಡಿಸುವ ಕುರಿತು.
ಮಾನ್ಯರೇ,
ಈ ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಪ್ರತಿಷ್ಠಿತ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ, UUCMS ತಂತ್ರಾಂಶದಲಿ.. ಬಹಳ ದೋಷಗಳಿಂದ ವಿಧ್ಯಾರ್ಥಿಗಳ ಪರದಾಡುವಂತಹ ಸ್ಥಿತಿಗೆ ಬಂದಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳ ಪ್ರಥಮ, ತೃತೀಯ ಹಾಗೂ ಪದನೇ ಸೆಮಿಸ್ಟರ ಡಿಸೆಂಬರ್ ನಲಿ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಪರೀಕ್ಷಾ ಅರ್ಜಿ ತುಂಬುತ್ರಿದ್ದಾರೆ ವಿಧ್ಯಾರ್ಥಿಗಳ ಖಾತೆಯಿಂದ ಹಣ ಪಾವತಿಯಾಗುತ್ತಿದೆ ಆದರೆ ಅರ್ಜಿ ಸಲಿ..ಕೆ ಆಗದೆ ವಿದ್ಯಾರ್ಥಿಗಳು ಚಿಂತೆಗೀಡಾಗುತ್ತಿದ್ದಾರೆ. ನಿಮ್ಮ ಅರ್ಜಿ ಫೇಲ್ ಎಂಬ ಸಂದೇಶದಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದಾ_ರೆ.
ಈಗಾಗಲೇ RCU ನ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲೆಗಳ ಪದವಿ ಕಾಲೇಜುಗಳ ಪರೀಕ್ಷಾ ಅರ್ಜಿ UUCMS ವೆಬ್ ಸೈಟ್ ನಲಿ.. ಅರ್ಜಿ ತುಂಬುವ ಪ್ರಕ್ರಿಯೆ ಶುರುವಾಗಿದೆ.ಆದರೆ ಬಹುತೇಕ ವಿದ್ಯಾರ್ಥಿಗಳ ಖಾತೆಯಿಂದ ಹಣ ಜಮೆಯಾಗಿದೆ ಆದರೆ ಸರಿಯಾದ ಅರ್ಜಿ ಯಶಸ್ವಿ ಆಗಿರುವ ಸಂದೇಶ ಬರುತ್ತಿಲ್ಲ ವಿದ್ಯಾರ್ಥಿಗಳು ಕಾಲೇಜಿನಲಿ ಕೇಳಿದರೆ ವಿಶ್ವವಿದ್ಯಾಲಯದಲ್ಲಿ ಕೇಳಿ ಎಂದು ಹೇಳುತ್ತಾರೆ ವಿಜಯಪುರ, ಬಾಗಲಕೋಟೆಯಿಂದ ಬಂದ ವಿದ್ಯಾರ್ಥಿಗಳು RCU ವಿಶ್ವವಿದ್ಯಾಲಯದಲ್ಲಿ ಕೇಳಿದರೆ ಶುಲ್ಕ ಮತ್ತೊಮ್ಮೆ ಪಾವತಿಸಿ ಎಂದು ಇಲ್ಲವೇ UUCMS ಬಳಿ ಹೋಗಿ ಕೇಳಿ ಎಂದು ಹೇಳುತ್ತಿದ್ದಾರೆ ಈ ಎಲ್ಲ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಈಡಾಗಿದ್ದಾರೆ ಆದ್ದರಿಂದ ಈ ಪರೀಕ್ಷಾ ಶುಲ್ಕ ಸೇರಿದಂತೆ ಇತರೆ ಶುಲ್ಕಗಳನ್ನು ತಮ್ಮ ಕಾಲೇಜು ಹಂತದಲ್ಲಿ,, ಆನ್ ಲೈನ್ ವ್ಯವಸ್ಥೆ ರದ್ದುಗೊಳಿಸಿ ಆಫ್ ಲೈನ್ ತುಂಬುವ ವ್ಯವಸ್ಥೆ ಮಾಡಬೇಕು ಇಲ್ಲವೇ ಈ ಸಮಸ್ಯೆಯನ್ನು ವಿಶ್ವವಿದ್ಯಾಲಯ ಮತ್ತು ಸರಕಾರ ಕೂಡಲೇ ಪರಿಹರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದೆ ಹೋದಲ್ಲಿ, ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲಾಗುವುದು' ಎಂದು ಈ ಮೂಲಕ ಎಚ್ಚರಿಕೆಯನ್ನು ನೀಡಲಾಗುತ್ತಿದೆ.

"ಗಡಿನಾಡಿನಲ್ಲಿ ಕಾಸರಗೋಡು ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ" ಎಲ್. ಜಿ.ಜ್ಯೋತಿಶ್ವರ ಅಭಿಮತ