6th December 2024

ಬೆಳಗಾವಿ: ಭಾರತದಲ್ಲಿ ರಾಜಕೀಯ ಸಮಾನತೆ ಜೊತೆಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆಗಳು ಪೂರ್ಣ ಪ್ರಮಾಣದಲ್ಲಿ ಜಾರಿಗೊಂಡಾಗ ಮಾತ್ರ ಡಾ. ಬಿ ಆರ್ ಅಂಬೇಡ್ಕರ್ ಅವರ ಕನಸು ನನಸಾಗುವುದು ಎಂದು ಡಾ. ಸಾವುಕಾರ ಕಾಂಬಳೆ ಅಭಿಪ್ರಾಯಪಟ್ಟಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡ ಡಾ. ಬಿಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಡಾ. ಬಿ ಆರ್ ಅಂಬೇಡ್ಕರ್ ಅವರು ಕೇವಲ ದಲಿತರಿಗೆ ಮೀಸಲಾದ ನಾಯಕರಲ್ಲ ಅವರೊಬ್ಬ ರಾಷ್ಟ್ರ ನಾಯಕರು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನತೆಯನ್ನು ಕಲ್ಪಿಸಿದ ಧೀಮಂತ ವ್ಯಕ್ತಿ ಎಂದು ಅಂಬೇಡ್ಕರ್ ಅವರ ಅಂತಿಮ ದಿನಗಳು ಹಾಗೂ ಅವರ ಕನಸುಗಳನ್ನು ಕನಸುಗಳ ಬಗ್ಗೆ ಮಾತನಾಡುತ್ತಾ ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಡಾ. ಅರ್ಜುನ್ ಜಂಬಿಗಿ ಅವರು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಿದರು.
ಕಾರ್ಯಕ್ರಮವನ್ನು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಲ್ಲೇಶ್ ದೊಡ್ಡಲಕ್ಕನ್ನವರ ನಿರೂಪಿಸಿದರು. ಡಾ. ಶ್ರೀಕಾಂತ್ ಮುಚ್ಚಂಡಿ ಸ್ವಾಗತಿಸಿ ಶಿವಾನಂದ್ ಕಾಂಬಳೆ ಅವರು ವಂದಿಸಿದರು
ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು

ಎಡನೀರು ಶ್ರೀಗಳಿಂದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ವಿದ್ಯುತ್ವ ಚಾಲನೆ......!

ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ